೨೦೨೮ ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಜತೆಗೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತೋಗೆಯಲು ನಾವು ಯಾರೊಂದಿಗೂ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ದವಾಗಿದ್ದೇವೆ ಎಂದರು. ರಾಜ್ಯ ಸರ್ಕಾರ ಪ್ರತಿ ತಾಲೂಕಿನ ಅಭಿವೃದ್ದಿಗೆ ೫೧ ಕೋಟಿ ನೀಡುವುದಾಗಿ ಘೋ?ಣೆ ಮಾಡಿದೆ, ಆದರೆ ಕಳೆದ ನಾಲ್ಕು ವರ್ಷಗಳಿಂದ ನಮ್ಮ ತಾಲೂಕಿನ ಅಭಿವೃದ್ದಿಗೆ ಒಂದು ನಯಾ ಪೈಸೆಯನ್ನು ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿ, ಕೆಲವು ಅಧಿಕಾರಿಗಳು ಪ್ರಸ್ತುತ ನಡೆದುಕೊಳ್ಳುತ್ತಿರುವ ರೀತಿ ಸರಿಯಿಲ್ಲ ಎಂದು ಸೂಚ್ಯವಾಗಿ ಎಚ್ಚರಿಕೆ ನೀಡಿದರು.
ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ಕನ್ನಡದ ಸಾಹಿತ್ಯಕ್ಕೆ ಒಟ್ಟು ಎಂಟು ಜ್ಞಾನ ಪೀಠ ಪ್ರಶಸ್ತಿ ಬರಲು ಅಂದಿನ ಸಾಹಿತಿಗಳ ಕೊಡುಗೆ ಅಪಾರವಾದುದು ಎಂಬುದನ್ನು ಸ್ಮರಿಸಬೇಕಾಗುತ್ತದೆ. ಜತೆಗೆ ಕನ್ನಡ ನೆಲ, ಭಾಷೆ ಹಾಗೂ ಸರ್ಕಾರಿ ಶಾಲೆಗಳ ಉಳಿವಿಗಾಗಿ ಸದಾ ಕಂಕಣ ಬದ್ಧರಾಗಿಬೇಕು ಎಂದು ಹೇಳಿದ ಶಾಸಕ ಎಚ್.ಡಿ.ರೇವಣ್ಣ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳನ್ನು ಕೋರಿದರು.ಪಟ್ಟಣದ ಬಯಲು ರಂಗ ಮಂದಿರದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಆಯೋಜಿಸಿದ್ದ ೭೧ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ೨೦೨೮ ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಜತೆಗೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತೋಗೆಯಲು ನಾವು ಯಾರೊಂದಿಗೂ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ದವಾಗಿದ್ದೇವೆ ಎಂದರು. ರಾಜ್ಯ ಸರ್ಕಾರ ಪ್ರತಿ ತಾಲೂಕಿನ ಅಭಿವೃದ್ದಿಗೆ ೫೧ ಕೋಟಿ ನೀಡುವುದಾಗಿ ಘೋ?ಣೆ ಮಾಡಿದೆ, ಆದರೆ ಕಳೆದ ನಾಲ್ಕು ವ?ಗಳಿಂದ ನಮ್ಮ ತಾಲೂಕಿನ ಅಭಿವೃದ್ದಿಗೆ ಒಂದು ನಯಾ ಪೈಸೆಯನ್ನು ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿ, ಕೆಲವು ಅಧಿಕಾರಿಗಳು ಪ್ರಸ್ತುತ ನಡೆದುಕೊಳ್ಳುತ್ತಿರುವ ರೀತಿ ಸರಿಯಿಲ್ಲ ಎಂದು ಸೂಚ್ಯವಾಗಿ ಎಚ್ಚರಿಕೆ ನೀಡಿದರು.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವದಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಯಾರೊಬ್ಬರು ಮರೆಯುವಂತಿಲ್ಲ, ತಾವು ಸಚಿವರಾಗಿದ್ದ ಅವಧಿಯಲ್ಲಿ ಜಿಲ್ಲೆಗೆ ಸಾಕ? ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ತರಲು ಸಾದ್ಯವಾಯಿತೆಂದು ಮನವರಿಕೆ ಮಾಡಿದರು. ರಾಜ್ಯದಲ್ಲಿರುವ ಕೆಪಿಎಸ್ ಶಾಲೆಗಳಿಗೆ ಬೇಕಿರುವ ಶಾಶ್ವತ ಕಟ್ಟಡ ಸೇರಿದಂತೆ ಮೂಲ ಭೂತಸೌಕರ್ಯಗಳನ್ನು ನೀಡುವಲ್ಲಿ ರಾಜ್ಯ ಶಿಕ್ಷಣ ಇಲಾಖೆ ಸಂಪೂರ್ಣ ವಿಫಲವಾಗಿದೆ, ಸರ್ಕಾರಿ ಶಾಲಾ ಕಾಲೇಜುಗಳಿಗೆ ಬೇಕಿರುವ ಶಿಕ್ಷಕರು ಬೋಧಕರ ಕೊರತೆಯನ್ನು ತುಂಬುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು. ಹಾಸನ ಜಿಲ್ಲೆಯ ಅಭಿವೃದ್ದಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗು ತಮ್ಮ ಕೊಡುಗೆ ಇದೆ ಎಂಬುದನ್ನು ಮತ್ತೋಮ್ಮೆ ಬಿಡಿಸಿ ಹೇಳಬೇಕಿಲ್ಲ ಮತ್ತು ಪ್ರಸ್ತುತ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸತ್ತೋಗಿದೆ ಎಂದರು.ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಅವರು ಧ್ವಜಾರೋಹಣ ಹಾಗು ಕನ್ನಡ ಧ್ವಜಾರೋಹಣ ನೇರವೇರಿಸಿ, ಮಾತನಾಡಿದರು ಹಾಗೂ ಉಪನ್ಯಾಸಕ ಬಿ.ಟಿ.ಲೋಕೇಶ್ ಪ್ರಧಾನ ಭಾಷಣ ಮಾಡಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಲಂಕೃತ ವಾಹನದಲ್ಲಿ ನಾಡದೇವತೆ ಶ್ರೀ ಭುವನೇಶ್ವರಿದೇವಿಯ ಭಾವಚಿತ್ರದ ಮೆರವಣಿಗೆ ಜತೆಗೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು ಜತೆಗೆ ಪಥ ಸಂಚಲನದ ಮೂಲಕ ರಾ?ದ್ವಜ ಹಾಗು ಕನ್ನಡ ದ್ವಜಕ್ಕೆ ನಮನ ಸಲ್ಲಿಸಿದರು. ತಾಲೂಕಿನ ಸರ್ಕಾರಿ ಪ್ರೌಡಶಾಲೆಯಲ್ಲಿ ಕಳೆದ ಮಾರ್ಚಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗು ಪಾರಿತೋ?ಕ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಬಿಇಒ ಸೋಮಲಿಂಗೇಗೌಡ, ಸಹಾಯಕ ಕೃಷಿ ಅಧಿಕಾರಿ ಕೆ.ಎಚ್.ಸಪ್ನಾ, ಪಶುವೈದ್ಯ ಡಾ. ತಿಪ್ಪೇಸ್ವಾಮಿ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದೇವರಾಜ್, ಪುರಸಭೆ ಮುಖ್ಯಾಧಿಕಾರಿ ಶಿವಶಂಕರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುನಿರಾಜು, ಸಾಹಿತಿ ಗುಂಜೇವು ಅಣ್ಣಾಜಪ್ಪ, ತಾಲೂಕು ಚುಟುಕು ಸಾಹಿತ್ಯ ಪರಿ?ತ್ ಅಧ್ಯಕ್ಷ ಪ್ರೇಮಾ ಮಂಜುನಾಥ್, ಪುರಸಭೆ ಸಿಬ್ಬಂದಿ ರಮೇಶ್, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.