ಸಾರಾಂಶ
- ನ್ಯಾಮತಿ ಸರ್ಕಾರಿ ಕಾಲೇಜಿನಲ್ಲಿ ರಕ್ತದಾನ ಶಿಬಿರದಲ್ಲಿ ಎಂ.ಬಿ. ರೇವಣಸಿದ್ದಪ್ಪ - - - ಕನ್ನಡಪ್ರಭ ವಾರ್ತೆ, ನ್ಯಾಮತಿ
ರಕ್ತದಾನದ ಪ್ರಾಥಮಿಕ ಗುರಿ ಒಂದು ಜೀವವನ್ನು ಉಳಿಸುವುದೇ ಆದರೂ, ರಕ್ತದಾನ ಮಾಡುವುದರಿಂದ ರಕ್ತದಾನಿಗಳಿಗೂ ಸಾಕಷ್ಟು ಪ್ರಯೋಜನಗಳಿವೆ ಎಂದು ಕಾಲೇಜಿನ ಉಪನ್ಯಾಸಕ ಎಂ.ಬಿ. ರೇವಣಸಿದ್ದಪ್ಪ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಾವಣಗೆರೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಸಮುದಾಯ ಆರೋಗ್ಯ ಕೇಂದ್ರ ನ್ಯಾಮತಿ, ಆರೋಗ್ಯ ರಕ್ಷಾ ಸಮಿತಿ ಸರ್ವ ಸದಸ್ಯರು, ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ರಕ್ತ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ಸಾಮಾನ್ಯವಾಗಿ ರಸ್ತೆ ಅಪಘಾತದಲ್ಲಿ ರಕ್ತಸ್ರಾವಗೊಂಡ ರೋಗಿಗಳು ಮತ್ತು ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರಿಗೆ ರಕ್ತದ ಅವಶ್ಯಕತೆ ಇರುತ್ತದೆ. ಇಂಥ ಸಂದರ್ಭದಲ್ಲಿ ರಕ್ತದಾನಿಗಳು ನೀಡುವ ರಕ್ತ ಮಹತ್ವ ಪಡೆಯುತ್ತದೆ. ವೈದ್ಯಕೀಯ ಪ್ರಕಾರ ಒಬ್ಬರ ರಕ್ತದಾನದಿಂದ ಮೂರು ಜನರ ಪ್ರಾಣ ಉಳಿಸಬಹುದಾಗಿದೆ ಎಂದು ವಿವರಿಸಿದರು.ಕಾಲೇಜಿನ ಕಲಾ, ವಾಣಿಜ್ಯ, ಬಿಬಿಎ ವಿಭಾಗದ 13 ವಿದ್ಯಾರ್ಥಿಗಳು ದಾವಣಗೆರೆ ಜಿಲ್ಲಾ ಆಸ್ಪತ್ರೆಯ ರಕ್ತ ಭಂಡಾರಕ್ಕೆ ರಕ್ತದಾನ ಮಾಡಿದರು.
ಸ್ವಯಂಪ್ರೇರಿತ ರಕ್ತದಾನ ಕುರಿತು ಕಾಲೇಜಿನ ಉಪನ್ಯಾಸಕರಾದ ಸಂಗಪ್ಪ ಔರಸಂಗ, ಡಾ. ಜಿ.ಆರ್. ರಾಜಶೇಖರ್, ಜ್ಯೋತಿ ಎನ್., ಹೊನ್ನಾಳಿ ಆರೋಗ್ಯ ಕೇಂದ್ರದ ಭಾಗಮ್ಮ, ಆರೋಗ್ಯ ನಿರೀಕ್ಷಕ ನಿಂಗಪ್ಪ, ಪರಮೇಶ್ವರಪ್ಪ ಮಾತನಾಡಿದರು.ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಟಿ.ಸಿ.ಭಾರತಿ ವಹಿಸಿದ್ದರು. ಸಿಡಿಸಿ ಸದಸ್ಯರಾದ ಹೊಸಮನೆ ಮಲ್ಲಿಕಾರ್ಜುನ ಕುಂಬಾರ, ಸೋಮಶೇಖರ, ಗೀತನಾಗಪ್ಪ, ಆಸ್ಪತ್ರೆಯ ಕುಸುಮ, ಕಾಲೇಜಿನ ರೆಡ್‌ಕ್ರಾಸ್ ಘಟಕದ ಸಂಯೋಜಕ ಇಮ್ರಾನ್, ವೈದ್ಯಕೀಯ ಸಿಬ್ಬಂದಿ, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
- - - -ಫೋಟೋ:ನ್ಯಾಮತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ದಾನಿಗಳು ರಕ್ತದಾನ ಮಾಡಿದರು.