ಸಾರಾಂಶ
ರಾಜ್ಯದಲ್ಲಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನೋಂದಣಿ ಫಲಕ ಅಳವಡಿಕೆ ಅಂತಿಮ ದಿನವನ್ನು ಮೇ 31ಕ್ಕೆವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯದಲ್ಲಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನೋಂದಣಿ ಫಲಕ ಅಳವಡಿಕೆ ಅಂತಿಮ ದಿನವನ್ನು ಮೇ 31ಕ್ಕೆವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಫೆ.17, ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅಂತಿಮ ದಿನವಾಗಿತ್ತು. ಆದರೆ, ಈವರೆಗೆ 18.50 ಲಕ್ಷ ವಾಹನಗಳು ಮಾತ್ರ ಎಚ್‌ಎಸ್ಆರ್‌ಪಿ ಅಳವಡಿಸಿಕೊಂಡಿದ್ದು, ಇನ್ನೂ 1.81 ಕೋಟಿ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕಿದೆ. ಈ ಕಾರಣದಿಂದಾಗಿ ಅಂತಿಮ ದಿನವನ್ನು 3 ತಿಂಗಳು ವಿಸ್ತರಿಸಲಾಗಿದೆ. ಅದರಂತೆ ಮೇ 31ರೊಳಗೆ ಎಲ್ಲ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.