ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿಗೆ ವಿರೋಧ

| Published : Mar 22 2025, 02:01 AM IST

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿಗೆ ವಿರೋಧ
Share this Article
  • FB
  • TW
  • Linkdin
  • Email

ಸಾರಾಂಶ

ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲು ನೀಡಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಶೇ.4 ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಶುಕ್ರವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಿದ್ದರಾಮಯ್ಯ ಮತ್ತು ಅವರ ಸರ್ಕಾರದ ವಿರುದ್ಧ ಭಿತ್ತಿ ಪತ್ರಗಳ ಹಿಡಿದು ಆಕ್ರೋಶ ಹೊರ ಹಾಕಿದರು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾದ ಕಾರ್ಯದರ್ಶಿ ಪ್ರಶಾಂತ್ ಕುಮಾರ್, ಸಿದ್ದರಾಮಯ್ಯ ನೇತೃತ್ವ ಸರ್ಕಾರ ಅಡಳಿತಕ್ಕೆ ಬಂದಾಗಿನಿಂದಲೂ ಸಹಾ ಪರಿಶಿಷ್ಟ ವರ್ಗ ಮತ್ತು ಪಂಗಡವನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ. ಗ್ಯಾರಂಟಿಗಳಿಗೆ ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ಬಳಕೆ ಮಾಡಿಕೊಂಡಿದ್ದಾರೆ. ಈಗ ಟೆಂಡರ್ ವಿಚಾರದಲ್ಲಿಯೂ ಮುಖ್ಯಮಂತ್ರಿಗಳು ಒಂದು ವರ್ಗದ ಓಲೈಕೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಸರ್ಕಾರದ ಯಾವುದೇ ಕಾಮಗಾರಿಗಳ ಟೆಂಡರ್ ಗಳಲ್ಲಿ ಎಲ್ಲಾ ವರ್ಗದವರು ಭಾಗವಹಿಸುತ್ತಾ ಬಂದಿದ್ದು, ಇದೀಗ ಹೊಸದಾಗಿ ಮುಸ್ಲಿಂರ ಓಲೈಕೆ ಮಾಡುವುದಕ್ಕಾಗಿ ಟೆಂಡರ್‌ನಲ್ಲ ಅವರಿಗಾಗಿ ಮೀಸಲಾತಿ ನೀಡಿದ್ದಾರೆ. ಇದು ಸರಿಯಾದ ಕ್ರಮವಲ್ಲ, ಇದನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಇಲ್ಲವಾದಲ್ಲಿ ಬಿಜೆಪಿ ರಾಜ್ಯ ಮಟ್ಟದಲ್ಲಿ ಹೋರಾಟವನ್ನು ನಡೆಸುತ್ತದೆ ಎಂದು ಎಚ್ಚರಿಸಿದರು.

ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜನ್ ಮಾತನಾಡಿ, ರಾಜ್ಯದಲ್ಲಿ ಆಡಳಿತವನ್ನು ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಪದೇ ಪದೇ ಹಿಂದುಗಳ ಮೇಲೆ ದೌರ್ಜನ್ಯ ನಡೆಸುತ್ತಾ ಬಂದಿದ್ದು ಸಾಲದೆಂಬಂತೆ ಇದೀಗ ಮುಸ್ಲಿಮರ ಓಲೈಕೆ ಮಾಡುವುದಕ್ಕಾಗಿ ಗುತ್ತಿಗೆ ಟೆಂಡರ್ ನಲ್ಲಿ ಅವರಿಗೆ ಶೇ.4 ಮೀಸಲಿಡಲಾಗಿದೆ. ಇದರಿಂದ ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಮೂಡಿ ಬರುತ್ತವೆ. ರಾಜ್ಯದಲ್ಲಿ ಆಶಾಂತಿ ವಾತಾವರಣ ಉಂಟಾಗುತ್ತದೆ. ಇದಕ್ಕೆ ಸಿದ್ದರಾಮಯ್ಯರವರು ಅವಕಾಶವನ್ನು ನೀಡಬಾರದು. ಈ ಕೂಡಲೇ ಮುಸ್ಲೀಮರಿಗೆ ನೀಡಿರುವ ಈ ಮೀಸಲಾತಿಯನ್ನು ಹಿಂಡೆಪಯಬೇಕು ಎಂದು ಆಗ್ರಹಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಎ.ಮುರಳಿ, ಖಜಾಂಚಿ ಮಾಧುರಿ ಗೀರೀಶ್, ರಾಜ್ಯ ಮಹಿಳಾ ಮೋರ್ಚಾದ ಕಾರ್ಯದರ್ಶಿ ಶ್ಯಾಮಲಾ ಶಿವಪ್ರಕಾಶ್, ಮುಖಂಡರಾದ ಕುಮಾರಸ್ವಾಮಿ, ಜಿಪಂಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶೀ ರಾಮದಾಸ್, ಜಿಲ್ಲಾ ಎಸ್ ಟಿ ಮೋರ್ಚಾದ ಅಧ್ಯಕ್ಷ ಶಿವಣ್ಣ ಎಸ್ ಸಿ ಮೋರ್ಚಾದ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಮಹಿಳಾ ಮಂಡಲದ ಅಧ್ಯಕ್ಷೆ ಶೈಲಜಾರೆಡ್ಡಿ, ನಾಯಕನಹಟ್ಟಿ ಮಂಡಲ ಅಧ್ಯಕ್ಷ ಮಲ್ಲೇಶ್, ರಾಜ್ಯ ಓಬಿಸಿ ಮೋರ್ಚಾ ಉಪಾಧ್ಯಕ್ಷ ಶಿವಕುಮಾರ್, ವಕ್ತಾರರಾದ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್, ಮೊಳಕಾಲ್ಮೂರು ಮಂಡಲ ಅಧ್ಯಕ್ಷ ಶ್ರೀರಾಮರೆಡ್ಡಿ, ಪದಾಧಿಕಾರಿಗಳಾದ ಶಾಂತಮ್ಮ, ಚಂದ್ರಿಕಾ ಲೋಕನಾಥ್, ಗಾಯತ್ರಿದೇವಿ, ವೀಣಾ, ಕಾಂಚನ, ಸುಮ, ಕಿರಣ್, ಯಶವಂತ, ಚಳ್ಳಕೆರೆ ಮಂಡಲ ಅಧ್ಯಕ್ಷ ಸುರೇಶ್, ಕಲ್ಲೇಶಯ್ಯ, ನಾಗರಾಜ್ ಪಾಂಡು ಓಬಿಸಿ ಮೋರ್ಚಾದ ಪ್ರಶಾಂತ್ ಶಂಭು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.