ಡಿಸಿಸಿ ಅಧ್ಯಕ್ಷರ ಆಯ್ಕೆಗೆ ಉಸ್ತುವಾರಿಗಳಿಂದ ಅಭಿಪ್ರಾಯ ಸಂಗ್ರಹ

| Published : Jul 09 2025, 12:21 AM IST / Updated: Jul 09 2025, 12:22 AM IST

ಡಿಸಿಸಿ ಅಧ್ಯಕ್ಷರ ಆಯ್ಕೆಗೆ ಉಸ್ತುವಾರಿಗಳಿಂದ ಅಭಿಪ್ರಾಯ ಸಂಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಶಾಸಕ ಶಿವಶಂಕರರೆಡ್ಡಿ, ಸಂಪಂಗಿ ಕೆಪಿಸಿಸಿ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಂದ ಅಭಿಪ್ರಾಯ ಸಂಗ್ರಹಣೆ ಮಾಡಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಶಾಸಕ ಶಿವಶಂಕರರೆಡ್ಡಿ, ಸಂಪಂಗಿ ಕೆಪಿಸಿಸಿ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಂದ ಅಭಿಪ್ರಾಯ ಸಂಗ್ರಹಣೆ ಮಾಡಿದರು. ಮಾಜಿ ಶಾಸಕ, ಕಾಂಗ್ರೆಸ್ ಉಸ್ತುವಾರಿ ಶಿವಶಂಕರರೆಡ್ಡಿ ಮಾತನಾಡಿ, ರಾಜ್ಯದ ೩೧ ಜಿಲ್ಲೆಗಳಲ್ಲೂ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆದೇಶ ಹೊರಡಿಸಿದೆ. ಪಕ್ಷ ಸಂಘಟನೆ ಹಿತದೃಷ್ಟಿಯಿಂದ ಉತ್ತಮವಾಗಿ ಕೆಲಸ ಮಾಡಿರುವವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು, ಪಕ್ಷದಲ್ಲಿ ಈವರೆವಿಗೂ ಕೆಲಸ ಮಾಡಿರುವ ವಿವಿಧ ಮುಂಚೂಣಿ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿ ಕಳುಹಿಸಿಕೊಡಲು ಕೆಪಿಸಿಸಿ ನಮ್ಮನ್ನು ಚಾಮರಾಜನಗರ ಜಿಲ್ಲಾ ಉಸ್ತುವಾರಿಯಾಗಿ ನೇಮಿಸಿದೆ ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ತಾವು ೯ವರ್ಷಗಳ ಕಾಲ ಪಕ್ಷವಹಿಸಿದ ಎಲ್ಲ ಕೆಲಸಗಳನ್ನು ಸಮರ್ಥವಾಗಿ ನಿರ್ವಹಿಸಲು ಪಕ್ಷದ ಮುಂಚೂಣಿ ಘಟಕದ ಪದಾಧಿಕಾರಿಗಳು ತಮಗೆ ತುಂಬು ಹೃದಯದ ಸಹಕಾರ ನೀಡಿದ್ದಾರೆ. ಕೆಪಿಸಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲು ಮುಂದಾಗಿದೆ. ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಪದಾಧಿಕಾರಿಗಳ ಬದಲಾಣೆ ಮಾಡುವ ಪಕ್ಷದ ನಿಲುವು ಸ್ವಾಗತಾರ್ಹ ಎಂದು ಹೇಳಿದರು. ಮಾಜಿಶಾಸಕ, ಕಾಂಗ್ರೆಸ್ ಉಸ್ತುವಾರಿ ಸಂಪಂಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸವರಾಜು, ಮಿಲ್ಲರ್‌ಧರ್ಮಸೇನಾ, ಗುಂಡ್ಲುಪೇಟೆಶಾಸಕ ಗಣೇಶ್ ಪ್ರಸಾದ್, ಕೊಳ್ಳೇಗಾಲಶಾಸಕ ಎ.ಆರ್.ಕೃಷ್ಣಮೂರ್ತಿ, ಚುಡಾಅಧ್ಯಕ್ಷ ಮಹಮದ್ ಅಸ್ಗರ್,

ಮಹಿಳಾ ಘಟಕದ ಅಧ್ಯಕ್ಷೆ ಲತಾರಾಜಶೇಖರ್ ಜತ್ತಿ, ಮಾಜಿಶಾಸಕ ಜಿ.ಎನ್.ನಂಜುಂಡಸ್ವಾಮಿ, ಆಕಾಂಕ್ಷಿಗಳಾದ ಎ.ಎಸ್.ಗುರುಸ್ವಾಮಿ, ಬಿ.ಕೆ.ರವಿಕುಮಾರ್, ಹಂಗಳನಂಜಪ್ಪ, ಕೆರೆಹಳ್ಳಿನವೀನ್, ಕೊಳ್ಳೇಗಾಲ ತೋಟೇಶ್, ಹನೂರುಮುಕುಂದವರ್ಮ, ನಾಗೇಂದ್ರ, ಹೆಗ್ಗೊಠಾರಮಹದೇವಸ್ವಾಮಿ ಸೇರಿದಂತೆ ಜಿಪಂ,ತಾಪಂ, ಪಟ್ಟಣಪಂಚಾಯಿತಿ, ಪುರಸಭೆ, ನಗರಸಭೆ, ಗ್ರಾಪಂ ಹಾಲಿಮಾಜಿ ಚುನಾಯಿತ ಜನಪ್ರತಿನಿಧಿಗಳು, ಕಾರ್ಯಕರ್ತರು. ಮುಖಂಡರು ಹಾಜರಿದ್ದರು.