ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಆಪರೇಷನ್ ಸಿಂದೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರಿಗೆ ಶುಭವಾಗಲಿ ಎಂದು ಪ್ರಾರ್ಥಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು.ಬಿಜೆಪಿ ಮುಖಂಡ, ಮನ್ಮುಲ್ ನಿರ್ದೇಶಕ ಎಸ್. ಪಿ.ಸ್ವಾಮಿ, ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಸತೀಶ್ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಕಾಶಿ ವಿಶ್ವನಾಥಸ್ವಾಮಿಗೆ ಸಂಕಲ್ಪದೊಂದಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಆಪರೇಷನ್ ಸಿಂದೂರ ಮತ್ತಷ್ಟು ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದರು.
ನಂತರ ಕಾರ್ಯಕರ್ತರಿಗೆ ಮಹಾಮಂಗಳಾರತಿಯೊಂದಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಪೂಜೆ ಬಳಿಕ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ಆಪರೇಷನ್ ಸಿಂದೂರ ದಾಳಿಯ ಮೆಚ್ಚುಗೆಗೆ ಪಾತ್ರವಾಗಿರುವ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಶಿ, ವಿಂಗ್ ಕಮಾಂಡರ್ ಮೋಮಿಕಾ ಸಿಂಗ್ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸುವುದರೊಂದಿಗೆ ಬಿಜೆಪಿ ಕಾರ್ಯಕರ್ತರು ಭಾರತೀಯ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಿದರು.ಈ ವೇಳೆ ಎಸ್.ಪಿ.ಸ್ವಾಮಿ ಮಾತನಾಡಿ, ಭಾರತೀಯ ಸೈನಿಕರು ನಿರಂತರ ಕಾರ್ಯಾಚರಣೆ ನಡೆಸುವ ಮೂಲಕ ಭಯೋತ್ಪಾದನೆಯನ್ನು ಬುಡ ಸಮೇತ ಕಿತ್ತು ಹಾಕಬೇಕು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಕ್ರಮಗಳಿಗೆ ಜಾತಿ,ಭೇದ, ಪಕ್ಷಭೇದ ಮರೆತು ಒಗ್ಗಟ್ಟಾಗಿ ಬೆಂಬಲ ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ಬಿಜೆಪಿ ಮುಖಂಡರಾದ ಎಂ.ಸಿ.ಸಿದ್ದು, ಕೆ.ಟಿ.ನವೀನ, ವೆಂಕಟಸ್ವಾಮಿ, ವಿಜಯರಾಜ್ ಮಿಥುನ್, ಎಚ್.ಪಿ.ಅಭಿ, ಕುಶಾ, ಶ್ವೇತಾ, ಮಮತಾರಾಂಕಾ, ತ್ರಿವೇಣಿ, ಕಾಂತಾಮಣಿ, ಸೌಮ್ಯಶ್ರೀನಿವಾಸ್, ಸಿದ್ದಮ್ಮ,ಕೆಂಪಬೋರಯ್ಯ, ಶಾಮಿಯಾನ ಗುರುಸ್ವಾಮಿ,ನಿತ್ಯಾನಂದ, ಶ್ರೀನಿವಾಸ ಶೆಟ್ಟಿ, ಎಂ. ಸಿ.ಲಿಂಗರಾಜು, ಮತ್ತಿತರು ಇದ್ದರು.
-----------9ಕೆಎಂಎನ್ ಡಿ21
ಮದ್ದೂರಿನ ಕಾಶಿವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.