ಆನ್‌ಲೈನ್‌ ವಂಚನೆ ತನಿಖೆ: ಪೊಲೀಸ್‌ ಇಲಾಖೆ, ಬ್ಯಾಂಕ್‌ಗಳ ಸಮನ್ವಯ ಸಭೆ

| Published : Jul 25 2025, 01:12 AM IST

ಆನ್‌ಲೈನ್‌ ವಂಚನೆ ತನಿಖೆ: ಪೊಲೀಸ್‌ ಇಲಾಖೆ, ಬ್ಯಾಂಕ್‌ಗಳ ಸಮನ್ವಯ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಆನ್‌ಲೈನ್‌ ವಂಚನೆ, ಮೋಸ ಇತ್ಯಾದಿ ವಿಷಯಗಳ ಬಗ್ಗೆ ಸಮನ್ವಯ ಸಾಧಿಸುವ ಸಲುವಾಗಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕ್‌ಗಳ ಬ್ಯಾಂಕ್‌ ಮ್ಯಾನೇಜರ್‌ಗಳ ಸಭೆಯನ್ನು ಬುಧವಾರ ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಉಡುಪಿಇತ್ತೀಚೆಗೆ ನಡೆಯುತ್ತಿರುವ ಆನ್‌ಲೈನ್‌ ವಂಚನೆ, ಮೋಸ ಇತ್ಯಾದಿ ವಿಷಯಗಳ ಬಗ್ಗೆ ಸಮನ್ವಯ ಸಾಧಿಸುವ ಸಲುವಾಗಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕ್‌ಗಳ ಬ್ಯಾಂಕ್‌ ಮ್ಯಾನೇಜರ್‌ಗಳ ಸಭೆಯನ್ನು ಬುಧವಾರ ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ 140ಕ್ಕೂ ಹೆಚ್ಚು ಬ್ಯಾಂಕ್‌ ಅಧಿಕಾರಿಗಳು ಹಾಜರಿದ್ದರು. ಅವರಿಗೆ ಕೆವೈಸಿ ಖಾತೆಯ ಮಾಹಿತಿ, ಖಾತೆ ಪ್ರೀಜ್‌ ಹಾಗೂ ಅನ್‌ ಪ್ರೀಜ್‌ ಮಾಡುವ ಬಗ್ಗೆ ಮತ್ತು ಎಟಿಎಂ ಗಳಲ್ಲಿನ ಸಿಸಿಟಿವಿ ಫೂಟೇಜ್‌ಗಳನ್ನು ತನಿಖೆಯ ಪ್ರಯುಕ್ತ ಕೇಳಿದಾಗ ಶೀಘ್ರದಲ್ಲಿ ಒದಗಿಸುವ ಕುರಿತು ತಿಳಿಸಲಾಯಿತು.ನಕಲಿ ಖಾತೆಗಳ ಬಗ್ಗೆ, ಅಕ್ರಮ ವಲಸಿಗರ ಖಾತೆಗಳ ಬಗ್ಗೆ ಮಾಹಿತಿಯನ್ನು ಇಲಾಖೆ ಜೊತೆ ಹಂಚಿಕೊಳ್ಳುವಂತೆ ತಿಳಿಸಲಾಯಿತು. ಮುಂದಿನ ದಿನಗಳಲ್ಲಿ ಪೊಲೀಸ್‌ ಇಲಾಖೆ ಹಾಗೂ ಬ್ಯಾಂಕ್‌ಗಳ ಮಧ್ಯೆ ಸಮನ್ವಯಕ್ಕಾಗಿ ನೋಡಲ್‌ ಅಧಿಕಾರಿಗಳನ್ನು ನೇಮಿಸುವ ಕುರಿತು ತಿಳಿಸಲಾಯಿತು. ಈ ಬಗ್ಗೆ ಬ್ಯಾಂಕ್‌ ಅಧಿಕಾರಿಗಳೂ ಕೂಡಾ ಸಹಮತ ವ್ಯಕ್ತಪಡಿಸಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್‌ ನಾಯಕ್‌, ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ. ಹರ್ಷಾ ಪ್ರಿಯಂವಧಾ ಹಾಗೂ ಜಿಲ್ಲಾ ಲೀಡ್ ಬ್ಯಾಂಕ್ ಪ್ರಬಂಧಕ ಹರೀಶ್‌ ಜಿ. ವೇದಿಕೆಯಲ್ಲಿ ಹಾಜರಿದ್ದರು.