ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆ: ಶಾಸಕ ಧೀರಜ್‌ ಮುನಿರಾಜ್ ನೇತೃತ್ವದಲ್ಲಿ ತಿರಂಗಾ ಯಾತ್ರೆ

| Published : May 21 2025, 12:25 AM IST

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆ: ಶಾಸಕ ಧೀರಜ್‌ ಮುನಿರಾಜ್ ನೇತೃತ್ವದಲ್ಲಿ ತಿರಂಗಾ ಯಾತ್ರೆ
Share this Article
  • FB
  • TW
  • Linkdin
  • Email

ಸಾರಾಂಶ

ದೇಶದ ತಂಟೆಗೆ ಬಂದ ಪಾಕಿಸ್ತಾನಕ್ಕೆ ನಮ್ಮ ಸೈನಿಕರು ತಕ್ಕ ಪಾಠ ಕಲಿಸಿದ್ದು, ಇಡೀ ದೇಶ ಸೈನಿಕರ ಕಾರ್‍ಯಕ್ಷಮತೆಗೆ ಮೆಚ್ಚುಗೆ ಸೂಚಿಸಿ ಬೆಂಬಲಿಸುತ್ತಿದೆ. ಇಂದು ನಾವು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ಸೈನಿಕರೇ ಕಾರಣ. ಉಗ್ರವಾದ, ಭಯೋತ್ಪಾದನೆಗಳು ಜಗತ್ತಿಗೆ ಮಾರಕವಾಗಿದ್ದು, ಇವು ಅಳಿಯಬೇಕು. ದೇಶದಲ್ಲಿ ಶಾಂತಿ ನೆಲೆಸಬೇಕು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಆಪರೇಷನ್‌ ಸಿಂದೂರ ಕಾರ್ಯಾಚರಣೆಯ ಯಶಸ್ಸಿನ ಹಿನ್ನೆಲೆ ಸೇನಾಪಡೆಗಳ ಪರಾಕ್ರಮವನ್ನು ಗೌರವಿಸಿ ಹಾಗೂ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಸಂಕಲ್ಪದೊಂದಿಗೆ ದೊಡ್ಡಬಳ್ಳಾಪುರದಲ್ಲಿ ಸೋಮವಾರ ಬೃಹತ್‌ ತಿರಂಗಾ ಯಾತ್ರೆ ನಡೆಯಿತು.

ಬಯಲು ಬಸವಣ್ಣ ದೇವಾಲಯದ ಬಳಿ ಆರಂಭವಾದ ಯಾತ್ರೆ, ತಾಲೂಕು ಕಚೇರಿ ವೃತ್ತದವರೆಗೆ ನಡೆಯಿತು. ದೊಡ್ಡಬಳ್ಳಾಪುರ ಶಾಸಕ ಧೀರಜ್‌ ಮುನಿರಾಜ್‌ ನೇತೃತ್ವದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ನೂರಾರು ದೇಶಭಕ್ತ ಯುವಜನರು ಬೃಹತ್‌ ಧ್ವಜವನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದರು.

ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಧೀರಜ್‌ ಮುನಿರಾಜ್, ದೇಶದ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ ಮೂಡಬೇಕು. ಸೈನಿಕರು, ಹಗಲು- ರಾತ್ರಿ, ಚಳಿ- ಮಳೆ ಎನ್ನದೇ ದೇಶವನ್ನು ಕಾಯುತ್ತಿದ್ದಾರೆ. ಅವರಿಗೆ ಇಡೀ ದೇಶ ನೀಡುತ್ತಿರುವ ಬೆಂಬಲ ರೋಮಾಂಚಕವಾಗಿದೆ. ದೇಶ ಸೇವೆ ಎಂದರೆ ಯುದ್ಧ ಭೂಮಿಯಲ್ಲಿಯೇ ಹೋರಾಟ ನಡೆಸಬೇಕೆಂದೇನಿಲ್ಲ. ನೀವಿರುವ ಸ್ಥಳದಲ್ಲಿಯೇ ದೇಶ ಭಕ್ತಿ ತೋರಿಸಬಹುದು. ನಮ್ಮ ದೇಶ ಎನ್ನುವ ಅಭಿಮಾನ ಪ್ರತಿಯೊಬ್ಬರಲ್ಲಿಯೂ ಮೂಡಬೇಕಿದ್ದು, ಇದು ಸೈನಿಕರಿಗೆ ಉತ್ಸಾಹ ತುಂಬಲಿದೆ ಎಂದು ಹೇಳಿದರು.

ದೇಶದ ತಂಟೆಗೆ ಬಂದ ಪಾಕಿಸ್ತಾನಕ್ಕೆ ನಮ್ಮ ಸೈನಿಕರು ತಕ್ಕ ಪಾಠ ಕಲಿಸಿದ್ದು, ಇಡೀ ದೇಶ ಸೈನಿಕರ ಕಾರ್‍ಯಕ್ಷಮತೆಗೆ ಮೆಚ್ಚುಗೆ ಸೂಚಿಸಿ ಬೆಂಬಲಿಸುತ್ತಿದೆ. ಇಂದು ನಾವು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ಸೈನಿಕರೇ ಕಾರಣ. ಉಗ್ರವಾದ, ಭಯೋತ್ಪಾದನೆಗಳು ಜಗತ್ತಿಗೆ ಮಾರಕವಾಗಿದ್ದು, ಇವು ಅಳಿಯಬೇಕು. ದೇಶದಲ್ಲಿ ಶಾಂತಿ ನೆಲೆಸಬೇಕು ಎಂದರು.

ಬಿಜೆಪಿ ಹಿರಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ ಸೇರಿದಂತೆ ಹಲವು ಗಣ್ಯರು, ಪ್ರಮುಖರು ಪಾಲ್ಗೊಂಡಿದ್ದರು.

19ಕೆಡಿಬಿಪಿ9- ದೊಡ್ಡಬಳ್ಳಾಪುರದಲ್ಲಿ ಸೇನಾಪಡೆಗಳ ಆಪರೇಷನ್ ಸಿಂದೂರ್‌ ಯಶಸ್ವಿ ಹಿನ್ನೆಲೆಯಲ್ಲಿ ಬೃಹತ್‌ ತಿರಂಗಾ ಯಾತ್ರೆ ನಡೆಯಿತು.--19ಕೆಡಿಬಿಪಿ10-

ದೊಡ್ಡಬಳ್ಳಾಪುರದಲ್ಲಿ ನಡೆದ ತಿರಂಗಾ ಯಾತ್ರೆಯಲ್ಲಿ ಬೃಹತ್‌ ತ್ರಿವರ್ಣ ಧ್ವಜದ ಮೆರವಣಿಗೆ ನಡೆಯಿತು.