ಕುಶಾಲನಗರ: ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಕಾರ್ಯಕ್ರಮ

| Published : Nov 19 2024, 12:47 AM IST

ಕುಶಾಲನಗರ: ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ, ನದಿ ತಟಗಳಲ್ಲಿ ಸಾಲು ದೀಪಗಳನ್ನು ಬೆಳಗಿಸಲಾಯಿತು. ಸಾಮೂಹಿಕ ದೀಪ ಪೂಜೆಯ ಸಂದರ್ಭದಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಹಿಂದು ಜನಜಾಗೃತಿ ಸಮಿತಿ ಆಶ್ರಯದಲ್ಲಿ ಕಾರ್ತಿಕ ಹುಣ್ಣಿಮೆಗೆ ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಕಾರ್ಯಕ್ರಮ ಕುಶಾಲನಗರ ದೇವಾಲಯ ಮತ್ತಿತರ ಕಡೆಗಳಲ್ಲಿ ಸಾಲು ದೀಪೋತ್ಸವ ಆಚರಣೆ ಮೂಲಕ ನಡೆಯಿತು.

ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ, ನದಿ ತಟಗಳಲ್ಲಿ ಸಾಲು ದೀಪಗಳನ್ನು ಬೆಳಗಿಸಲಾಯಿತು.

ಈ ಸಂದರ್ಭ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಪ್ರಮುಖರಾದ ಶ್ರೀಲಕ್ಷ್ಮೀ, ಹಿಂದೂ ರಾಷ್ಟ್ರದ ಸಂಕಲ್ಪದ ಉದ್ದೇಶದಿಂದ ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಈ ಉಪಕ್ರಮದ ಮೂಲಕ ಹಿಂದೂ ಜನಜಾಗೃತಿ ಸಮಿತಿಯಿಂದ ದೇಶಾದ್ಯಂತ ಜನಜಾಗೃತಿ ಮೂಡಿಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕುಶಾಲನಗರ, ಗೋಣಿಕೊಪ್ಪ, ಮೂರ್ನಾಡು, ಸೋಮವಾರಪೇಟೆಯಲ್ಲಿ ಏಕಕಾಲದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಸಮಿತಿ, ದೇವಸ್ಥಾನಗಳ ಆಡಳಿತ ಮಂಡಳಿ ಮುಂತಾದ ಸಂಘಟನೆಯ ಪ್ರತಿನಿಧಿಗಳ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು ಎಂದು ಹೇಳಿದರು.

ಸಾಮೂಹಿಕ ದೀಪ ಪೂಜೆಯ ಸಂದರ್ಭದಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಮಾಡಲಾಯಿತು.