ಕಲಿಕೆ ಅರ್ಥೈಸಿಕೊಳ್ಳಲು ಆನ್ಲೈನ್ ಹೈಬ್ರಿಡ್ ತರಗತಿ ಸಹಕಾರಿ

| Published : Jun 19 2024, 01:05 AM IST

ಕಲಿಕೆ ಅರ್ಥೈಸಿಕೊಳ್ಳಲು ಆನ್ಲೈನ್ ಹೈಬ್ರಿಡ್ ತರಗತಿ ಸಹಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಆರ್.ಎಂ.ಶಹಾ ಪಬ್ಲಿಕ್ ಶಾಲೆಯಲ್ಲಿ ಸಿ.ಬಿ.ಎಸ್.ಇ ಮಂಡಳಿಯ ಅಡಿಯಲ್ಲಿ ಹೊಸ ತಂತ್ರಜ್ಞಾನದ ಆನ್ಲೈನ್ ಹೈಬ್ರಿಡ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಇಂಡಿ

ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಆರ್.ಎಂ.ಶಹಾ ಪಬ್ಲಿಕ್ ಶಾಲೆಯಲ್ಲಿ ಸಿ.ಬಿ.ಎಸ್.ಇ ಮಂಡಳಿಯ ಅಡಿಯಲ್ಲಿ ಹೊಸ ತಂತ್ರಜ್ಞಾನದ ಆನ್‌ಲೈನ್ ಹೈಬ್ರಿಡ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಬಿ.ಎಲ್.ಡಿ. ಇ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಚಿದಾನಂದ ಕುಸೂರ್ ಅವರು ಕಾರ್ಯಕ್ರಮ ಉದ್ಘಾಟನೆಗೊಳಿಸಿ ಮಾತನಾಡಿ, ಸಿ.ಬಿ.ಎಸ್.ಇ, ಮೈಕ್ರೋಸಾಪ್ಟ್ ಹಾಗೂ ಟ್ಯಾಗ್ ಇವರ ಸಹಯೋಗದ ಹೈಬ್ರಿಡ್ ತರಗತಿಗಳು ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳಿಗೆ ಜಗತ್ತಿನ ಹೊಸ ಹೊಸ ವಿಷಯಗಳನ್ನು ತಿಳಿದುಕೊಳ್ಳಲು ಅನುಕೂಲವಾಗಿದೆ ಎಂದು ಹೇಳಿದರು. ಅಲ್ಲದೇ ಈ ಹೈಬ್ರಿಡ್ ತರಗತಿಗಳು ಮಕ್ಕಳ ಭವಿಷ್ಯಕ್ಕೆ ಹಾಗೂ ತಂತ್ರಜ್ಞಾನ ಯುಗದಲ್ಲಿ ಉನ್ನತ ಸಾಧನೆಯನ್ನು ಮಾಡಲು ವಿವಿಧ ದೇಶಗಳ ವಿದ್ಯಾರ್ಥಿಗಳೊಂದಿಗೆ ಹೊಸ ಕಲಿಕೆ ಮತ್ತು ಆವಿಷ್ಕಾರಗಳಿಗೆ ಪೈಪೋಟಿ ನೀಡಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಿ.ಆರ್.ಶಹಾ ಮಾತನಾಡಿ, ಮೈಕ್ರೋಸಾಫ್ಟ್ ಆನ್ಲೈನ್ ತರಗತಿಗಳು ಮಕ್ಕಳ ಜ್ಞಾನದ ಬೆಳವಣಿಗೆಗೆ ಇನ್ನಷ್ಟು ಅನುಕೂಲವಾಗಲಿ, ಇದರ ಜೊತೆಗೆ ನಮ್ಮ ದೇಶದ ಸಂಸ್ಕೃತಿ ಸಂಸ್ಕಾರ ಉಳಿಸಿಕೊಂಡು, ಬೆಳೆಸಿಕೊಂಡು ಹೋಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಹೇಳಿದರು.

ಹೈಬ್ರಿಡ್ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಶಾಲೆಯ ಪ್ರಾಂಶುಪಾಲ್‌ ಪ್ರಕಾಶ ಪಾಟೀಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಶಾಲೆಯು ಮೈಕ್ರೊಸಾಪ್ಟ್ ಹೈಬ್ರಿಡ್ ತಂತ್ರಜ್ಞಾನ ಪಡೆಯಲು ಆಯ್ಕೆಯಾದ ಶಾಲೆಗಳಲ್ಲಿ, ನಮ್ಮ ಶಾಲೆಯು ವಿಜಯಪುರ ಜಿಲ್ಲೆಯಲ್ಲಿಯೇ ಪ್ರಪ್ರಥಮ ಶಾಲೆಯಾಗಿದ್ದು, ಇದು ನಮ್ಮ ಶಾಲೆಯ ಮೈಲುಗಲ್ಲಾಗಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಮೈಕ್ರೋಸಾಫ್ಟ್ ಮುಖ್ಯಸ್ಥ ಪ್ರಶಾಂತ್ ಝಾ. ಮೈಕ್ರೋಸಾಪ್ಟ್ ಸಂಸ್ಥೆಯ ವಿವಿಧ ತಾಂತ್ರಿಕ ತಜ್ಞರು ಆನ್ಲೈನ್ (ವೆರ್ಚುವಲ್‌) ಮೂಲಕ ಹಾಜರಿದ್ದರು.

ಸಂಸ್ಥೆಯ ಆಡಳಿತಾಧಿಕಾರಿ ಕಲ್ಪನಾ ಶಹಾ, ಸಂಸ್ಥೆಯ ಶೈಕ್ಷಣಿಕ ಮಾರ್ಗದರ್ಶಕ ನಜೀರ್ ಹುಂಡೇಕರ್, ಎಫ್. ಕೆ. ದೋಶಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಯಾನಂದ ದಳವಾಯಿ, ತಾಂತ್ರಿಕ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ ಪಾಟೀಲ್, ಜ್ಯೋತಿ ರಾವೂರ್, ಶೃತಿಕಾ ಎ. ದೀಪಕ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಾಚಾರ್ಯ ಪ್ರಕಾಶ್ ಪಾಟೀಲ್ ಅವರು ಸ್ವಾಗತಿಸಿದರು. ಕುಮಾರ ರಾಹಿಲ್ ಮತ್ತು ಕುಮಾರಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ರಾವೂರ ವಂದಿಸಿದರು.