ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕಾಂಗ್ರೆಸ್ ಪಕ್ಷದ ಬೆಳಗಾವಿ ಅಧಿವೇಶನಕ್ಕೆ 100 ವರ್ಷ ತುಂಬಿದ್ದು, ಇದರ ಅಂಗವಾಗಿ ಕೆಪಿಸಿಸಿ ಆದೇಶದಂತೆ ಗಾಂಧಿ ಭಾರತ ಹೆಸರಿನಲ್ಲಿ ಒಂದು ವರ್ಷದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಹೇಳಿದರು.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೆಪಿಸಿಸಿಯ ಸೂಚನೆ ಮೇರೆಗೆ ಅ.2ರಿಂದ ಮುಂದಿನ 2025ರ ಅ.2ರವರೆಗೆ ಒಂದು ವರ್ಷ ವಿವಿಧ ಕಾರ್ಯಕ್ರಮಗಳನ್ನು ಗ್ರಾ.ಪಂ, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಅ.2ರಂದು ಶಿವಮೊಗ್ಗದಲ್ಲಿಯೂ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಅಂದು ಬೆಳಗ್ಗೆ 9.30ಕ್ಕೆ ಶಿವಪ್ಪ ನಾಯಕ ಪ್ರತಿಮೆಯಿಂದ ಗೋಪಿ ವೃತ್ತದ ಮಾರ್ಗವಾಗಿ ಕಾಂಗ್ರೆಸ್ ಕಚೇರಿವರೆಗೆ ಗಾಂಧಿ ನಡಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನಂತರ ಬೆಳಗ್ಗೆ 10ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಖ್ಯವಾಗಿ ಬೆಂಗಳೂರಿನ ಕೇಂದ್ರ ಕಚೇರಿಯಿಂದ ನಡೆಯುವ ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್‌ಇಡಿ ಪರದೆ ಮೂಲಕ ಪ್ರದರ್ಶಿಸಲಾಗುವುದು ಎಂದರು.ಅ.2ರಂದು ಜಿಲ್ಲಾ ಕೇಂದ್ರಗಳು ಸೇರಿದಂತೆ ತಾಲ್ಲೂಕು, ಹೋಬಳಿ, ಗ್ರಾ.ಪಂ ಮಟ್ಟಗಳಲ್ಲೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಯಾ ವಾರ್ಡ್‌ಗೆ ಸಂಬಂಧಿಸಿ ದಂತೆ ಕನಿಷ್ಟ ಒಂದು ಕಿ.ಮೀ. ಪಾದಯಾತ್ರೆ ಕೈಗೊಳ್ಳಲಾಗಿದೆ. ಈ ಗಾಂಧಿ ನಡಿಗೆ ಪಾದಯಾತ್ರೆಯಲ್ಲಿ ಪಕ್ಷದ ಧ್ವಜವನ್ನು ಹಿಡಿದುಕೊಳ್ಳುವುದಿಲ್ಲ. ಅದರ ಬದಲು ರಾಷ್ಟ್ರಧ್ವಜ ಬಳಸಲಾಗುತ್ತದೆ. ಭಾಗವಹಿಸುವ ಎಲ್ಲರೂ ಶ್ವೇತವಸ್ತ್ರ ಹಾಗೂ ಗಾಂಧಿ ಟೋಪಿ ಧರಿಸಿಕೊಳ್ಳಬೇಕು. ಮತ್ತು ಸಭೆ ನಡೆಯುವ ಜಾಗದಲ್ಲಿ ದೊಡ್ಡ ಪರದೆ ಬಳಸಿ ಪ್ರೊಜೆಕ್ಟರ್ ಮೂಲಕ ಕೆಪಿಸಿಸಿ ಆಯೋಜಿಸಿರುವ ನೇರ ಪ್ರಸಾರದ ವೀಕ್ಷಣೆಗೆ ಅವಕಾಶ ಕಲ್ಪಿಸಬೇಕು. ಇದಕ್ಕಾಗಿ ಸಂಬಂಧ ಪಟ್ಟವರಿಗೆ ಜೂಂಲಿಂಕ್ ಅನ್ನು ಕಳಿಸಲಾಗುವುದು ಎಂದು ವಿವರಿಸಿದರು.
ಈ ಕಾರ್ಯಕ್ರಮ ಆಯೋಜಿಸಲು ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು,ವಿಧಾನಪರಿಷತ್ ಸದಸ್ಯರು ಸಹಕಾರ ನೀಡಿ ಕಾರ್ಯಕ್ರಮ ಯಶಸ್ವಿಗೊಳಿ ಸುವಂತೆ ಈಗಾಗಲೇ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮತ್ತು ಕಾರ್ಯಕ್ರಮದಲ್ಲಿ ಭಾಗವ ಹಿಸುವಂತೆ ಮನವಿ ಮಾಡಿದ್ದಾರೆ ಎಂದರು.ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಾಂಧಿಜಿ ಫೋಟೋ ಹಾಗೂ ಅವರ ಧ್ಯೇಯ ವಾಕ್ಯಗಳನ್ನು ಫ್ಲೆಕ್ಸ್ ಮಾಡಿಸಿ ಪ್ರದರ್ಶಿಸಲಾಗುವುದು. ಮತ್ತು ಗಾಂಧೀಜಿ ಕುರಿತಂತೆ ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಶುಭಾ ಮರವಂತೆ ಉಪನ್ಯಾಸ ನೀಡುವರು. ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿ ಯಾಗುವಂತೆ ಸಹಕರಿಸಬೇಕು ಎಂದು ಅವರು ಮುಖಂಡರು ಮತ್ತು ಕಾರ್ಯಕರ್ತರಿಗೆ ಮನವಿ ಮಾಡಿದರು.
ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಜ್ಯ ನಾಯಕರ ಸೂಚನೆ ನಂತರ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹೋರಾಟ ನಡೆಸಲಾಗುವುದು ಎಂದವರು ಹೇಳಿದರು.ಪ್ರಮುಖರಾದ ಚಂದ್ರ ಭೂಪಾಲ್, ಕಲಗೋಡು ರತ್ನಾಕರ್, ಎಸ್.ಟಿ. ಹಾಲಪ್ಪ, ಜಿ.ಡಿ.ಮಂಜುನಾಥ್, ಕಲೀಂ ಪಾಶ, ಶಿವಕುಮಾರ್, ಯು. ಶಿವಾನಂದ್, ತಾನಾಜಿ, ಜಾವೀದ್, ಶಿ.ಜು. ಪಾಶ. ಜಿ. ಪದ್ಮನಾಭ್ ಮತ್ತಿತರರು ಇದ್ದರು.
;Resize=(128,128))
;Resize=(128,128))