ಸರ್ಕಾರಿ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗಿದ್ದು, ಅದಕ್ಕಾಗಿ ನಮ್ಮಲ್ಲಿ ಆತ್ಮವಿಶ್ವಾಸ ಇರಬೇಕು. ವಿದ್ಯಾರ್ಥಿಗಳು ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಎಂದು ಸವಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹರಿಶಂಕರ್ ಕೆ.ಎಂ. ತಿಳಿಸಿದರು.
ಪುತ್ತೂರು: ಸರ್ಕಾರಿ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗಿದ್ದು, ಅದಕ್ಕಾಗಿ ನಮ್ಮಲ್ಲಿ ಆತ್ಮವಿಶ್ವಾಸ ಇರಬೇಕು. ವಿದ್ಯಾರ್ಥಿಗಳು ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಎಂದು ಸವಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹರಿಶಂಕರ್ ಕೆ.ಎಂ. ತಿಳಿಸಿದರು.ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ವಿವೇಕಾನಂದ ಸ್ಟಡಿ ಸೆಂಟರ್ ಯಶಸ್ ಮತ್ತು ವ್ಯವಹಾರ ಆಡಳಿತ ವಿಭಾಗ ಹಾಗು ಐಕ್ಯೂಎಸಿ ಸಹಯೋಗದಲ್ಲಿ ನಡೆದ ಗೇಟ್ ವೇ ಟು ಗವರ್ನಮೆಂಟ್ ಕೆರಿಯರ್ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೋಂದಣಿ ಮಾಡಿಕೊಂಡು ಪರೀಕ್ಷೆ ಬರೆಯುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಕಾರ್ಯಕ್ರಮದ ವಹಿಸಿದ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಶ್ರೀಕೃಷ್ಣ ಗಣರಾಜ್ ಭಟ್ ಹೇಳಿದರು. ಕಾರ್ಯಕ್ರಮವನ್ನು ಕಾಲೇಜಿನ ವಿಶೇಷ ಅಧಿಕಾರಿ (ಶಿಕ್ಷಕ ಅಭಿವೃದ್ಧಿ) ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಿದ್ಯಾ ಎಸ್. ಸ್ವಾಗತಿಸಿ, ಯಶಸ್ ಘಟಕದ ಸಂಯೋಜಕ ಗೋವಿಂದ ರಾಜ್ ಶರ್ಮ ಅವರು ವಂದಿಸಿ, ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.