ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಮಳೆ ಆಗದೆ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ ಕಾವೇರಿಕೊಳ್ಳದ ಜಲಾಶಯಗಳಿಗೆ ನಿರೀಕ್ಷಿತ ಮಟ್ಟದಲ್ಲಿ ನೀರು ಹರಿದು ಬರುತ್ತಿಲ್ಲ. ಪ್ರಸ್ತುತ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ರೈತರ ಕೃಷಿ ಚಟುವಟಿಕೆ, ಜನಜಾನುವಾರುಗಳಿಗೆ ಮುಂದಿನ ದಿನಗಳಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ.

ಮದ್ದೂರು:

ತಮಿಳುನಾಡಿಗೆ ಪ್ರತಿ ದಿನ 12 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶ ಮಾಡಿರುವುದನ್ನು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತೀವ್ರವಾಗಿ ವಿರೋಧಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಮಳೆ ಆಗದೆ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ ಕಾವೇರಿಕೊಳ್ಳದ ಜಲಾಶಯಗಳಿಗೆ ನಿರೀಕ್ಷಿತ ಮಟ್ಟದಲ್ಲಿ ನೀರು ಹರಿದು ಬರುತ್ತಿಲ್ಲ. ಪ್ರಸ್ತುತ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ರೈತರ ಕೃಷಿ ಚಟುವಟಿಕೆ, ಜನಜಾನುವಾರುಗಳಿಗೆ ಮುಂದಿನ ದಿನಗಳಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಇಂತಹ ಸಂಕಷ್ಟ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಅವೈಜ್ಞಾನಿಕವಾಗಿದೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಟೀಕಿಸಿದ್ದಾರೆ. ನೀರು ಹರಿಸುವಂತೆ ಆದೇಶ ಖಂಡಿಸಿ ಇಂದು ಕೊಪ್ಪ ಬಂದ್

ಮದ್ದೂರು:

ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ 12, ಸಾವಿರ ಕ್ಯುಸೆಸ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ವಿರೋಧಿಸಿ ರೈತ ಸಂಘ ಮತ್ತು ಹಸಿರು ಸೇನೆ ಏಕೀಕರಣ ಸಮಿತಿ ಆ.13ರಂದು ಕೊಪ್ಪ ಬಂದ್ ಗೆ ಕರೆ ನೀಡಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಏಕೀಕರಣ ಸಮಿತಿಯ ಅಧ್ಯಕ್ಷ ಕೀಳಘಟ್ಟ ನಂಜುಂಡಯ್ಯ ನೀರು ಬಿಡುವ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ಬಂದ್‌ಗೆ ಕರೆ ನೀಡಿದ್ದಾರೆ.

ಕೊಪ್ಪ ಗ್ರಾಮದ ವರ್ತಕರು, ಹೋಟೆಲ್ ಮಾಲೀಕರು ಸ್ವಯಂ ಪ್ರೇರಿತರಾಗಿ ತಮ್ಮ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮ ಕೂಡಲೇ ಕೆಆರ್‌ಎಸ್ ಜಲಾಶಯದಿಂದ ನಾಲೆಗಳ ಮೂಲಕ ನೀರು ಹರಿಸಿ ಕೊಪ್ಪ ಹೋಬಳಿಯ ಕೆರೆಕಟ್ಟೆಗಳನ್ನು ತುಂಬಿಸಿ ರೈತರ ಕೃಷಿ ಚಟುವಟಿಕೆಗಳಿಗೆ ಮತ್ತು ಜನಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಕೀಳಘಟ್ಟ ನಂಜುಂಡಯ್ಯ ಒತ್ತಾಯಿಸಿದ್ದಾರೆ.