ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಷ್ಟು ಕಾಲ ಜನಸ್ನೇಹಿಯಾಗಿ ಕೆಲಸ ಮಾಡಿದರೆ ಮಾತ್ರ ಜನಮನದಲ್ಲಿ ಉಳಿಯಲು ಸಾಧ್ಯ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಚನ್ನೇಗೌಡ ಹೇಳಿದರು. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪಿಎಸ್‍ಐ ರಾಮಚಂದ್ರಪ್ಪ ಅವರಿಗೆ ಬೀಳ್ಕೊಡುಗೆ ಸನ್ಮಾನ ನೀಡಿ ಮಾತನಾಡಿದ ಅವರು, ಸದಾ ಜಾಗೃತರಾಗಿರಬೇಕಿರುವ ಇಲಾಖೆಗೆ ನಿವೃತ್ತರಾಗುತ್ತಿರುವ ಸಿಬ್ಬಂದಿ ಸಹಕಾರವೂ ಅಗತ್ಯ. ಅವರ ಅನುಭವವನ್ನು ಸದಾಕಾಲ ಇಲಾಖೆಗೆ ಹಂಚಿಕೊಳ್ಳಬೇಕು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ

ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಷ್ಟು ಕಾಲ ಜನಸ್ನೇಹಿಯಾಗಿ ಕೆಲಸ ಮಾಡಿದರೆ ಮಾತ್ರ ಜನಮನದಲ್ಲಿ ಉಳಿಯಲು ಸಾಧ್ಯ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಚನ್ನೇಗೌಡ ಹೇಳಿದರು.

ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪಿಎಸ್‍ಐ ರಾಮಚಂದ್ರಪ್ಪ ಅವರಿಗೆ ಬೀಳ್ಕೊಡುಗೆ ಸನ್ಮಾನ ನೀಡಿ ಮಾತನಾಡಿದ ಅವರು, ಸದಾ ಜಾಗೃತರಾಗಿರಬೇಕಿರುವ ಇಲಾಖೆಗೆ ನಿವೃತ್ತರಾಗುತ್ತಿರುವ ಸಿಬ್ಬಂದಿ ಸಹಕಾರವೂ ಅಗತ್ಯ. ಅವರ ಅನುಭವವನ್ನು ಸದಾಕಾಲ ಇಲಾಖೆಗೆ ಹಂಚಿಕೊಳ್ಳಬೇಕು ಎಂದು ಹೇಳಿದರು.

ಸಬ್ ಇನ್ಸ್‌ಪೆಕ್ಟರ್ ವಿಜಯಕುಮಾರಿ ಮಾತನಾಡಿ, ಜನರ ಬವಣೆಗಳಿಗೆ ಇಲಾಖೆ ಅಧಿಕಾರಿಗಳು ಕಾನೂನು ರೀತಿಯಲ್ಲಿ ನ್ಯಾಯಯುತ ಸ್ಪಂದನೆ ನೀಡಿದಾಗ ಸಮಾಜ ಹಾಗೂ ಜನರು ತಪ್ಪು ದಾರಿಗಿಳಿಯುವುದಿಲ್ಲ. ಜನರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಣಬೇಕಾಗಿದೆ. ಪೊಲೀಸ್ ಇಲಾಖೆಯಲ್ಲಿ ಸೇವಾ ಮನೋಭಾವ ಮತ್ತು ಧೈರ್ಯವಿದ್ದಲ್ಲಿ ಯಶಸ್ಸು ಸಾಧ್ಯ. ಕರ್ತವ್ಯ ನಿಷ್ಠೆಯಿಂದ ಸೇವೆ ಮಾಡಬೇಕು ಎಂದರು.

ನಿವೃತ್ತ ಪಿಎಸ್‍ಐ ರಾಮಚಂದ್ರಪ್ಪ ಮಾತನಾಡಿ, ಸಾರ್ವಜನಿಕರ ಸೇವೆ ಮಾಡಲು ಪೊಲೀಸ್ ಇಲಾಖೆ ನಮಗೆ ದೊಡ್ಡ ಅವಕಾಶ ನೀಡಿತ್ತು. ಈ ಅವಕಾಶವನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಜನರ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿರುವ ಆತ್ಮತೃಪ್ತಿಯಿದೆ. ಕೇವಲ ಒಬ್ಬರು, ಇಬ್ಬರಿಂದ ಸಾಧ್ಯವಾಗಲ್ಲ, ಇಲಾಖೆಯ ಮೇಲಧಿಕಾರಿಗಳ ಮಾರ್ಗದರ್ಶನ, ಸಿಬ್ಬಂದಿ ಸಹಕಾರದಿಂದ ಮಾತ್ರ ನಾವು ಏನು ಬೇಕಾದರೂ ಸಾಧನೆ ಮಾಡಬಹುದಾಗಿದೆ. ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಸಹಕಾರ ನೀಡಿದ ಮೇಲಧಿಕಾರಿಗಳಿಗೆ ಸಿಬ್ಬಂದಿ ವರ್ಗದವರಿಗೆ ಧನ್ಯವಾದ ತಿಳಿಸಿದರು.

ಸಭೆಯಲ್ಲಿ ತ್ಯಾಮಗೊಂಡ್ಲು ಪೊಲೀಸ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.