ಸಾರಾಂಶ
ಮುಂದುವರಿದ ಗೋ ಬ್ಯಾಕ್ ಶೋಭಕ್ಕ ಅಭಿಯಾನಕನ್ನಡಪ್ರಭವಾರ್ತೆ ಚಿಕ್ಕಮಗಳೂರುಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ, ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಶೋಭಕ್ಕ ಅಭಿಯಾನ ಮುಂದುವರಿದಿದೆ.ಶೋಭಾ ಕರಂದ್ಲಾಜೆ ಅವರು ಈ ಬಾರಿಯೂ ಸ್ಪರ್ಧೆ ಮಾಡುತ್ತಾರೆ, ಗೆದ್ದೇ ಗೆಲ್ಲುತ್ತಾರೆಂದು ಮಾಜಿ ಸಿ.ಎಂ. ಯಡಿಯೂರಪ್ಪ ಅವರು ಹೇಳಿದರೂ ಕೂಡ ಶೋಭಾ ಕರಂದ್ಲಾಜೆ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಅಭಿಯಾನ ಮುಂದುವರಿದಿದೆ.ಪತ್ರ ಅಭಿಯಾನ ನಡೆಸಿದ್ದವರು, ಗುರುವಾರ ಒಂದು ಹೆಜ್ಜೆ ಮುಂದೆ ಹೋಗಿ ಸಾಮಾಜಿಕ ಜಾಲ ತಾಣವನ್ನು ಬಳಸಿಕೊಂಡಿದ್ದಾರೆ. ಕಳೆದ ಬಾರಿಗಿಂತ ಹೆಚ್ಚು ಮತಗಳಲ್ಲಿ ಗೆಲ್ಲುವುದು ಖಚಿತ ಎಂದು ಯಡಿಯೂರಪ್ಪ ಅವರು ಚಿಕ್ಕಮಗಳೂರಿನಲ್ಲಿ ಹೇಳಿ ಹೋದ ನಂತರ ಒಂದು ಲಕ್ಷ ನೋಟಾ ವೋಟ್ ಹಾಕಲಾಗುವುದು ಎಂದು ಹೇಳುವ ಮೂಲಕ ಅವರಿಗೆ ಒಂದು ಲಕ್ಷ ಮತಗಳು ಕಡಿಮೆಯಾಗಲಿವೆ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ.ಮೋದಿ ಹೆಸರಿನಲ್ಲಿ ಗೆದ್ದು ಮೋದಿಯವರಿಗೆ ಕಳಂಕ ಆಗಿರುವ ಶೋಭಕ್ಕನ ವಿರುದ್ಧ ಸ್ವಚ್ಛ ಭಾರತ ಮಿಷನ್ ಪ್ರಾರಂಭ ಮಾಡಿರುವ ಸನಾತನಗಳು ನಾವು ಎಂದು ಸನಾತನ ಹಿಂದುತ್ವ ಫೇಸ್ ಬುಕ್ ಪೇಜ್‌ನಲ್ಲಿ ಶೋಭಾ ಕರಂದ್ಲಾಜೆ ವಿರೋಧಿಗಳು ಹೇಳಿಕೊಂಡಿದ್ದಾರೆ.ಶೋಭಾ ಕರಂದ್ಲಾಜೆ ಮಾತ್ರ ಅಲ್ಲ, ಅವರೊಂದಿಗೆ ಗುರುತಿಸಿಕೊಂಡಿರುವ ಪಕ್ಷದ ಕಾರ್ಯಕರ್ತರ ವಿರುದ್ಧವೂ ಹರಿ ಹಾಯ್ದಿದ್ದಾರೆ.