ಸಾರಾಂಶ
ಕನ್ನಡಪ್ರಭ ವಾರ್ತೆ ಚನ್ನಗಿರಿ
ರಾಜ್ಯ ಸರ್ಕಾರಿ ನೌಕರರಿಗೆ ಓಲ್ಡ್ ಪೆಂಕ್ಷನ್ ಸ್ಕೀಮ್ (ಒಪಿಎಸ್) ಜಾರಿಗೆ ತರುವಲ್ಲಿ ಸರ್ಕಾರಕ್ಕೆ ಒತ್ತಡ ಹಾಕುತ್ತಲಿದ್ದು ಒಪಿಎಸ್ ಸ್ಕೀಮ್ ಜಾರಿ ಮಾಡಿಸಿಕೊಡುವುದೇ ನನ್ನ ಕರ್ತವ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.ತಾಲೂಕಿನಲ್ಲಿ ಶನಿವಾರ ಸಂಜೆ ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಆವರಣದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘ, ತಾಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸರ್ಕಾರಿ ನೌಕರರ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, 7ನೇ ವೇತನ ಆಯೋಗವನ್ನು ಜಾರಿ ಮಾಡಿಸಿದ್ದಂತೆ 8ನೇ ವೇತನ ಆಯೋಗವನ್ನು ಜಾರಿ ಮಾಡುವಾಗ ಕೇಂದ್ರ ಸರ್ಕಾರದ ವೇತನ ಮಾದರಿಯಲ್ಲಿ ಜಾರಿ ಮಾಡಿಕೊಡಲು ಸರ್ಕಾರದ ಗಮನವನ್ನು ಸೆಳೆದಿದ್ದೇನೆ. ಆರೋಗ್ಯ ಸಂಜೀವಿನಿ ಯೋಜನೆಯಲ್ಲಿ ನಗದು ರಹಿತವಾದ ಚಿಕಿತ್ಸೆಯಾಗಿದ್ದು ಇದರಲ್ಲಿ ನೌಕರನ ತಂದೆ, ತಾಯಿ, ಹೆಂಡತಿ ಮಕ್ಕಳು ಗೊತ್ತು ಪಡಿಸಿದ ಆಸ್ಫತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.
ನಾನು ರಾಜ್ಯಾಧ್ಯಕ್ಷನಾಗಿ ಇಲ್ಲಿಯ ವರೆಗೆ ನೌಕರರಿಗೆ ಅನುಕೂಲ ವಾಗುವಂತಹ 25 ಆದೇಶಗಳು ಜಾರಿ ಮಾಡಿಸಿದ್ದೇನೆ ಎಂದು ತಿಳಿಸಿದರು.ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್ ಮಾತನಾಡಿ ತಾಲೂಕಿನಲ್ಲಿರುವ ಸರ್ಕಾರಿ ನೌಕರರು ಯಾವುದೇ ಭಿನ್ನತೆಗಳಿಲ್ಲದೆ ಒಗ್ಗಟ್ಟಾಗಿ ಉತ್ತಮವಾದ ಕೆಲಸಗಳನ್ನು ಮಾಡುತ್ತಿರುವ ಬಗ್ಗೆ ಪ್ರಶಂಶಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ತಹಸೀಲ್ದಾರ್ ಎನ್.ಜೆ.ನಾಗರಾಜ್ ವಹಿಸಿ ಮಾತನಾಡಿ, ನೌಕರರ ಸಂಘದ ತಾಲೂಕು ಅಧ್ಯಕ್ಷ ಗಣೇಶ್ ಇವರು ಅಧ್ಯಕ್ಷರಾಗಿ ಉತ್ತಮವಾದ ಸೇವೆಯನ್ನು ಸಲ್ಲಿಸುತ್ತಿದ್ದು ರಾಜ್ಯಾಧ್ಯಕ್ಷರ ಒಡನಾಟದಲ್ಲಿ ತಾಲೂಕು ಸಂಘ ಉತ್ತಮವಾದ ಕೆಲಸಗಳನ್ನು ಮಾಡುತ್ತಿರುವ ಬಗ್ಗೆ ಪ್ರಶಂಶಿಸಿದರು.ಸರ್ಕಾರಿ ನೌಕರರು ತಮ್ಮಲ್ಲಿ ಅಡಗಿದ್ದ ಹಾಡುಗಾರಿಕೆ, ಏಕಪಾತ್ರ ಅಭಿನಯ, ಭಾವಗೀತೆ, ಜನಪದಗೀತೆ ಈಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವೀರೇಶ್ ಒಡೇನಪುರ, ಕಾರ್ಯದರ್ಶಿ ಪಾಲಾಕ್ಷ, ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಶಿಕ್ಷಣ ಇಲಾಖೆಯ ವಿವಿಧ ವೃಂದಗಳ ಅಧ್ಯಕ್ಷರುಗಳಾದ ಪಿ.ವಿ.ಸ್ವಾಮಿ, ಜಯಪ್ರಕಾಶ್, ಚಂದ್ರಪ್ಪ, ಹಿರಿಯ ಆರೋಗ್ಯ ನಿರೀಕ್ಷಕ ಲೋಕೇಶಪ್ಪ, ವಿವೇಕಾನಂದ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.;Resize=(128,128))
;Resize=(128,128))