ಸಾರಾಂಶ
ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳು ಬಯಲು ಮುಕ್ತ ಸ್ವಚ್ಛತೆಯಲ್ಲಿ ರಾಜ್ಯದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿದೆ. ಸ್ವಚ್ಛತೆಗೆ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಕುಟುಂಬಗಳು ಮೊದಲ ಆದ್ಯತೆ ನೀಡಿದ್ದಾರೆ. ಕಾರ್ಕಳದ ನಿಟ್ಟೆ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಎಂಆರ್‌ಎಫ್ ಘಟಕಗಳು ಕಸ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿಂಗಡಿಸಿ ನಿರ್ವಹಣೆ ಮೂಲಕ ವಿಲೇವಾರಿ ಮಾಡುತ್ತಿದ್ದಾರೆ.
ಕಾರ್ಕಳ: ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳು ಬಯಲು ಮುಕ್ತ ಸ್ವಚ್ಛತೆಯಲ್ಲಿ ರಾಜ್ಯದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಶಾಸಕ ವಿ.ಸುನಿಲ್ ಕುಮಾರ್ ಅವರ ಸ್ವಚ್ಛ ಕಾರ್ಕಳ ಸ್ವರ್ಣ ಕಾರ್ಕಳಕ್ಕೆ ಬಲ ತುಂಬಿದೆ ಎಂದು ತಾ.ಪಂ. ಮಾಜಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ತಿಳಿಸಿದರು.
ಅವರು ಕಾರ್ಕಳ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಸ್ವಚ್ಛತೆಗೆ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಕುಟುಂಬಗಳು ಮೊದಲ ಆದ್ಯತೆ ನೀಡಿದ್ದಾರೆ. ಕಾರ್ಕಳದ ನಿಟ್ಟೆ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಎಂಆರ್‌ಎಫ್ ಘಟಕಗಳು ಕಸ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿಂಗಡಿಸಿ ನಿರ್ವಹಣೆ ಮೂಲಕ ವಿಲೇವಾರಿ ಮಾಡುತ್ತಿದ್ದಾರೆ ಎಂದರು.
ಶಾಲಾ ಕಾಲೇಜುಗಳು ಹಾಗೂ ಮನೆ ಆಸ್ಪತ್ರೆಗಳಲ್ಲಿ ಎಲ್ಲ ಕಚೇರಿಗಳಲ್ಲಿ ಸ್ವಚ್ಛತೆ, ಶೌಚಾಲಯ, ಬಚ್ಚಲು ಗುಂಡಿಗಳ ನಿರ್ಮಾಣ ಸೇರಿದಂತೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ, ದ್ರವ ತ್ಯಾಜ್ಯ ನಿರ್ವಹಣೆಗಳನ್ನು ಎಸ್‌ಎಲ್‌ಆರ್‌ಎಂ ಸಿಬ್ಬಂದಿ ಮಾಡುತ್ತಿದ್ದಾರೆ ಎಂದು ಹೇಳಿದರು.ಸಭೆಯಲ್ಲಿ ಮಾಜಿ ಉಪಾಧ್ಯಕ್ಷ ಹರೀಶ್ ನಾಯಕ್, ಹೆಬ್ರಿ ತಾ.ಪಂ. ಮಾಜಿ ಅಧ್ಯಕ್ಷ ರಮೇಶ್ ಪೂಜಾರಿ, ಬಿಜೆಪಿ ಮುಖಂಡರಾದ ನಿರಂಜನ್ ಜೈನ್ ಉಪಸ್ಥಿತರಿದ್ದರು.