ಸಾರಾಂಶ
ತರೀಕೆರೆ, ಛಲ, ಗುರಿ ಮತ್ತು ಮಾರ್ಗದರ್ಶನದೊಂದಿಗೆ ಜೀವನದ ಸಾಧನೆಗೆ ದೊಡ್ಡ ಗುರಿ ಇರಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಶ್ರಾವಣ ಸಾಹಿತ್ಯ ಸಂಭ್ರಮ ಉದ್ಘಾಟನಾ ಸಮಾರಂಭ
ಕನ್ನಡಪ್ರಭ ವಾರ್ತೆ, ತರೀಕೆರೆಛಲ, ಗುರಿ ಮತ್ತು ಮಾರ್ಗದರ್ಶನದೊಂದಿಗೆ ಜೀವನದ ಸಾಧನೆಗೆ ದೊಡ್ಡ ಗುರಿ ಇರಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಸೋಮವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತರೀಕೆರೆ, ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು ತರೀಕೆರೆ ಇವರ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ನಡೆದ ಶ್ರಾವಣ ಸಾಹಿತ್ಯ ಸಂಭ್ರಮದ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳಿಗೆ ನನ್ನ ಪ್ರೋತ್ಸಾಹ ಇದೆ. 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆದಿದೆ.ತಿಂಗಳ ಪೂರ್ತಿ ಶ್ರಾವಣ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದಲ್ಲಿ 3 ಸರ್ಕಾರಿ ಶಾಲೆಗಳನ್ನು ಸೇರಿಸಿ ಕೆಪಿಎಸ್ ಶಾಲೆ ಮಾಡಲಾಗುವುದು, ಕೆಪಿಎಸದ ಶಾಲೆಗೆ ಸರ್ಕಾರದಿಂದ ಹೆಚ್ಚು ಅನುದಾನ ದೊರೆಯುತ್ತದೆ. ಎಲ್.ಕೆ.ಜಿಯಿಂದ ಇಂಗ್ಲೀಷ್ ಮೀಡಿಯಂ ಕೂಡ ಪ್ರಾರಂಭಿಸ ಲಾಗುತ್ತದೆ ಎಂದ ಅವರು ಶಾಲೆಗೆ ಒಳ್ಳೆಯ ಹೆಸರು ತರಬೇಕು ಎಂದು ಹೇಳಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಮಾತನಾಡಿ ಶ್ರಾವಣ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಪರಿಣಿತರನ್ನು ಆಹ್ವಾನಿಸಿ ನಿರಂತರ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಶ್ರಾವಣದ ಶುಭ ಘಳಿಗೆಯಲ್ಲಿ ಈ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಕನ್ನಡ ಭಾಷೆ ಉಳಿಸಿ ಬೆಳೆಸಬೇಕು. ಮೌಲ್ಯಗಳನ್ನು ಉಳಿಸಬೇಕು ಎಂದು ಹೇಳಿದರು.ಚಿಕ್ಕಮಗಳೂರು ರಚನಾ ಬಿಲ್ಡರ್ಸ್. ಇಂಜಿನಿಯರ್ ಎಂ.ಎ.ನಾಗೇಂದ್ರ ಜೀವನದ ಮೌಲ್ಯ ಮತ್ತು ಶಿಕ್ಷಣ ವಿಷಯ ಕುರಿತು ಮಾತನಾಡಿ ವಿದ್ಯಾರ್ಥಿಗಳಿಗೆ ಸಾಹಿತ್ಯದ ನಂಟು ಅಗತ್ಯ. ಬದುಕಿನಲ್ಲಿ ಉನ್ನತ ಹೆಜ್ಜೆ ಇಟ್ಟಿರುವವರ ಆತ್ಮಚರಿತ್ರೆ ಓದಬೇಕು. ಕಾಲ ಮತ್ತು ಪರಿಸ್ಥಿತಿಯಲ್ಲಿ ಬದಲಾವಣೆ ಆಗುತ್ತಿದೆ. ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಅವಕಾಶಗಳು ಎಲ್ಲರಿಗೂ ಇರುತ್ತದೆ ಅದನ್ನು ಉಪಯೋಗಿಸಿಕೊಳ್ಳಬೇಕು. ನಿಮ್ಮನ್ನು ನೀವು ರೂಪಿಸಿಕೊಳ್ಳಬೇಕು ಎಂದು ಹೇಳಿದರು.ಶಿವಮೊಗ್ಗ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಿರಿಯ ಉಪನ್ಯಾಸಕ ಡಾ.ಹರಿಪ್ರಸಾದ್ ಜಿ.ವಿ.ವಿದ್ಯಾರ್ಥಿ ಜೀವನದಲ್ಲಿ ಸಾಹಿತ್ಯದ ಪ್ರಭಾವ ಮತ್ತು ಪ್ರೇರಣೆ ವಿಷಯ ಕುರಿತು ಮಾತನಾಡಿ ಸಂತೋಷದ ಹಬ್ಬ ಶ್ರಾವಣ ಮಾಸ, ಸಾಹಿತ್ಯ ವಿದ್ಯಾರ್ಥಿ ಗಳಿಗೆ ಪ್ರೇರಣೆ ನೀಡುತ್ತದೆ, ವೈಜ್ಞಾನಿಕವಾಗಿ ಅಧ್ಯಯನ ಮಾಡುತ್ತೇವೆ. ಸಾಹಿತ್ಯದಲ್ಲಿ ತ್ಯಾಗ ಇರುತ್ತದೆ. ಭಾಷೆ ಯನ್ನು ಕಲಿಸುತ್ತದೆ ಎಂದು ಹೇಳಿದರು.
ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರು ಸಿದ್ದಪ್ಪ ಟಕ್ಕಳಿಕೆ, ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ರಚನಾ ಶ್ರೀನಿವಾಸ್, ಕಸಬಾ ಹೋಬಳಿ ಕಸಾಪ ಅಧ್ಯಕ್ಷ ಡಾ.ಟಿ.ಎನ್. ಜಗದೀಶ್, ಎಚ್.ಸಿ.ಗೋಪಾಲಕೃಷ್ಣ, ತಾಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಸುನಿತ ಕಿರಣ್, ತರೀಕೆರೆ ಪ್ರಕೃತಿಶ್ರೀ ಕಲಾ ಕುಟೀರ ಅಧ್ಯಕ್ಷ ಉಮಾ ಪ್ರಕಾಶ್, ಗಾಯಿತ್ರಿ ರವಿ ದಳವಾಯಿ, ಲತಾ ಗೋಪಾಲಕೃಷ್ಣ ಭಾಗವಹಿಸಿದ್ದರು,-
28ಕೆಟಿಆರ್.ಕೆ.4ಃ ತರೀಕೆರೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ, ಕಸಬಾ ಹೋಬಳಿ ಕಸಾಪ ಅಧ್ಯಕ್ಷ ಡಾ.ಟಿ.ಎನ್. ಜಗದೀಶ್, ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಿರಿಯ ಉಪನ್ಯಾಸಕ ಡಾ.ಹರಿಪ್ರಸಾದ್ ಜಿ.ವಿ. ಎಂ.ಎ.ನಾಗೇಂದ್ರ, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಸುನಿತ ಕಿರಣ್, ಪ್ರಕೃತಿಶ್ರೀ ಕಲಾ ಕುಟೀರ ಅಧ್ಯಕ್ಷ ಉಮಾ ಪ್ರಕಾಶ್, ಪ್ರಾಚಾರ್ಯ ಸಿದ್ದಪ್ಪ ಟಕ್ಕಳಿಕೆ ಇದ್ದರು.