ಸಾರಾಂಶ
2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವೆಬ್‌ಸೈಟ್ www.ssp.postmatric.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದು.
ಕನ್ನಡಪ್ರಭ ವಾರ್ತೆ ಕಾರ್ಕಳ
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಎಲ್ಲಾ ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವೆಬ್‌ಸೈಟ್ www.ssp.postmatric.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದು.ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸುವ ಮೊದಲು ವಿದ್ಯಾರ್ಥಿಗಳು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಖಾತೆ ತೆರೆಯಬೇಕು ಮತ್ತು ಆ ಖಾತೆಗೆ ಆಧಾರ್ ಮ್ಯಾಪಿಂಗ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಆದಾಯ ಮಿತಿಗಳು:1 ರಿಂದ 8ನೇ ತರಗತಿಗೆ-ವಾರ್ಷಿಕ ರು. 6 ಲಕ್ಷ
9 ರಿಂದ 10ನೇ ತರಗತಿಗೆ - ವಾರ್ಷಿಕ ರು. 2.5 ಲಕ್ಷ
ಯೋಜನೆಯ ಪ್ರಮುಖ ಅಂಶಗಳು:ಪರಿಶಿಷ್ಟ ಜಾತಿಗೆ: 2 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಪರಿಶಿಷ್ಟ ಪಂಗಡಕ್ಕೆ: 2 ರಿಂದ 8ನೇ ತರಗತಿವರೆಗಿನ ನವೀಕರಣ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲನೆಯಿಲ್ಲ. ಆದರೆ 9 ಮತ್ತು 10ನೇ ತರಗತಿಯ NSP OTR ಹೊಂದಿರುವ ವಿದ್ಯಾರ್ಥಿಗಳು ಎಸ್.ಎಸ್.ಪಿ ತಂತ್ರಾಂಶದಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.
ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆದ ನವೀಕರಣ ವಿದ್ಯಾರ್ಥಿಗಳಿಗೆ ಈ ವರ್ಷ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಸಹಾಯಕ ನಿರ್ದೇಶಕರ ಕಚೇರಿ, ಕಾರ್ಕಳಕ್ಕೆ ಕಚೇರಿ ಸಮಯದಲ್ಲಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 9480843207 ಅನ್ನು ಸಂಪರ್ಕಿಸಬಹುದಾಗಿದೆ.