ತಂಬಾಕು ಬೆಳೆಗೆ ಪರ್ಯಾಯ ಬೆಳೆ ಪದ್ಧತಿ ಕುರಿತು ಒಂದು ದಿನದ ಹೊರಾಂಗಣ ತರಬೇತಿ

| Published : Aug 08 2025, 01:00 AM IST

ಸಾರಾಂಶ

ಹುಣಸೂರು ತಾಲೂಕಿನ ಗೌಡಗೆರೆ ಹೋಬಳಿಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಕಾವ್ಯಾ ಮಾತನಾಡಿ, ಕೃಷಿ ಇಲಾಖೆಯಲ್ಲಿ ದೊರೆಯುವ ಸವಲತ್ತುಗಳ ಬಗ್ಗೆ ಹಾಗೂ ರೈತ ಸಂಪರ್ಕ ಕೇಂದ್ರದಿಂದ ವಿವಿಧ ಯೋಜನೆಗಳಡಿ ವಿತರಿಸಲಾಗುವ ಕೃಷಿ ಪರಿಕರಗಳು ಹಾಗೂ ದುರೆಯುವ ಸವಲತ್ತುಗಳನ್ನು ಪಡೆಯಲು ರೈತರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಾಗನಹಳ್ಳಿ ವತಿಯಿಂದ 2025-26ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹುಣಸೂರು ತಾಲೂಕಿನ ಗೌಡಗೆರೆ ಹೋಬಳಿಯ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ತಂಬಾಕು ಬೆಳೆಗೆ ಪರ್ಯಾಯ ಬೆಳೆ ಪದ್ಧತಿ ಕುರಿತು ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಉಪ ಕೃಷಿ ನಿರ್ದೇಶಕ ಕೆ. ನಾಗರಾಜ್ ಅವರು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಾಕ್ರಮಗಳ ಸವಿವರವಾದ ಮಾಹಿತಿಯೊಂದಿಗೆ ರೈತರಿಗೆ ಪರ್ಯಾಯ ಬೆಳೆ ಪದ್ಧತಿಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ತಿಳಿಸಿದರು. ನಿವೃತ್ತ ಹಿರಿಯ ವಿಜ್ಞಾನಿ ಡಾ. ಮಹದೇವಸ್ವಾಮಿ ಮಾತನಾಡಿ, ಗ್ರಾಮದಲ್ಲಿ ಹಾಲಿ ಬೆಳೆ ಪರಿಸ್ಥಿತಿ ಬಗ್ಗೆ ರೈತರೊಂದಿಗೆ ಚರ್ಚಿಸಿ ತಂಬಾಕು ಬೆಳೆಯಲ್ಲಿ ನಿಗಧಿತ ಇಳುವರಿ ಬಾರದಿರುವ ಬಗ್ಗೆ ರೈತರು ತೋರಿಸಿದ ಇಂಗಿತಕ್ಕೆ ರೈತರು ಅನುಸರಿಸುತ್ತಿರುವ ತಪ್ಪು ಕ್ರಮಗಳ ಕುರಿತು ಮಾಹಿತಿ ನೀಡಿದರು.

ಹುಣಸೂರು ತಾಲೂಕಿನ ಗೌಡಗೆರೆ ಹೋಬಳಿಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಕಾವ್ಯಾ ಮಾತನಾಡಿ, ಕೃಷಿ ಇಲಾಖೆಯಲ್ಲಿ ದೊರೆಯುವ ಸವಲತ್ತುಗಳ ಬಗ್ಗೆ ಹಾಗೂ ರೈತ ಸಂಪರ್ಕ ಕೇಂದ್ರದಿಂದ ವಿವಿಧ ಯೋಜನೆಗಳಡಿ ವಿತರಿಸಲಾಗುವ ಕೃಷಿ ಪರಿಕರಗಳು ಹಾಗೂ ದುರೆಯುವ ಸವಲತ್ತುಗಳನ್ನು ಪಡೆಯಲು ರೈತರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.ಗ್ರಾಪಂ ಅಧ್ಯಕ್ಷೆ ಮಣಿಯಮ್ಮ, ಪಿಡಿಒ ಶಿಲ್ಪಾ, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಎಲ್. ಮಾಲತಿ ಇದ್ದರು.