ಯಡೂರು: ಕಾಡಾನೆ ಕಾಡಿಗೆ ಅಟ್ಟುವ ಕಾರ್ಯಾಚರಣೆ

| Published : Sep 15 2024, 01:57 AM IST

ಯಡೂರು: ಕಾಡಾನೆ ಕಾಡಿಗೆ ಅಟ್ಟುವ ಕಾರ್ಯಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಡಾನೆ ಕಾಡಿಗೆ ಅಟ್ಟುವ ಕಾರ್ಯಾಚರಣೆ ಅರಣ್ಯ ಇಲಾಖೆಯಿಂದ 2 ದಿನಗಳ ಕಾಲ ನಡೆಯಿತು. ಮೂರು ಕಾಡಾನೆಗಳನ್ನು ಕಾಫಿ ತೋಟದಿಂದ ಅರಣ್ಯಕ್ಕೆ ಅಟ್ಟಲಾಯಿತು.

ಕನ್ನಡಪ್ರಭ ವಾರ್ತೆ ಸಿದ್ದಾಪುರ

ವಿರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಹಾಲುಗುಂದ ಬೈರಂಬಾಡಾ ಯಡೂರು ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯಿಂದ 2 ದಿನಗಳ ಕಾಲ ನಡೆಯಿತು.

ಹಾಲುಗುಂದ ಯಡೂರು ಬೈರಂಬಾಡ ಮುಂತಾದ ಕಡೆಗಳಲ್ಲಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಬೆಳೆಗಾರರಿಗೆ ಹಾಗೂ ಸಾರ್ವಜನಿಕರಿಗೆ ಉಪಟಳ ನೀಡುತ್ತಾ ಬೆಳೆಗಳನ್ನು ನಾಶ ಪಡಿಸುತ್ತಿದ್ದ ಕಾಡಾನೆಗಳ ಹಿಂಡನ್ನು ಪತ್ತೆ ಹಚ್ಚಿ ಮೂರು ಕಾಡಾನೆಗಳನ್ನು ಕಾಫಿ ತೋಟದಿಂದ ಅರಣ್ಯಕ್ಕೆ ಅಟ್ಟಲಾಯಿತು.

ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಜಗನ್ನಾಥ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ ಪಿ ಗೋಪಾಲ್ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ಹಮ್ಮಿಕೊಂಡಿದ್ದು ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಆರ್ ಆರ್ ಟಿ ಮತ್ತು ಇಟಿಎಫ್ ಸುಮಾರು 20 ಕ್ಕೂ ಅಧಿಕ ಸಿಬ್ಬಂದಿ ಪಾಲ್ಗೊಂಡಿದ್ದರು.