ಕೇಂದ್ರ ಸರ್ಕಾರದ ಬ್ಯಾಂಕಿಂಗ್‌ ಕ್ಷೇತ್ರದ ನೀತಿಗಳನ್ನು ವಿರೋಧಿಸಿ ಯುನೈಟೆಡ್‌ ಫೋರಂ ಆಫ್ ಬ್ಯಾಂಕ್‌ ಯೂನಿಯನ್ಸ್‌ ಕರೆ ನೀಡಿದ್ದ ರಾಷ್ಟ್ರವ್ಯಾಪಿ ಬ್ಯಾಂಕ್‌ ಮುಷ್ಕರ ಹಿನ್ನೆಲೆಯಲ್ಲಿ ಶುಕ್ರವಾರ ಗದಗ ನಗರದಲ್ಲಿ ವಿವಿಧ ಬ್ಯಾಂಕ್‌ ಗಳ 200ಕ್ಕೂ ಹೆಚ್ಚು ನೌಕರರು ಹಾಗೂ ಅಧಿಕಾರಿಗಳು ಮುಷ್ಕರ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗದಗ: ಕೇಂದ್ರ ಸರ್ಕಾರದ ಬ್ಯಾಂಕಿಂಗ್‌ ಕ್ಷೇತ್ರದ ನೀತಿಗಳನ್ನು ವಿರೋಧಿಸಿ ಯುನೈಟೆಡ್‌ ಫೋರಂ ಆಫ್ ಬ್ಯಾಂಕ್‌ ಯೂನಿಯನ್ಸ್‌ ಕರೆ ನೀಡಿದ್ದ ರಾಷ್ಟ್ರವ್ಯಾಪಿ ಬ್ಯಾಂಕ್‌ ಮುಷ್ಕರ ಹಿನ್ನೆಲೆಯಲ್ಲಿ ಶುಕ್ರವಾರ ಗದಗ ನಗರದಲ್ಲಿ ವಿವಿಧ ಬ್ಯಾಂಕ್‌ ಗಳ 200ಕ್ಕೂ ಹೆಚ್ಚು ನೌಕರರು ಹಾಗೂ ಅಧಿಕಾರಿಗಳು ಮುಷ್ಕರ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈ ಸಂದರ್ಭದಲ್ಲಿ ನೌಕರರು ಒತ್ತಾಯಿಸಿದರು.

ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣ ತಡೆಯುವುದು, ವಾರಕ್ಕೆ ಐದು ದಿನಗಳ ಬ್ಯಾಂಕಿಂಗ್‌ ವ್ಯವಸ್ಥೆ ಜಾರಿಗೊಳಿಸುವುದು, ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಕ್ಲರ್ಕ್‌, ಸಬ್‌, ಸ್ಟಾಫ್‌ ಹಾಗೂ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವುದು, ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಬ್ಯಾಂಕ್‌ ನೌಕರರ ಸಾಧನೆ ಆಧಾರಿತ ಪ್ರೋತ್ಸಾಹಧನ ಯೋಜನೆಯಿಂದ ಬಹುತೇಕ ನೌಕರರಿಗೆ ಅನ್ಯಾಯವಾಗುತ್ತಿದೆ. ಶೇ. 5ರಷ್ಟು ನೌಕರರಿಗೆ ಮಾತ್ರ ಹೆಚ್ಚಿನ ಪ್ರಯೋಜನ ದೊರೆಯುವ ವ್ಯವಸ್ಥೆ ಬದಲಾಗಿ ಎಲ್ಲ ನೌಕರರಿಗೂ ನ್ಯಾಯಯುತ ವೇತನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಬ್ಯಾಂಕ್‌ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹನುಮೇಶ ಗಂಗರಾವತ್ಕರ್, ಬ್ಯಾಂಕಿಂಗ್‌ ಕ್ಷೇತ್ರದ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸಮರ್ಪಕ ಸ್ಪಂದನೆ ದೊರೆತಿಲ್ಲ. ವಾರಕ್ಕೆ ಐದು ದಿನಗಳ ಬ್ಯಾಂಕಿಂಗ್‌ ವ್ಯವಸ್ಥೆ ಸೇರಿದಂತೆ ಒಪ್ಪಂದವಾಗಿರುವ ಬೇಡಿಕೆಗಳನ್ನು ಕೂಡಲೇ ಜಾರಿಗೊಳಿಸಬೇಕು. ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡುವ ಬದಲು ಅವುಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಒತ್ತಾಯಿಸಿದರು. ಮುಷ್ಕರದಿಂದ ಬ್ಯಾಂಕ್‌ ಶಾಖೆಗಳಲ್ಲಿ ಸೇವೆ ವ್ಯತ್ಯಯಗೊಂಡು ಗ್ರಾಹಕರು ಪರದಾಡುವಂತಾಯಿತು.