ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ವಿಶೇಷ ಕೋರ್ಟ್‌ಗೆ ಎನ್‌ಐಎ ಆರೋಪ ಪಟ್ಟಿ ಸಲ್ಲಿಕೆ

| Published : Nov 30 2023, 01:15 AM IST

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ವಿಶೇಷ ಕೋರ್ಟ್‌ಗೆ ಎನ್‌ಐಎ ಆರೋಪ ಪಟ್ಟಿ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಒಂದು ವರ್ಷದ ಹಿಂದ ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ್ದ ಕುಕ್ಕರ್ರ್‌ ಬಾಂಬ್ಬ್‌ ಬ್ಲಾಸ್ಟ್ಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ನ್‌ಐಎ ವಿಶೇಷ ಕೋರ್ಟ್ರ್ಟ್‌ಗೆ ಚಾರ್ಜ್ರ್ಜ್‌ ಶೀಟ್ಟ್‌ ಸಲ್ಲಿಸಿದೆ

ಕನ್ನಡಪ್ರಭ ವಾರ್ತೆ ಮಂಗಳೂರು

ಒಂದು ವರ್ಷದ ಹಿಂದೆ ಮಂಗಳೂರಿನ ಕಂಕನಾಡಿಯ ನಾಗುರಿಯಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಶೇಷ ನ್ಯಾಯಾಲಯಕ್ಕೆಆರೋಪ ಪಟ್ಟಿ ಸಲ್ಲಿಸಿದೆ. ಈ ಆರೋಪ ಪಟ್ಟಿಯಲ್ಲಿ ಇದೊಂದು ಐಸಿಸ್‌ ಪ್ರೇರಿತ ಬಾಂಬ್ ದಾಳಿ ಎಂದು ಉಲ್ಲೇಖಿಸಲಾಗಿದೆ.

ಬಂಧಿತ ಆರೋಪಿಗಳಾದ ಮಹಮ್ಮದ್‌ ಶಾರೀಕ್‌ ಹಾಗೂ ಸಯ್ಯದ್ ಯಾಸೀನ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಶಂಕಿತ ಉಗ್ರರು ಕುಕ್ಕರ್‌ನಲ್ಲಿ ಸುಧಾರಿತ ಸ್ಫೋಟಕ ಕೊಂಡೊಯ್ದು ಆಟೋದಲ್ಲಿ ತೆರಳಿ ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು ನಡೆಸಿದ್ದರು.

೨೦೨೨ರ ನ.೧೯ರಂದು ನಗರದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಮಂಗಳೂರಿನಲ್ಲಿ ೨೦೨೦ ರಲ್ಲಿ ಕಂಡುಬಂದ ಉಗ್ರ ಗೋಡೆ ಬರಹ ಪ್ರಕರಣದ ಹಾಗೂ ಶಿವಮೊಗ್ಗ ಟ್ರಯಲ್ ಬಾಂಬ್‌ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಮ್ಮದ್ ಶಾರೀಕ್ ತಂದ ಕುಕ್ಕರ್‌ ಬಾಂಬ್ ಆಟೋರಿಕ್ಷಾದಲ್ಲಿ ಸ್ಫೋಟಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಕರ್ನಾಟಕದಲ್ಲಿ ಐಸಿಸ್ ಮಾದರಿ ಕೃತ್ಯಕ್ಕೆ ಸಂಚು ರೂಪಗೊಂಡಿದ್ದು ಈ ಸ್ಫೋಟದಿಂದ ಬಯಲಾಗಿತ್ತು. ಈ ಘಟನೆಯಲ್ಲಿ ಆಟೋ ಚಾಲಕ ಪುರುಷೋತ್ತಮ ಕೂಡ ಗಾಯಗೊಂಡಿದ್ದರು.

ಶಿವಮೊಗ್ಗದಲ್ಲಿ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ಬಂಧನವಾಗುತ್ತಿದ್ದಂತೆ ಶಾರೀಕ್ ಅಲ್ಲಿಂದ ಪರಾರಿಯಾಗಿ ಮಂಗಳೂರು, ಮೈಸೂರು, ಕೇರಳ, ತಮಿಳುನಾಡು ಸುತ್ತಾಡಿಕೊಂಡಿದ್ದ. ಹಿಂದು ವೇಷ ಧರಿಸಿ ಮೈಸೂರಿನಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿಂದ ತನ್ನ ಉಗ್ರ ಕೃತ್ಯ ಮುಂದುವರೆಸಿದ್ದ. ಬಳಿಕ ಮಂಗಳೂರಲ್ಲಿ ಕುಕ್ಕರ್‌ ಬಾಂಬ್ ಸ್ಫೋಟದಲ್ಲಿ ಸಿಕ್ಕಿಬಿದ್ದಿದ್ದ.

ಈ ಆರೋಪಿಗಳಿಬ್ಬರು ಕುಕ್ಕರ್‌ ಬಾಂಬ್‌ ಸಿದ್ಧಪಡಿಸಿದ್ದರು. ಕುಕ್ಕರ್ ಬಾಂಬ್‌ ತಯಾರಿಕೆಗೆ ಸೈಯದ್‌ ಯಾಸೀನ್‌ ಎಂಬಾತ ಸ್ಫೋಟಕ ವಸ್ತುಗಳನ್ನು ಪೂರೈಸಿದ್ದ. ಕುಕ್ಕರ್‌ ಬಾಂಬ್‌ ಸ್ಫೋಟ ಮೂಲಕ ಶರಿಯಲ್‌ ಕಾನೂನು ಪ್ರಚಾರಕ್ಕೆ ಯೋಜನೆ ರೂಪಿಸಿದ್ದರು. ಕದ್ರಿ ಮಂಜುನಾಥ ದೇವಸ್ಥಾನವನ್ನು ಸ್ಫೋಟಿಸಿ ಹಿಂದುಗಳ ಹತ್ಯೆಗೆ ಯೋಜನೆ ಹಾಕಿಕೊಂಡಿದ್ದರು. ದಾಳಿ ಬಳಿಕ ಇವರೆಲ್ಲ ಐಸಿಸ್‌ ಸೇರಲು ನಿರ್ಧರಿಸಿದ್ದರು.

ಶಿವಮೊಗ್ಗ ಟ್ರಾಯಲ್‌ ಬಾಂಬ್ ಸ್ಫೋಟ ಘಟನೆಗೆ ಸಂಬಂಧಿಸಿ ಬಂಧಿತ 10 ಮಂದಿ ಆರೋಪಿಗಳ ಪೈಕಿ ಇವರಿಬ್ಬರು ಸೇರಿದ್ದಾರೆ. ಶಿವಮೊಗ್ಗ ಘಟನೆಯ ಬಗ್ಗೆ ಆರೋಪಿಗಳ ವಿರುದ್ಧ ಎನ್‌ಐಎ ಜುಲೈ 30ರಂದು ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು.