ಕನ್ನಡಪ್ರಭ ವಾರ್ತೆ, ತುಮಕೂರುಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಿಗೆ ವರ್ಗಾಯಿಸುವ ಪ್ರಸ್ತಾವನೆ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಉಪನ್ಯಾಸಕರು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಅವರ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿ, ಪ್ರಾಸ್ತಾವಿತ ಪ್ರಸ್ತಾವನೆಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸ್ವಾಯತ್ತತೆ, ಸಂಸ್ಥಾತ್ಮಕ ಅಸ್ತಿತ್ವ ಹಾಗೂ ಸ್ಥಾಪಿತ ಆಡಳಿತಾತ್ಮಕ ವ್ಯವಸ್ಥೆಗೆ ಗಂಭೀರ ಧಕ್ಕೆಯನ್ನು ಉಂಟು ಮಾಡುವ ಕ್ರಮವಾಗಿದೆ ಎಂದು ಜಿಲ್ಲಾಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ನೇ.ರಂ. ನಾಗರಾಜ ಹೇಳಿದರು. ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಸ್ಪಷ್ಟಕ್ರಮ ಕೈಗೊಳ್ಳದಿರುವುದು ಪದವಿ ಪೂರ್ವ ಶಿಕ್ಷಣ ಸಮುದಾಯದಲ್ಲಿ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಹಾಗೆಯೇ, ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಹಿಂದಿನಂತೆ ಪದವಿ ಪೂರ್ವ ಶಿಕ್ಷಣ ಇಲಾಖಾ ನಿರ್ದೇಶನಾಲಯಕ್ಕೆ ಮರಳಿ ವರ್ಗಾಯಿಸುವುದು ಹಾಗೂ ಇತರೆ ನ್ಯಾಯಸಮ್ಮತ ಬೇಡಿಕೆಗಳನ್ನು ತಕ್ಷಣ ಕಡ್ಡಾಯವಾಗಿ ಈಡೇರಿಸಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಜಿಲ್ಲಾ ಪ್ರಾಂಶುಪಾಲ ಸಂಘದ ಅಧ್ಯಕ್ಷ ನೇರಂ ನಾಗರಾಜ ಅವರೊಂದಿಗೆ ರಾಜ್ಯ ಸಂಚಾಲಕ ಚಂದ್ರಯ್ಯ, ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ, ರಾಜ್ಯಅನುದಾನಿತ ಕಾಲೇಜುಗಳ ಕೋಶಾಧ್ಯಕ್ಷ ವೆಂಕಟಾಚಲ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎನ್ ಮಹಾಲಿಂಗೇಶ್, ಜಿಲ್ಲಾ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಸತೀಶ್ ಸಿ.ಜಿ ಜಿಲ್ಲಾ ಸರ್ಕಾರಿ ಸಂಘದ ನಿರ್ದೇಶಕ ವಸಂತ್‌ಕುಮಾರ್, ಎನ್, ಪ್ರಾಂಶುಪಾಲರಾದಚಂದ್ರಶೇಖರ್, ತೇಜಸ್ವಿ, ಅಶ್ವತ್, ಉಪನ್ಯಾಸಕರಾದಯೋಗೀಶ್, ತಿಪ್ಪೇಸ್ವಾಮಿ, ಜ್ಯೋತಿ ಪ್ರಕಾಶ್, ರಮೇಶ್ ಮೊದಲಾದವರು ಭಾಗವಹಿಸಿದ್ದರು.ಜಿಪಂ ಸಿಇಒಗೆ ಪಿಯು ಡಿಡಿ ಕಚೇರಿ ಆಡಳಿತ ನಿಯಂತಣಕ್ಕೆ ವಿರೋಧ
ಜಿಪಂ ಸಿಇಒಗೆ ಪಿಯು ಡಿಡಿ ಕಚೇರಿ ಆಡಳಿತ ನಿಯಂತಣಕ್ಕೆ ವಿರೋಧ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.