ಒಂದು ದೇಶ ಒಂದು ಚುನಾವಣೆ ಕ್ರಾಂತಿಕಾತಿ ಹೆಜ್ಜೆ

| Published : Sep 20 2024, 01:39 AM IST

ಸಾರಾಂಶ

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ಒಂದು ದೇಶ, ಒಂದು ಚುನಾವಣೆ ನಿರ್ಣಯ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಚುನಾವಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ 2ನೇ ಹಂತದಲ್ಲಿ ಜಿಪಂ, ತಾಪಂ, ಗ್ರಾಪಂ, ಪುರಸಭೆ ಮತ್ತಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉದ್ದೇಶವಿದೆ ಹಾಗೂ ಇದಕ್ಕೆ ಒಂದೇ ಮತದಾರರ ಪಟ್ಟಿ ಬಳಕೆಗೆ ಅವಕಾಶವಿದೆ.

ರಾಜಕೀಯ ಪಕ್ಷಗಳು, ಚುನಾವಣೆ ಸ್ಪರ್ಧಿಗಳು, ಸಾವಿರಾರು ಕೋಟಿ ಹಣ ಖರ್ಚು ಮಾಡಬೇಕಾಗುತ್ತಿತ್ತು. ದೇಶದ ಹಣ ಉಳಿಸಿ ಅದನ್ನು ಅಭಿವೃದ್ಧಿಗೆ ಬಳಸಬೇಕು, ಬಹಳ ವೆಚ್ಚದಾಯಕ ಚುನಾವಣೆ ಕಡಿಮೆ ವೆಚ್ಚದಾಯಕ ಚುನಾವಣೆಯನ್ನಾಗಿ ಮಾಡಬೇಕು ಎಂಬ ದೂರದೃಷ್ಟಿಯ ನಿರ್ಧಾರವಾಗಿದೆ. 1951, 1967ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆದಿತ್ತು. ಕಾನೂನು ಆಯೋಗ 1999ರ ತನ್ನ 170ನೇ ವರದಿಯಲ್ಲಿ 5 ವರ್ಷಗಳಿಗೆ ಒಮ್ಮೆ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಕುರಿತು ತಿಳಿಸಿತ್ತು ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ವರದಿಯಲ್ಲಿರುವ ಅಂಶಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.