ಸಾರಾಂಶ
ಹುಬ್ಬಳ್ಳಿ: ತಮ್ಮ ಕುರ್ಚಿಗೆ ಕಂಟಕ ಬಂದಾಗ ಮಾತ್ರ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗದವರು ನೆನಪಾಗುತ್ತಾರೆ. ಹಿಂದುಳಿದ ವರ್ಗದವರ ಜಾತಿಗಣತಿಗೆ 2013ರಲ್ಲಿ ಕಾಂತರಾಜ ಆಯೋಗ ರಚಿಸಿ, ಅದರ ವರದಿಯನ್ನು ಅನುಷ್ಠಾನಕ್ಕೆ ತರದೆ ಅನ್ಯಾಯ ಮಾಡಿದ್ದಾರೆ. ಅದನ್ನು ವರದಿ ಎಂದು ಹೇಳದೆ ಬಚ್ಚಿಟ್ಟಿರುವ ಮಹಾ ಮೋಸಗಾರ ಸಿದ್ದರಾಮಯ್ಯ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರ್ಚಿಗಾಗಿ ಕಾಂಗ್ರೆಸ್ಸಿಗರ ನಡುವೆ ಮೂರ್ನಾಲ್ಕು ಗುಂಪುಗಳು ರಚನೆಯಾಗಿದೆ. ಹೀಗಾಗಿ, ಸಿದ್ದರಾಮಯ್ಯ ಹಿಂದುಳಿದ ವರ್ಗ, ಅಹಿಂದ ಎನ್ನುವ ಮೋಸದಾಟಕ್ಕೆ ಚಾಲನೆ ನೀಡಿದ್ದಾರೆ ಎಂದು ದೂರಿದರು.ರಾಹುಲ್ ಯಾವೂರ ದಾಸಯ್ಯ: ಎಐಸಿಸಿ ಸಭೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಹಿಂದುಳಿದ ವರ್ಗಗಳ ಬಿರುದು ನೀಡಿರುವ ಕುರಿತಂತೆ ಪ್ರತಿಕ್ರಿಯಿಸಿ, ನರೇಂದ್ರ ಮೋದಿ 11ವರ್ಷ ದೇಶದ ಪ್ರಧಾನಿಯಾಗಿ, 12 ವರ್ಷ ಗುಜರಾತ್ ಮುಖ್ಯಮಂತ್ರಿಯಾಗಿ ಸಾಮಾಜಿಕ ನ್ಯಾಯದ ಹರಿಕಾರರಾಗಿ ಕೆಲಸ ಮಾಡಿದವರು. ದೇಶದ ಪ್ರಧಾನಿ ಮೋದಿ ಹಿಂದುಳಿದ ವರ್ಗಕ್ಕೆ ಸೇರಿದವರು. ಹೀಗಿರುವಾಗ ರಾಹುಲ್ ಗಾಂಧಿ ಯಾವೂರ ದಾಸಯ್ಯ ಎಂದು ವ್ಯಂಗ್ಯವಾಡಿದರು.
ದೇಶದ ಹಿಂದುಳಿದ ವರ್ಗಗಳ ಬಗ್ಗೆ ಎಳ್ಳಷ್ಟೂ ಜ್ಞಾನವಿಲ್ಲದ ವ್ಯಕ್ತಿ ರಾಹುಲ್ ಗಾಂಧಿ. ಅವರಿಗೂ ಹಿಂದುಳಿದ ವರ್ಗದವರಿಗೂ ಏನ್ ಸಂಬಂಧ? ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಹಿಂದುಳಿದವರು ಯಾವ ರೀತಿ ಬದುಕುತ್ತಿದ್ದಾರೆ ಎನ್ನುವ ಕಲ್ಪನೆಯೂ ಅವರಿಗಿಲ್ಲ ಎಂದರು.ಸುರ್ಜೆವಾಲಾ ನಡೆಸಿದ ಶಾಸಕರ ಸಭೆ ಕುರಿತು ಪ್ರತಿಕ್ರಿಯಿಸಿ, ಪಕ್ಷವೊಂದರ ಪದಾಧಿಕಾರಿಗೆ ಸಂವಿಧಾನ ಬದ್ಧವಾಗಿ ಚುನಾಯಿತ ಶಾಸಕರ ಜತೆ ಸಭೆ ನಡೆಸಲು ಯಾವುದೇ ಅಧಿಕಾರವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.