ರೆಸಾರ್ಟ್, ಹೋಂ ಸ್ಟೇಗಳು ಮತ್ತು ಹೋಟೆಲ್ ಗಳಲ್ಲಿ ವಾಸ್ತವ್ಯ ಹೂಡುವ ಪ್ರವಾಸಿಗರು ಹಾಗೂ ಹಾಸನ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದ ಸಂದರ್ಭದಲ್ಲಿ ಅನುಸರಿಸಬೆಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ ಜಾರಿಗೊಳಿಸುವ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಜೊತೆಗೆ ಸ್ಥಳೀಯರ ಆರ್ಥಿಕ ಸ್ಥಿತಿ ಸುಧಾರಣೆ ಆಗಲಿ ಎಂದು ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನು ಸದುಪಯೋಗ ಮಾಡಿಕೊಂಡು ಯಾವುದೇ ತೊಂದರೆ ಇಲ್ಲದಂತೆ ವ್ಯಾಪಾರ ನಡೆಯಬೇಕು. ಜೊತೆಗೆ ಸುರಕ್ಷಿತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಹೋಂ ಸ್ಟೇ ಗಳು ಕಡ್ಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲೆಯಲ್ಲಿರುವ ಹೋಂ ಸ್ಟೇಗಳು ಕಡ್ಡಾಯವಾಗಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೆಸಾರ್ಟ್, ಹೋಂ ಸ್ಟೇಗಳು ಮತ್ತು ಹೋಟೆಲ್ ಗಳಲ್ಲಿ ವಾಸ್ತವ್ಯ ಹೂಡುವ ಪ್ರವಾಸಿಗರು ಹಾಗೂ ಹಾಸನ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದ ಸಂದರ್ಭದಲ್ಲಿ ಅನುಸರಿಸಬೆಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ ಜಾರಿಗೊಳಿಸುವ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಜೊತೆಗೆ ಸ್ಥಳೀಯರ ಆರ್ಥಿಕ ಸ್ಥಿತಿ ಸುಧಾರಣೆ ಆಗಲಿ ಎಂದು ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನು ಸದುಪಯೋಗ ಮಾಡಿಕೊಂಡು ಯಾವುದೇ ತೊಂದರೆ ಇಲ್ಲದಂತೆ ವ್ಯಾಪಾರ ನಡೆಯಬೇಕು. ಜೊತೆಗೆ ಸುರಕ್ಷಿತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಹೋಂ ಸ್ಟೇ ಗಳು ಕಡ್ಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ನೋಟಿಸ್ ನೀಡಿ:ಅನುಮತಿ ಪಡೆಯದೆ ಹೋಂ ಸ್ಟೇ ನಡೆಸುತ್ತಿರುವವರಿಗೆ ನೋಟಿಸ್ ನೀಡಿ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು, ನೋಂದಣಿ ಮಾಡಿಕೊಳ್ಳದವರಿಗೆ ಕಾನೂನುತ್ಮಾಕವಾಗಿ ದಂಡ ವಿಧಿಸಲಾಗುವುದು. ಆಗುಹೋಗುಗಳಿಗೆ ಅವರೆ ಜವಾಬ್ದಾರರಾಗಿರುತ್ತಾರೆ ಎಂದು ತಿಳಿಸಿದರು. ಪ್ರವಾಸಿಗರು ದುಂಡಾವರ್ತನೆ ತೋರುತ್ತಿರುವುದು ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾ ವಹಿಸಿ ಅನೀರಿಕ್ಷಿತವಾಗಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಕ್ರಮ ವಹಿಸುವಂತೆ ಸೂಚಿಸಿದರು.ಪ್ರವಾಸಿ ತಾಣಗಳಲ್ಲಿ ಸ್ವಚ್ಚತೆ ಕಾಪಾಡುವುದರ ಜೊತೆಗೆ ಪ್ರವಾಸಿಗರ ಸುರಕ್ಷತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರವಾಸಿಗರು ಸಳೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಧಾರ್ಮಿಕ ಆಚರಣೆಗಳಿಗೆ ಗೌರವ ನೀಡುವುದು. ಮಳೆಗಾಲದ ಅವಧಿಯಲ್ಲಿ ಅರಣ್ಯ ಪ್ರದೇಶ, ಮೀಸಲು ಅರಣ್ಯ ವನ್ಯಜೀವಿ ಸಂರಕ್ಷಿತ ಪ್ರದೇಶ ಹಾಗೂ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಯಾವುದೇ ಚಾರಣ ಚಟುವಟಿಕೆಗಳನ್ನು ಅರಣ್ಯ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳುವಂತಿಲ್ಲ ಎಂದು ತಿಳಿಸಿದರು. ರೆಸಾರ್ಟ್ ಮತ್ತು ಹೋಂ ಸ್ಟೇಗಳ ಮಾಲೀಕರು ಭಾರೀ ಮಳೆ, ಭೂಕುಸಿತ, ಜಲಪಾತಗಳ ಹಾಗೂ ನದಿ ತೊರೆಗಳ ನೀರಿನ ಹರಿವು ಹೆಚ್ಚಳ, ಜಾರುವ ಪ್ರದೇಶಗಳಿಗೆ ಪ್ರವಾಸಿಗರು ತೆರಳದಂತೆ ಸೂಚನೆ ನೀಡಬೇಕು ಎಂದರು. ವನ್ಯಜೀವಿಗಳ ಸಂಚಾರದ ಸಾಧ್ಯತೆ ಇರುವ ಸಂದರ್ಭದಲ್ಲಿ ಪ್ರವಾಸಿಗರು ಹಾಗೂ ಖಾಸಗಿ ಸಂಘಟನೆಗಳ ಮೂಲಕ ಅನಧಿಕೃತವಾಗಿ ಚಾರಣ ಆಯೋಜಿಸುವುದನ್ನು ಸಂಪೂರ್ಣವಾಗಿ ನಿಬಂಧಿಸಬೇಕು. ಅರಣ್ಯ ಪ್ರದೇಶಗಳು, ಜಲಾಶಯಗಳು ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು .
ಪ್ರವಾಸಿಗರು ದೇವಾಲಯಗಳ ಪಾವಿತ್ರ್ಯತೆ ಕಾಪಾಡುವುದು ಹಾಗೂ ಶಿಲ್ಪಗಳಿಗೆ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಯಾವುದೇ ಹಾನಿ ಉಂಟು ಮಾಡಬಾರದು, ತ್ಯಾಜ್ಯ ಕಸವನ್ನು ಎಲ್ಲಂದರಲ್ಲಿ ಎಸೆಯದೇ ಪ್ರವಾಸಿ ತಾಣಗಳಲ್ಲಿ ಹಾಗೂ ತಾಣಗಳ ಮಾರ್ಗಗಳಲ್ಲಿ ಸ್ವಚ್ಛತೆ ಕಾಪಾಡಲು ಪ್ರವಾಸಿಗರು ಸಹಕರಿಸಬೇಕು ಎಂದರು. ಪ್ರವಾಸಿಗರು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಅಸಭ್ಯ ವರ್ತನೆ ಹಾಗೂ ಜೋರಾಗಿ ಸಂಗೀತ ಪ್ರಸಾರ ಮಾಡದಿರುವುದು ಸ್ಥಳೀಯ ನಿವಾಸಿಗಳು ಹಾಗೂ ಇತರೆ ಪ್ರವಾಸಿಗರೊಂದಿಗೆ ಗೌರವಯುತವಾಗಿ ವರ್ತಿಸಬೇಕು ಎಂದು ತಿಳಿಸಿದರು. ಸಕಲೇಶಪುರ ಸೇರಿದಂತೆ ಜಿಲ್ಲೆಯ ಯಾವುದೇ ಭಾಗದಲ್ಲಿ ಖಾಸಗಿ ವಾಹನಗಳನ್ನು ಕಾರ್ ರ್‍ಯಾಲಿ ಮಾದರಿಯಲ್ಲಿ ಸಂಘಟಿತವಾಗಿ ಚಲಾಯಿಸದಿರುವುದು, ಅತಿವೇಗದ ಚಾಲನೆ, ನಿರಂತರ ಹಾರ್ನ್ ಬಳಕೆ, ರಸ್ತೆ ಬದಿಯಲ್ಲಿ ಅನಧಿಕೃತ ವಾಹನ ನಿಲುಗಡೆ ಹಾಗೂ ಸಂಚಾರಕ್ಕೆ ಅಡ್ಡಿಯಾಗುವ ರೀತಿಯ ವಾಹನ ಚಲಾಯಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ರೆಸಾರ್ಟ್, ಹೋಂಸ್ಟೇ ಮತ್ತು ಹೋಟೆಲ್ ಗಳಲ್ಲಿ ಸ್ವಾಗತಕಾರರ ಕೊಠಡಿಯಲ್ಲಿ ಚೆಕ್ - ಇನ್ ಸಮಯದಲ್ಲೇ ಪ್ರವಾಸಿಗರಿಗೆ ಮಾಹಿತಿ ತಿಳಿಸತಕ್ಕದ್ದು ಹಾಗೂ ಸಾಮಾನ್ಯ ಸ್ಥಳಗಳಲ್ಲಿ ಹಾಗೂ ವಾಸ್ತವ್ಯದ ಕೊಠಡಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ನಿಯಮ ಉಲ್ಲಂಘಿಸಿದಲ್ಲಿ ಸಂಬಂಧಿಸಿದ ಕಾನೂನುಗಳಡಿ ಕ್ರಮ ಜರುಗಬಹುದೆಂಬ ಮಾಹಿತಿಯನ್ನು ಪ್ರವಾಸಿಗರಿಗೆ ಮುಂಚಿತವಾಗಿ ತಿಳಿಸುವುದು. ತುರ್ತು ಸಹಾಯವಾಣಿ ಸಂಖ್ಯೆಗಳಾದ ೧೧೨, ೧೦೯೮ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಹಾಗೂ ಹೋಂ ಸ್ಟೇಗಳ ಮಾಲೀಕರು ಮತ್ತು ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.