ಸಾರಾಂಶ
ಭದ್ರಾವತಿಯಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶಾಶ್ವತವಾಗಿ ಮುಚ್ಚುವ ತೀರ್ಮಾನದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಹೋರಾಟ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆ ಸೋಮವಾರ ಶಿವಮೊಗ್ಗದಲ್ಲಿರುವ ಸಂಸದರ ನಿವಾಸದವರೆಗೆ ಬೈಕ್ ರ್‍ಯಾಲಿ ನಡೆಸಿದ್ದರು.
ಭದ್ರಾವತಿ: ಕೇಂದ್ರ ಸರ್ಕಾರ ಹಾಗೂ ಉಕ್ಕು ಪ್ರಾಧಿಕಾರ ಆಡಳಿತ ವರ್ಗ ಕೈಕೊಂಡಿರುವ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶಾಶ್ವತವಾಗಿ ಮುಚ್ಚುವ ತೀರ್ಮಾನದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಹೋರಾಟ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆ ಸೋಮವಾರ ಶಿವಮೊಗ್ಗದಲ್ಲಿರುವ ಸಂಸದರ ನಿವಾಸದವರೆಗೆ ಬೈಕ್ ರ್‍ಯಾಲಿ ನಡೆಯಿತು.
ಕಾರ್ಖಾನೆ ಮುಂಭಾಗದಲ್ಲಿ ಬೆಳಗ್ಗೆ ಜಮಾಯಿಸಿದ ಗುತ್ತಿಗೆ ಕಾರ್ಮಿಕರು ಘೋಷಣೆಗಳನ್ನು ಕೂಗಿ ಬೈಕ್ ಜಾಥಾ ಆರಂಭಿಸಿದರು. ಮಹಿಳಾ ಕಾರ್ಮಿಕರು ಬಸ್ ಮೂಲಕ ತೆರಳಿದರು. ಅನಂತರ ಸಂಸದರ ನಿವಾಸದ ಮುಂಭಾಗ ಪ್ರತಿಭಟನಾ ಧರಣಿ ನಡೆಸುವ ಮೂಲಕ ತಮ್ಮ ನೋವುಗಳನ್ನು ಸಂಸದರ ಮುಂದೆ ತೋರ್ಪಡಿಸಿಕೊಂಡರು.ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ. ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಹಾಗೂ ಪದಾಧಿಕಾರಿಗಳು, ನಿವೃತ್ತ ಕಾರ್ಮಿಕ ನರಸಿಂಹಾಚಾರ್ ಇನ್ನಿತರರು ಜಾಥಾ ನೇತೃತ್ವ ವಹಿಸಿದ್ದರು.
- - - -ಡಿ15ಬಿಡಿವಿಟಿ:ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರು ಸೋಮವಾರ ಭದ್ರಾವತಿಯ ಕಾರ್ಖಾನೆ ಮುಂಭಾಗದಿಂದ ಶಿವಮೊಗ್ಗ ಸಂಸದರ ನಿವಾಸದವರೆಗೆ ಬೈಕ್ ರ್‍ಯಾಲಿ ನಡೆಸಿದರು.