ಸಾರಾಂಶ
ಬಳ್ಳಾರಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಓಬಲರೆಡ್ಡಿ (35) ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದು, ಕಾರಿನ ಚಾಲಕ ಸುನೀಲ್ ಮತ್ತು ದಿವ್ಯ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ದಾಬಸ್‍ಪೇಟೆ: ಕೆಎಸ್ಆರ್‌ಟಿಸಿ ಬಸ್ಸಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾ.ಹೆ. 48ರ ತೊಣಚಿನಕುಪ್ಪೆ ಗ್ರಾಮದ ಪ್ರವಾಸಿ ಡಾಬಾ ಬಳಿ ನಡೆದಿದೆ.
ಬಳ್ಳಾರಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಓಬಲರೆಡ್ಡಿ (35) ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದು, ಕಾರಿನ ಚಾಲಕ ಸುನೀಲ್ ಮತ್ತು ದಿವ್ಯ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯಿಂದ ಪಾರಾಗಿದ್ದಾರೆ.ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಕೆಎಸ್ ಆರ್ ಟಿ ಬಸ್ಸಿಗೆ ಕಾರಿನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಉದ್ಯಮಿಗೆ ಗಂಭೀರವಾದ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ನೆಲಮಂಗಲ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ.ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸ್ ಇನ್ಸ್ ಪೆಕ್ಟರ್ ರವಿ ಭೇಟಿ ನೀಡಿ ಪರಿಶೀಲಿಸಿ ಮೃತದೇಹವನ್ನು ನೆಲಮಂಗಲ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೋಟೋ 5 : ಅಪಘಾತ ನಡೆದ ಸ್ಥಳಕ್ಕೆ ಸಂಚಾರಿ ಪೊಲೀಸ್ ಇನ್ಸ್ ಪೆಕ್ಟರ್ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.