ಸಾರಾಂಶ
ಸಿಂಧನೂರಿನ ಸನ್ರೈಸ್ ನರ್ಸಿಂಗ್ ಕಾಲೇಜಿನಲ್ಲಿ ಮಂಗಳವಾರ ವಿಶ್ವ ಅಂಗಾಂಗ ದಾನ ದಿನಾಚರಣೆಯನ್ನು ಸಂಸ್ಥೆಯ ಕಾರ್ಯದರ್ಶಿ ಇರ್ಷಾದ್ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಸಿಂಧನೂರು
ಸ್ಥಳೀಯ ಸನ್ರೈಸ್ ನರ್ಸಿಂಗ್ ಕಾಲೇಜಿನಲ್ಲಿ ಮಂಗಳವಾರ ವಿಶ್ವ ಅಂಗಾಂಗ ದಾನ ದಿನಾಚರಣೆ ಆಚರಿಸಲಾಯಿತು.ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಿ.ಚಕ್ರವರ್ತಿ ಮಾತನಾಡಿ, ಪ್ರತಿವರ್ಷ ಆ.13 ರಂದು ವಿಶ್ವ ಅಂಗಾಂಗ ದಾನ ದಿನ ಆಚರಿಸಲಾಗುತ್ತಿದ್ದು, ಜನರು ಹೆಚ್ಚಿನ ಪ್ರಮಾಣದಲ್ಲಿ ಅಂಗಾಂಗಗಳನ್ನು ದಾನ ಮಾಡಿದರೆ ವಿವಿಧ ರೋಗಗಳಿಂದ ಬಳಲುವ ರೋಗಿಗಳ ಜೀವ ಉಳಿಸಲು ಸಾಧ್ಯವಿದೆ ಎಂದು ತಿಳಿಸಿದರು.
ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಲಾಜರ್ ಸಿರಿಲ್ ಮಾತನಾಡಿ, ಅಂಗಾಂಗ ದಾನವನ್ನು ಮರಣೋತ್ತರವಾಗಿಯೂ ಅಥವಾ ಜೀವಂತವಿರುವಾಗಲೂ ಮಾಡಬಹುದು. 18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿ ಅಂಗಾಂಗ ದಾನ ಮಾಡಬಹುದು. ಆದರೆ ಮರಣೋತ್ತರ ದಾನಕ್ಕೆ ಕುಟುಂಬ ಸದಸ್ಯರ ಒಪ್ಪಿಗೆ ಮುಖ್ಯವಾಗಿದೆ. ದಾನದ ಪ್ರಕ್ರಿಯೆನ್ನು ಸುರಕ್ಷಿತ ಮತ್ತು ಪಾರದರ್ಶಕವಾಗಿಡಲಾಗುವುದು. ಇದರ ಕುರಿತು ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಇರ್ಷಾದ್ ಕಾರ್ಯಕ್ರಮ ಉದ್ಘಾಟಿಸಿದರು. ಉಪನ್ಯಾಸಕರಾದ ಅಶು ಪಾಷಾ, ರಾಜೇಶ, ಜ್ಞಾನೇಶ್ವರಿ, ಸಂತೋಷಿ, ಭಾಗ್ಯಶ್ರೀ, ಸಾಗರ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು