ಸಂವಿಧಾನವನ್ನು ಅರ್ಥಮಾಡಿಕೊಂಡು ಜೀವನ ನಡೆಸಬೇಕು

| Published : Apr 17 2025, 12:05 AM IST

ಸಂವಿಧಾನವನ್ನು ಅರ್ಥಮಾಡಿಕೊಂಡು ಜೀವನ ನಡೆಸಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಭಾರತದ ಸಂವಿಧಾನವನ್ನು ಪ್ರತಿಯೊಬ್ಬರೂ ಅಭ್ಯಾಸ ಮಾಡುವಂತಾಗಬೇಕು. ನಿತ್ಯ ಅಂಬೇಡ್ಕರ್ ಅವರ ತತ್ತ್ವಗಳನ್ನು ಅನುಸರಿಸುವ ಮೂಲಕ ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು. ಜಾತೀಯತೆ ತೊಲಗಿ ಮಾನವೀಯ ಮೌಲ್ಯಗಳನ್ನು ಪ್ರವರ್ಧಮಾನಕ್ಕೆ ತರಬೇಕು ಎಂದು ಹೇಳಿದರು. ತಾಲೂಕು ಮಿನಿವಿಧಾನ ಸೌಧದ ಆವರಣದಲ್ಲಿ ೧೨ ಅಡಿ ಎತ್ತರದ ಕಂಚಿನ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲು ಎಲ್ಲ ಸಿದ್ಧತೆ ನಡೆದಿವೆ. ಪ್ರತಿಮೆಯ ನಿರ್ಮಾಣ ಕಾರ್ಯ ಕೂಡ ಮುಕ್ತಾಯಗೊಂಡಿದೆ. ಇದಕ್ಕೆ ಬೇಕಾದ ಅಡಿಪಾಯ ವನ್ನು ಪುರಸಭೆ ವತಿಯಿಂದ ಮಾಡಲಾಗುವುದು ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಈ ನೆಲದ ಕಾನೂನಾಗಿರುವ ನಮ್ಮ ಸಂವಿಧಾನವನ್ನು ಅರ್ಥಮಾಡಿಕೊಂಡು ಜೀವನ ನಡೆಸಬೇಕಾಗಿದೆ ಎಂದು ಭಾರತೀಯ ಬೌದ್ಧ ಮಹಾಸಭಾದ ಅಧ್ಯಕ್ಷ ಎಸ್.ಸಿದ್ದರಾಜ್ ಹೇಳಿದರು.

ತಾಲೂಕು ಆಡಳಿತ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡ ಬೇಕೆನ್ನುವ ಚಿಂತನೆ ಅವರದ್ದಾಗಿದೆ. ಇಂದಿನ ವ್ಯವಸ್ಥೆಯಲ್ಲಿ ಶ್ರಮಿಕ ವರ್ಗ ತನ್ನ ದುಡಿಮೆಯಲ್ಲಿ ಬದುಕಲಾಗದಂತಾಗಿದೆ. ಜಗತ್ತೇ ಹೇಳುವ ಶ್ರೇ? ಸಂವಿಧಾನವನ್ನು ಉಳಿಸುವ ಸ್ತಂಭಗಳು ನಾವಾಗಬೇಕಾದರೆ ವಿಚಾರವಂತರಾಗಬೇಕು ಎಂದರು.

ಭಾರತದ ಸಂವಿಧಾನವನ್ನು ಪ್ರತಿಯೊಬ್ಬರೂ ಅಭ್ಯಾಸ ಮಾಡುವಂತಾಗಬೇಕು. ನಿತ್ಯ ಅಂಬೇಡ್ಕರ್ ಅವರ ತತ್ತ್ವಗಳನ್ನು ಅನುಸರಿಸುವ ಮೂಲಕ ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು. ಜಾತೀಯತೆ ತೊಲಗಿ ಮಾನವೀಯ ಮೌಲ್ಯಗಳನ್ನು ಪ್ರವರ್ಧಮಾನಕ್ಕೆ ತರಬೇಕು ಎಂದು ಹೇಳಿದರು.

ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ತಾಲೂಕು ಆಡಳಿತದಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು. ತಾಲೂಕು ಮಿನಿವಿಧಾನ ಸೌಧದ ಆವರಣದಲ್ಲಿ ೧೨ ಅಡಿ ಎತ್ತರದ ಕಂಚಿನ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲು ಎಲ್ಲ ಸಿದ್ಧತೆ ನಡೆದಿವೆ. ಪ್ರತಿಮೆಯ ನಿರ್ಮಾಣ ಕಾರ್ಯ ಕೂಡ ಮುಕ್ತಾಯಗೊಂಡಿದೆ. ಇದಕ್ಕೆ ಬೇಕಾದ ಅಡಿಪಾಯ ವನ್ನು ಪುರಸಭೆ ವತಿಯಿಂದ ಮಾಡಲಾಗುವುದು. ಪಟ್ಟಣದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ೭೦ ಲಕ್ಷ ರು. ಮಂಜೂರಾಗಿದೆ ಎಂದರು.

ಮೈತ್ರಿ ಮಾತಾಜಿ ಮಾತನಾಡಿ, ಎಲ್ಲರೂ ಅಂಬೇಡ್ಕರ್ ಶಿಕ್ಷಣದಿಂದ ಅವರಂತಾಗಬೇಕು. ಯಾರೂ ವಂಚಿತರಾಗಬಾರದು. ಮಾದರಿ ನಾಗರಿಕರು ನಾವಾಗಬೇಕು ಎಂದು ಹೇಳಿದರು.

ಇದೇ ವೇಳೆ ನಾನಾ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಮಾಡಲಾಯಿತು. ಪುರಸಭಾಧ್ಯಕ್ಷ ಸಿ.ಎನ್.ಮೋಹನ್, ತಹಸೀಲ್ದಾರ್‌ ವಿ.ಎಸ್ ನವೀನ್‌ ಕುಮಾರ್, ತಾಪಂ ಇಒ ಹರೀಶ್, ಎಚ್‌ಎಸ್‌ಎಸ್‌ಕೆ ಅಧ್ಯಕ್ಷ ಸಿ.ಎನ್. ವೆಂಕಟೇಶ್, ಕಸಾಪ ತಾಲೂಕು ಅಧ್ಯಕ್ಷ ಎಚ್.ಎನ್.ಲೋಕೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಆರ್.ಅನಿಲ್‌ ಕುಮಾರ್, ಸಿಪಿಐ ರಘುಪತಿ, ಪುರಸಭೆ ಮುಖ್ಯಾಧಿಕಾರಿ ಕೆ.ಎನ್.ಹೇಮಂತ್, ನಾನಾ ಸಂಘಟನೆಗಳ ಮುಖಂಡರು ಹಾಜರಿದ್ದರು.