ಸಾರಾಂಶ
ಸಂಸತ್ತು 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಹಾಗೂ ಜಮ್ಮು- ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಭಾರತದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದು ಸೋಮವಾರ ಮಹತ್ವದ ತೀರ್ಪು ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಸಂಸತ್ತು 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಹಾಗೂ ಜಮ್ಮು- ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಭಾರತದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದು ಸೋಮವಾರ ಮಹತ್ವದ ತೀರ್ಪು ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.ಈ ಕುರಿತು ಸೋಮವಾರ ಪ್ರಕಟಣೆ ನೀಡಿದ ಅವರು, ಜಮ್ಮು ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದುಗೊಳಿಸಿದ್ದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು, ಈ ನಿರ್ಧಾರಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ದೇಶದೊಳಗೆ ಎಲ್ಲ ರಾಜ್ಯಗಳಿಗೂ ಒಂದೇ ಕಾನೂನು ಇರಬೇಕೆಂಬ ನಮ್ಮ ನಿಲುವಿಗೆ ನ್ಯಾಯಾಲಯ ಸಮ್ಮತಿ ಸೂಚಿಸಿದ್ದು ಸಂತಸದ ವಿಷಯ.
ಆಗಸ್ಟ್ 5, 2019 ರಂದು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಮುಂದಿನ ವರ್ಷ ಸೆಪ್ಟೆಂಬರ್ 30 ರೊಳಗೆ ಕೇಂದ್ರಾಡಳಿತ ಪ್ರದೇಶದ ಅಸೆಂಬ್ಲಿಗೆ ಚುನಾವಣೆ ನಡೆಸುವ ಅಗತ್ಯವನ್ನು ನ್ಯಾಯಾಲಯ ಒತ್ತಿಹೇಳಿದೆ. ಇದೊಂದು ಸಂತಸದ ವಿಷಯ ಎಂದು ತಿಳಿಸಿದ್ದಾರೆ.