ದೇವನಹಳ್ಳಿ: ಶಿಕ್ಷಣದಿಂದ ಮಾತ್ರ ಉತ್ತಮ ಸ್ಥಾನಮಾನ ಪಡೆಯಲು ಸಾಧ್ಯ, ಹಾಗಾಗಿ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನು ಉತ್ತಮ ಸತ್ಪ್ರಜೆಗಳನ್ನಾಗಿ ಮಾಡಬೇಕು ಎಂದು ತಾಪಂ ಇಒ ಮುನಿರಾಜು ತಿಳಿಸಿದರು.
ಪಟ್ಟಣದಲ್ಲಿ ಸರ್ಕಾರಿ ನೌಕರರ ಸಂಘ, ಮುಖ್ಯ ಶಿಕ್ಷಕರ ಸಂಘ, ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಕಲಿಕಾ ಚಟುವಟಿಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿಯಲ್ಲಿ ಜಿಲ್ಲೆಯಲ್ಲಿ ತಾಲೂಕು ಪ್ರಥಮ ಸ್ಥಾನ ಪಡೆದಿದೆ. ಪಠ್ಯಕ್ಕೆ ಪೂರಕ ಚಟುವಟಿಕೆ ಪುಸ್ತಕಗಳನ್ನು ನೀಡಿ ಕಲಿಕೆಗೆ ಉತ್ತೇಜನ ನೀಡಲಾಗುತ್ತಿದೆ ಎಂದರು.ಬಿಇಒ ಲಲಿತಮ್ಮ ಮಾತನಾಡಿ, ಕಳೆದ ಸಾಲಿನಲ್ಲಿ ೨೯ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದರಿಂದ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು. ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿದ ಎಲ್ಲಾ ಶಿಕ್ಷಕರನ್ನು ಅಭಿನಂದಿಸಿದರು.
ಉದ್ಯಮಿ ಚೇತನ್‌ಗೌಡ, ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಲು ಶಿಕ್ಷಕರಿಂದ ಮಾತ್ರ ಸಾಧ್ಯ, ಶಿಕ್ಷಕರು ಮಕ್ಕಳನ್ನು ತಿದ್ದಿ ತೀಡಿ ಸತ್ಪ್ರಜೆಗಳನ್ನು ಸಮಾಜಕ್ಕೆ ಕೊಡುತ್ತಾರೆ. ಅನೇಕ ವಿದ್ಯಾರ್ಥಿಗಳು ಉನ್ನತ ಸ್ಥಾನಗಳಲ್ಲಿದ್ದಾರೆ. ಪೋಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಿಬೇಕು, ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಕ್ಕಾಗಿ ಓದಬಾರದು, ಖಾಸಗಿ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಇದೇ ವೇಳೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ, ಜಾನಪದ ಕಲಾವಿದ ಗುರುರಾಜ್ ಹೊಸಕೋಟೆ, ಸರ್ಕಾರಿ ನೌಕರರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳಿದ್ದರು.
21 ದೇವನಹಳ್ಳಿ ಚಿತ್ರಸುದ್ದಿ: 03
ರಾಜ್ಯ ಸರ್ಕಾರಿ ನೌಕರರ ಸಂಘ, ಮುಖ್ಯಶಿಕ್ಷಕರ ಸಂಘ, ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಲಿಕಾ ಚಟುವಟಿಕೆ ಪುಸ್ತಕ ಬಿಡುಗಡೆ ಮಾಡಿದರು.