ಕೆಜಿಎಫ್ ತಾಲೂಕಿನ ವಡ್ಡರಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಚಿತ್ತೂರಿಗೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಮೂರ್ತಿ ಮತ್ತು ಕ್ಲೀನರ್ ಪಾರ್ಥಿಬನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಬೇತಮಂಗಲ
ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ ಈರುಳ್ಳಿ ರಸ್ತೆಯ ಮೇಲೆ ಚೆಲ್ಲಾಡಿದ ಘಟನೆ ನಡೆದಿದೆ.ಕೆಜಿಎಫ್ ತಾಲೂಕಿನ ವಡ್ಡರಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಚಿತ್ತೂರಿಗೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಮೂರ್ತಿ ಮತ್ತು ಕ್ಲೀನರ್ ಪಾರ್ಥಿಬನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕ್ಯಾಂಟರ್ ಪಲ್ಟಿಯಾದ ರಭಸಕ್ಕೆ ಈರುಳ್ಳಿ ಮೂಟೆಗಳು ಹೆದ್ದಾರಿಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ವಿಷಯ ತಿಳಿದು ಬೇತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೆಲ್ಲಾಡಿದ ಈರುಳ್ಳಿ ಕಳುವಾಗದಂತೆ ಸ್ಥಳದಲ್ಲೇ ಬೀಡುಬಿಟ್ಟು ನಿಗಾ ವಹಿಸಿದ್ದಾರೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.