ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದ್ದು, ಸೆಪ್ಟೆಂಬರ್ 23, 2026ರ ವರೆಗೆ ಸಾರ್ವಜನಿಕ ಪರಿಶೀಲನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ಮತದಾರರು ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.
ಹೊಸಪೇಟೆ: ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದ್ದು, ಸೆಪ್ಟೆಂಬರ್ 23, 2026ರ ವರೆಗೆ ಸಾರ್ವಜನಿಕ ಪರಿಶೀಲನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ಮತದಾರರು ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿಶೇಷ ಮತದಾರ ಪರಿಷ್ಕರಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮ್ಯಾಪಿಂಗ್ ಆಗದ ಮತದಾರರಿಗೆ ಸಂಬಂಧಿಸಿದಂತೆ ಒಟ್ಟು 30,623 ಮತದಾರರಿಗೆ ನೋಟಿಸ್ ನೀಡಲಾಗಿದೆ. ನೋಟಿಸ್‌ಗೆ ಉತ್ತರವಾಗಿ ಸಂಬಂಧಪಟ್ಟವರು ಅಗತ್ಯ ದಾಖಲೆಗಳೊಂದಿಗೆ ಎಇಆರ್‌ಒ ಮುಂದೆ ಹಾಜರಾಗಬೇಕಾಗುತ್ತದೆ. ಸೂಕ್ತ ಪರಿಶೀಲನೆ ನಂತರ ಎಇಆರ್‌ಒ ಅವರು ಸ್ಪೀಕಿಂಗ್ ಆರ್ಡರ್ ಮೂಲಕ ಹೆಸರು ಸೇರಿಸಬೇಕೆ ಅಥವಾ ಬೇಡವೇ ಎಂಬುದನ್ನು ತೀರ್ಮಾನಿಸುತ್ತಾರೆ ಎಂದರು.ಹೊಸದಾಗಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಬಯಸುವವರು ‘ಫಾರ್ಮ್ 6’ ಅನ್ನು ಸಲ್ಲಿಸಬಹುದು. ಆಧಾರ್ ಕಾರ್ಡ್ ಕೇವಲ ಗುರುತಿನ ಚೀಟಿಯಾಗಿ ಮಾತ್ರ ಪರಿಗಣಿಸಲಾಗುತ್ತದೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು ಮತದಾರರು 9,94,157 ಇದ್ದು, ಇದರಲ್ಲಿ ಪುರುಷ ಮತದಾರರು 4,99,999, ಮಹಿಳಾ ಮತದಾರರು: 4,94,952, 106 ತೃತೀಯ ಲಿಂಗಿಗಳು ಹಾಗೂ 353 ಸೇವಾ ಮತದಾರರು ಸೇರಿದ್ದಾರೆ. ಈ ಪೈಕಿ 9,722 ಮತದಾರರು ಅಸಂಗತತೆ ವಿಭಾಗದಲ್ಲಿ ಹಾಗೂ 10,901 ಮತದಾರರು ಮ್ಯಾಪಿಂಗ್ ಆಗದ ವಿಭಾಗದಲ್ಲಿ ಗುರುತಿಸಲ್ಪಟ್ಟಿದ್ದಾರೆ ಎಂದರು.
ವಿಧಾನಸಭಾ ಕ್ಷೇತ್ರವಾರು ಹಡಗಲಿ ಕ್ಷೇತ್ರದಲ್ಲಿ 8,474, ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ 10,205, ವಿಜಯನಗರ ಕ್ಷೇತ್ರದಲ್ಲಿ 2,436, ಕೂಡ್ಲಿಗಿ ಕ್ಷೇತ್ರದಲ್ಲಿ 1,821 ಹಾಗೂ ಹರಪನಹಳ್ಳಿ ಕ್ಷೇತ್ರದಲ್ಲಿ 7,687 ಮತದಾರರಿಗೆ ನೋಟಿಸ್ ನೀಡಬೇಕಾಗಿದೆ. ಅಲ್ಲದೆ ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಆಕ್ಷೇಪಣೆ ಅಥವಾ ದೂರುಗಳಿದ್ದಲ್ಲಿ ಚುನಾವಣಾ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ. ಸಾರ್ವಜನಿಕರು ಪರಿಸಿಲಿಸಲು ಆಧಿಕೃತ ಜಾಲತಾಣ https://vijayanagara.nic.in/en/x/ ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಸುದ್ದಿಗೋಷ್ಠಿಯಲ್ಲಿದ್ದರು.