ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬುದು ಕನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

| Published : Apr 21 2024, 02:22 AM IST / Updated: Apr 21 2024, 01:29 PM IST

ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬುದು ಕನಸು: ಮುಖ್ಯಮಂತ್ರಿ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರಿಗೆ ಅವರ ಮನೆಯವರನ್ನು ಬಿಟ್ಟರೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ ಎಂದು ಜರಿದರಲ್ಲದೆ, ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಹುರಿದುಕೊಂಡು ಬಾಯಿ ಬಡ್ಡಿದುಕೊಳ್ಳುತ್ತಾರೆ

 ಕೆ.ಆರ್. ನಗರ :  ಲೋಕಸಭಾ ಚುನಾವಣೆ ಮುಗಿದ ನಂತರ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹಗಲು ಕನಸು ಕಾಣುತ್ತಿದ್ದು, ಅದು ಈಡೇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಟ್ಟಣದ ಪುರಸಭೆ ಬಯಲು ರಂಗಮಂದಿರದ ಆವರಣದಲ್ಲಿ ಶನಿವಾರ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರ ನಡೆದ ಬಹಿರಂಗ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಪಕ್ಷದಿಂದ 136 ಮಂದಿ ಶಾಸಕರು ಆಯ್ಕೆಯಾಗಿದ್ದು, ನಮ್ಮೆಲ್ಲರ ಒಗ್ಗಟ್ಟು ಮತ್ತು ರಾಜ್ಯದ ಜನತೆಯ ಆಶೀರ್ವಾದ ಇರುವವರೆಗೂ ನಮ್ಮನ್ನು ಯಾರು ಏನು ಮಾಡಲು ಸಾಧ್ಯವಿಲ್ಲ ಎಂದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರಿಗೆ ಅವರ ಮನೆಯವರನ್ನು ಬಿಟ್ಟರೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ ಎಂದು ಜರಿದರಲ್ಲದೆ, ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಹುರಿದುಕೊಂಡು ಬಾಯಿ ಬಡ್ಡಿದುಕೊಳ್ಳುತ್ತಾರೆ ಎಂದು ತಿಳಿಸಿದರು.

ಪಂಚ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿ ಇರುವವರೆಗೂ ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ, ಜತೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಜನರ ಬೆಂಬಲದಿಂದ ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದು, ಆ ಯೋಜನೆಗಳು ನಿರಂತರವಾಗಿ ಜಾರಿಯಲ್ಲಿ ಇರುತ್ತವೆ ಎಂದು ಭರವಸೆ ನೀಡಿದರು.

ಅಧಿಕಾರದ ಆಸೆಗಾಗಿ ತಮ್ಮ ಅಳಿಯನಿಗೂ ಬಿಜೆಪಿಯಿಂದ ಟಿಕೆಟ್

ಕೊಡಿಸಿದ್ದಾರೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ನವರು ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಲ್ಲ ಕಡೆಯು ತಮ್ಮ ಕುಟುಂಬದವರನ್ನೇ ಸ್ಪರ್ಧಾ ಕಣಕ್ಕಿಳಿಸಿದ್ದು, ಕೋಲಾರ ಲೋಕಸಭಾ ಕ್ಷೇತ್ರ ಮೀಸಲಾಗದಿದ್ದರೆ ಅಲ್ಲಿಯೂ ತಮ್ಮವರನ್ನೇ ನಿಲ್ಲಿಸುತ್ತಿದ್ದರು ಎಂದು ಲೇವಡಿ ಮಾಡಿದರಲ್ಲದೆ, ಅಧಿಕಾರದ ಆಸೆಗಾಗಿ ತಮ್ಮ ಅಳಿಯನಿಗೂ ಬಿಜೆಪಿಯಿಂದ ಟಿಕೆಟ್ ಕೊಡಿಸಿದ್ದಾರೆ ಎಂದರು..

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ, ಶಾಸಕ ಡಿ. ರವಿಶಂಕರ್, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಮಾತನಾಡಿದರು.

ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಳವಳ್ಳಿ ಶಿವಣ್ಣ, ಕಾರ್ಯದರ್ಶಿ ರಾಘು, ತಾಪಂ ಮಾಜಿ ಅಧ್ಯಕ್ಷ ಹಾಡ್ಯಮಹದೇವಸ್ವಾಮಿ, ಎಚ್.ಟಿ. ಮಂಜುನಾಥ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಪಿ. ರಮೇಶ್ ಕುಮಾರ್, ರಾಜ್ಯ ಕಾಂಗ್ರೆಸ್ ಎಸ್ಟಿ ವಿಭಾಗದ ಉಪಾಧ್ಯಕ್ಷ ಶ್ರೀನಿವಾಸ್, ಜಿಪಂ ಮಾಜಿ ಸದಸ್ಯ ಸಿದ್ದಪ್ಪ, ರಾಜಯ್ಯ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ. ಶಿವಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ. ರಮೇಶ್, ಮಾಜಿ ಉಪಾಧ್ಯಕ್ಷ ಎಚ್.ಎಚ್. ನಾಗೇಂದ್ರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಸಂದೇಶ್, ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್. ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹದೇವ್, ಉದಯಶಂಕರ್, ವಕ್ತಾರ ಸೈಯದ್ ಜಾಬೀರ್, ಮಹಿಳಾ ಘಟಕದ ಅಧ್ಯಕ್ಷ ಲತಾ, ರಾಣಿ ಇದ್ದರು.