ಸಾರಾಂಶ
ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ರವಿ ಚನ್ನಸಂದ್ರ ನೇತೃತ್ವದಲ್ಲಿ ಪದಾಧಿಕಾರಿಗಳು, ಕೂಲಿ ಕಾರ್ಮಿಕರು ಹಾಗೂ ರೈತರು ತ್ರಿವರ್ಣ ಧ್ವಜವನ್ನು ಹಿಡಿದು ಆಪರೇಷನ್ ಸಿಂಧೂರ ದಾಳಿಯು ಮೆಚ್ಚುಗೆಗೆ ಪಾತ್ರವಾಗಿರುವ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಶಿ, ವಿಂಗ್ ಕಮಾಂಡರ್ ಮೋಮಿಕಾ ಸಿಂಗ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಂಭ್ರಮಿಸಿದರು.
ಕನ್ನಡಪ್ರಭ ವಾರ್ತೆ ಮದ್ದೂರು
ಆಪರೇಷನ್ ಸಿಂದೂರ ಹೆಸರಿನಲ್ಲಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿ ಹಿನ್ನೆಲೆಯಲ್ಲಿ ಗುರುವಾರ ಪಟ್ಟಣದ ಎಪಿಎಂಸಿ ಎಳನೀರು ಮಾರುಕಟ್ಟೆ ವರ್ತಕರು ಸಂಭ್ರಮಾಚರಣೆ ನಡೆಸಿದರು.ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ರವಿ ಚನ್ನಸಂದ್ರ ನೇತೃತ್ವದಲ್ಲಿ ಪದಾಧಿಕಾರಿಗಳು, ಕೂಲಿ ಕಾರ್ಮಿಕರು ಹಾಗೂ ರೈತರು ತ್ರಿವರ್ಣ ಧ್ವಜವನ್ನು ಹಿಡಿದು ಆಪರೇಷನ್ ಸಿಂಧೂರ ದಾಳಿಯು ಮೆಚ್ಚುಗೆಗೆ ಪಾತ್ರವಾಗಿರುವ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಶಿ, ವಿಂಗ್ ಕಮಾಂಡರ್ ಮೋಮಿಕಾ ಸಿಂಗ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಂಭ್ರಮಿಸಿದರು.
ನಂತರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪರ ವರ್ತಕರು ಘೋಷಣೆ ಕೂಗಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು,ಆಪರೇಷನ್ ಸಿಂದೂರ ಹೆಸರಿನಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿ ಉಗ್ರರಿಗಷ್ಟೇ ಅಲ್ಲ ಭಯೋತ್ಪಾದಕರನ್ನು ಸಲಹುತ್ತಿರುವ ನೆರೆ ರಾಷ್ಟ್ರ ಪಾಕಿಸ್ತಾನಕ್ಕೂ ತಕ್ಕ ಶಾಸ್ತಿ ಮಾಡಿದೆ ಎಂದು ವರ್ತಕರ ಸಂಘದ ಮುಖಂಡರು ಹರ್ಷ ವ್ಯಕ್ತಪಡಿಸಿದರು.
ಈ ವೇಳೆ ಪಹಲ್ಗಾ ಮ್ ದಾಳಿಯಲ್ಲಿ ಹುತಾತ್ಮರಾದ ಕುಟುಂಬಗಳಿಗೆ ಮತ್ತು ದೇಶದ ಜನತೆ ಭಾರತೀಯ ಸೇನೆ ಕಾರ್ಯಾಚರಣೆ ಆತ್ಮಸ್ಥೈರ್ಯ ನೀಡಿದೆ ಎಂದು ಸಂಘದ ಅಧ್ಯಕ್ಷ ರವಿ ಚನ್ನಸಂದ್ರ ಅಭಿಪ್ರಾಯಪಟ್ಟರು.ಈ ವೇಳೆ ವರ್ತಕರ ಸಂಘದ ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ರಾಜು, ನಿರ್ದೇಶಕರಾದ ಚನ್ನಸಂದ್ರ ಯೋಗೇಶ್, ಶಿವಣ್ಣ ಬಿಳಿ ಗೌಡ, ಕೃಷ್ಣ,ಶಿವರಾಜು, ಹೊನ್ನೇಶ, ವೆಂಕಟೇಶ, ಶಿವು, ಪ್ರತಾಪ, ಲೋಕೇಶ್ ಸೇರಿದಂತೆ ನೂರಾರು ವರ್ತಕರು, ರೈತರು ಹಾಗೂ ಕೂಲಿ ಕಾರ್ಮಿಕರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.