ಸಾರಾಂಶ
ರಾಜ್ಯ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲು ಆದೇಶ ಹೊರಡಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹನೂರು ಪಟ್ಟಣದ ಸೆಸ್ಕ್ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಹನೂರು
ರಾಜ್ಯ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲು ಆದೇಶ ಹೊರಡಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹನೂರು ಪಟ್ಟಣದ ಸೆಸ್ಕ್ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಸೆಸ್ಕಾಂ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಕಾರರು ರಾಜ್ಯ ಸರ್ಕಾರ ಹಾಗೂ ಸೆಸ್ಕ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ರೈತ ಸಂಘಟನೆಯ ಕಾರ್ಯಾಧ್ಯಕ್ಷ ಶೈಲೇಂದ್ರ ಕುಮಾರ್ ಮಾತನಾಡಿ, ದೇಶದಲ್ಲಿ ಕೃಷಿ ಪಂಪ್ ಸೆಟ್‌ಗಳನ್ನು ಅಳವಡಿಸಿಕೊಂಡು ವ್ಯವಸಾಯ ಮಾಡುತ್ತಿರುವ ರೈತರ ಬದುಕು ಬೀದಿಗೆ ಬಿದ್ದಿರುವ ಸಂದರ್ಭದಲ್ಲಿ ತಮ್ಮ ಇಲಾಖೆ ಪೋಸ್ಟ್ ಪೇಡ್ ಹಾಗೂ ಪ್ರಿಪೈಡ್ ವ್ಯವಸ್ಥೆಯ ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸುವುದು ಸರಿಯಲ್ಲ, ಸರ್ಕಾರ ಸ್ವಾಮಿನಾಥನ್ ವರದಿ ಜಾರಿ ಮಾಡಿ ರೈತ ಬೆಳೆಯುವ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಿ ಬೆಳೆಗಳನ್ನು ಖರೀದಿ ಮಾಡಿ ರೈತರ ಬದುಕನ್ನು ಹಸನುಮಾಡುವ ತನಕ ಈ ರೀತಿಯ ಯೋಜನೆಗಳನ್ನು ಜಾರಿ ಮಾಡಬೇಡಿ, ರೈತರನ್ನು ದಿಕ್ಕರಿಸಿ ಮೀಟರ್ ಅಳವಡಿಸಲು ಬಂದರೆ ಬಾರಿ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಹಾಗೂ ಅಳವಡಿಸುವ ಮೀಟರ್‌ಗಳನ್ನು ಕಿತ್ತು ವಾಪಾಸ್ ಇಲಾಖೆಗೆ ಒಪ್ಪಿಸುವ ಚಳುವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಅರ್ಪಧರಾಜ್, ಸಂದ್ಯಾಗೂ ಪೆರಿಯಾ, ಚಂದ್ರಶೇಖರ್ ವಸಂತ, ಲೂರ್ದುಸ್ವಾಮಿ ವಾಸು, ಕುಮಾರ್, ಸಗಾಯ್ ರಾಜ್ ಆರೋಗ್ಯ ಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.