ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ : ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಚಳವಳಿ

| Published : Jan 07 2025, 12:31 AM IST / Updated: Jan 07 2025, 12:42 PM IST

ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ : ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಚಳವಳಿ
Share this Article
  • FB
  • TW
  • Linkdin
  • Email

ಸಾರಾಂಶ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ ಜಿಲ್ಲಾಡಳಿತ ಕ್ರಮ ವಿರೋಧಿಸಿ ಸಂಘ-ಸಂಸ್ಥೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳಿಸುವ ಮೂಲಕ ಚಳವಳಿ ನಡೆಸಲಾಗುತ್ತದೆ 

 ಗಂಗಾವತಿ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ ಜಿಲ್ಲಾಡಳಿತ ಕ್ರಮ ವಿರೋಧಿಸಿ ಸಂಘ-ಸಂಸ್ಥೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳಿಸುವ ಮೂಲಕ ಚಳವಳಿ ನಡೆಸಲಾಗುತ್ತದೆ ಎಂದು ನಿರ್ಮಲ ತುಂಗಭದ್ರಾ ಅಭಿಯಾನದ ಸಂಚಾಲಕ ಸಂತೋಷ ಕೆಲೋಜಿ ಹೇಳಿದರು.

ನಗರದ ಲಯನ್ಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ಥಾವರ ಸ್ಥಾಪನೆ ಕುರಿತು ಸಾಹಿತಿಗಳು, ಸಂಶೋಧಕರು, ಸ್ಥಳೀಯ ಜನಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸಿದ್ದಲ್ಲದೆ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಹಿರೇಬೆಣಕಲ್- ಚಿಕ್ಕಬೆಣಕಲ್ ಗ್ರಾಮಗಳ ಸಮೀಪದಲ್ಲಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 1200 ಎಕರೆ ಭೂಮಿಯನ್ನು ತಾಲೂಕು ಆಡಳಿತ ಗುರುತಿಸಿದೆ. ಈ ಪ್ರದೇಶದಲ್ಲಿ ಸ್ಥಾವರ ಸ್ಥಾಪನೆಯಾಗುವುದರಿಂದ ಪರಿಸರ ಹಾಳಾಗುವುದಲ್ಲದೆ, ವನ್ಯ ಜೀವಿಗಳಿಗೂ ಕುತ್ತು ಬರುವ ಸಂಭವ ಇದೆ. ಅಲ್ಲದೇ ಈ ಭಾಗದಲ್ಲಿ ಐತಿಹಾಸಿಕ ಮೋರೇರ ಶಿಲಾ ಸಮಾಧಿಗಳು, ಕುಮ್ಮಟದುರ್ಗಾ, ಹೇಮಗುಡ್ಡ, ಅಂಜನಾದ್ರಿ ಸೇರಿದಂತೆ ಐತಿಹಾಸಿಕ ಸ್ಮಾರಕಗಳು ಇವೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು. ಕೂಡಲೇ ಈ ಯೋಜನೆ ಕೈ ಬಿಡಬೇಕೆಂದು ಆಗ್ರಹಿಸಿದರು. ಜೊತೆಗೆ ನಗರ ಸೇರಿದಂತೆ ತಾಲೂಕಿನಲ್ಲಿರುವ ಸಂಘ-ಸಂಸ್ಥೆಯವರ ಜೊತೆಗೂಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ಮಾಡಲಾಗುತ್ತದೆ ಎಂದರು.

ಒಂದು ವೇಳೆ ಸರ್ಕಾರ ಇದಕ್ಕೆ ಸ್ಪಂದಿಸದಿದ್ದರೆ ತಾಲೂಕಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳಿಂದ ಪ್ರಧಾನಿಗೆ ಪತ್ರ ಕಳಿಸಿ ಚಳವಳಿ ನಡೆಸಲು ನಿರ್ಧರಿಸುತ್ತೇವೆ ಎಂದರು.