ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯಲ್ಲಿನ ಐಫ್‌ಐಆರ್, ಅಪರಾಧ, ಪೊಲೀಸರ ಬಗ್ಗೆ ಇರುವ ಭಯ ಹೋಗಲಾಡಿಸುವುದು, ಅಪರಾಧ ತಡೆಗಟ್ಟಲು ಮಕ್ಕಳಲ್ಲಿ ಅರಿವು ಮೂಡಿಸಿ ಕಾನೂನು ತಿಳಿವಳಿಕೆಗೆ ಮೂಡಿಸಲು ತೆರೆದ ಮನೆ ಸಹಕಾರಿಯಾಗಿದೆ.

ಮಳವಳ್ಳಿ:

ಮಕ್ಕಳ ಸುರಕ್ಷತೆ ಮತ್ತು ಪೊಲೀಸರ ಬಗ್ಗೆ ಭಯ ಹೋಗಲಾಡಿಸಲು ತೆರೆದ ಮನೆ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಗ್ರಾಮಾಂತರ ಪೊಲೀಸ್ ಸಿಪಿಐ ಬಸವರಾಜು ತಿಳಿಸಿದರು.

ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಗೆ ಗುರುವಾರ ಆಗಮಿಸಿದ ವಿವಿಧ ಶಾಲೆಗಳ ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಕ್ಸೋ ಕಾಯ್ದೆ ಕುರಿತು ಮಕ್ಕಳು ಸೇರಿದಂತೆ ಎಲ್ಲಾ ಜನತೆಗೂ ಅರಿವು ಹೊಂದಬೇಕು ಎಂದರು.

ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯಲ್ಲಿನ ಐಫ್‌ಐಆರ್, ಅಪರಾಧ, ಪೊಲೀಸರ ಬಗ್ಗೆ ಇರುವ ಭಯ ಹೋಗಲಾಡಿಸುವುದು, ಅಪರಾಧ ತಡೆಗಟ್ಟಲು ಮಕ್ಕಳಲ್ಲಿ ಅರಿವು ಮೂಡಿಸಿ ಕಾನೂನು ತಿಳಿವಳಿಕೆಗೆ ಮೂಡಿಸಲು ತೆರೆದ ಮನೆ ಸಹಕಾರಿಯಾಗಿದೆ ಎಂದರು.

ಮಕ್ಕಳ ಸಹಾಯವಾಣಿ, ಪೊಕ್ಸ್ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮತ್ತಿತರ ವಿಷಯಗಳ ಬಗ್ಗೆ ತಿಳಿಸಿಕೊಟ್ಟರು. ಶಾಲಾ ಮಕ್ಕಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಪೊಲೀಸರ ದೈನಂದಿನ ಕೆಲಸ, ಗಸ್ತು ತಿರುಗುವಿಕೆ ಮತ್ತು ಇತರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ನಾಳೆ ಸಂಕ್ರಾಂತಿ ಕವಿಗೋಷ್ಠಿ

ಶ್ರೀರಂಗಪಟ್ಟಣ:

ತಾಲೂಕಿನ ಬಾಬುರಾಯನ ಕೊಪ್ಪಲು ಸರ್ಕಾರಿ ಪ್ರೌಢಶಾಲೆಯ ಕುವೆಂಪು ಸಭಾಂಗಣದಲ್ಲಿ ಜ.10ರಂದು ಕನ್ನಡ ಸಾಹಿತ್ಯ ಪರಿಷತ್‌ನಿಂದ ಜಿಲ್ಲಾ ಮಟ್ಟದ ಸಂಕ್ರಾಂತಿ ಕವಿಗೋಷ್ಠಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಸಿದ್ದಲಿಂಗು ತಿಳಿಸಿದ್ದಾರೆ.

ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಕಸಾಪ ಅಧ್ಯಕ್ಷ ವಿ.ಹರ್ಷ ಪಟ್ಟೇದೊಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ತಾಲೂಕು ಅಧ್ಯಕ್ಷ ಸಿದ್ದಲಿಂಗು ಪ್ರಾಸ್ತಾವಿಕ ನುಡಿ ನುಡಿಯಲಿದ್ದಾರೆ. ಸಾಹಿತಿ ಹಾಗೂ ಶಿಕ್ಷಕ ಕೊತ್ತತ್ತಿರಾಜು ಅಧ್ಯಕ್ಷತೆ ವಹಿಸಲಿದ್ದಾರೆ.

ಅಖಿಲ ಭಾರತ ಪಂಚಾಯತ್ ಪರಿಷತ್, ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಂ.ಸುಬ್ರಹ್ಮಣ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ.ಶ್ರೀನಿವಾಸ, ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ ಗಾಮನಹಳ್ಳಿ, ಕಸಾಪ ಉಪಾಧ್ಯಕ್ಷ ಗಂಜಾಂ ಮಂಜು, ಕಸಾಪ ನಗರ ಅಧ್ಯಕ್ಷ ಎಂ.ಸುರೇಶ್, ಕೋಶಾಧ್ಯಕ್ಷ ಪುರುಷೋತ್ತಮ ಎಂ, ಬಾಬುರಾಯನಕೊಪ್ಪಲು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಹೇಮಲತಾ ಹರಿಯಾಳ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಸರೋಜ, ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಬಿ.ಶಂಕರ್ ಬಾಬು, ದೈ.ಶಿ.ಶಿ.ಸಂಘದ ಅಧ್ಯಕ್ಷ ಜಿ.ಸೀತಾರಾಮು, ಸಿ.ಎಸ್.ವಾಣಿ, ಕೆ.ಶೆಟ್ಟಹಳ್ಳಿ, ಹೋಬಳಿ, ಕ.ಸಾ.ಪ.ಅಧ್ಯಕ್ಷ ಕೆ.ಜೆ.ಲೋಕೇಶ್, ತಾಲೂಕು ಕಸಾಪ ಪ್ರಧಾನ ಕಾರ್ಯದರ್ಶಿ ಚಂದಗಿರಿಕೊಪ್ಪಲು ಸಿ.ಸ್ವಾಮಿಗೌಡ ಸೇರಿದಂತೆ 20 ಕವಿಗಳು ಕವಿತೆ ವಾಚನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.