ಸಾರಾಂಶ
ರೈತರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಗ್ರಾಮೀಣ ಭಾಗದಲ್ಲಿ ಸಂಘಟನೆ ಮುಖ್ಯವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರಾರ ರೈತ ಸಂಘದ ರಾಜ್ಯಾಧ್ಯಕ್ಷ ಹಾಡ್ಯರವಿ ಹೇಳಿದರು.
ಕನ್ನಡಪ್ರಭ ವಾರ್ತೆ ಮಲ್ಕುಂಡಿ
ರೈತರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಗ್ರಾಮೀಣ ಭಾಗದಲ್ಲಿ ಸಂಘಟನೆ ಮುಖ್ಯವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರಾರ ರೈತ ಸಂಘದ ರಾಜ್ಯಾಧ್ಯಕ್ಷ ಹಾಡ್ಯರವಿ ಹೇಳಿದರು.ನಂಜನಗೂಡು ತಾಲೂಕಿನ ಮೊಬ್ಬಳ್ಳಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ರೈತ ಸಂಘದ ಗ್ರಾಮ ಘಟಕದ ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಗ್ಯಾರಂಟಿ ನೆಪದಲ್ಲಿ ರಾಜ್ಯದ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ರಾಜ್ಯದಲ್ಲಿ ರೈತರಿಗಾಗಿ ಯಾವುದೇ ಯೋಜನೆಯನ್ನು ಜಾರಿಗೆ ತರದೆ ರೈತರು ಬೆಳೆದ ಫಸಲುಗಳಿಗೆ ಸೂಕ್ತ ಬೆಲೆ ದೊರೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗಾಗಿ ಯಾವುದೇ ಸೂಕ್ತ ಪರಿಹಾರ ನೀಡಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯದಿಂದ ರಾಜ್ಯದ ಬೆಳೆಗಾರರಿಗೆ ದ್ರೋಹ ಬಗೆಯುತ್ತಿದ್ದಾರೆ. ರಾಜ್ಯದಲ್ಲಿ ರೈತರ ಕಬ್ಬು ಬೆಳೆಗೆ ಸೂಕ್ತ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.
ತಾಲೂಕು ಅಧ್ಯಕ್ಷ ಅಂಬಳೆ ಮಹದೇವಸ್ವಾಮಿ, ಹೊನ್ನೂರು ಪ್ರಕಾಶ್, ರಾಜ್ಯ ಗೌರವಾಧ್ಯಕ್ಷ ನಂದೀಶ್, ಚಿಕ್ಕಸ್ವಾಮಿ, ಮರಿಸ್ವಾಮಿ, ಕುಮಾರ್, ಮಂಜೇಶ್, ಮಹೇಶ್, ಸಿದ್ದರಾಜು, ರವಿ, ಮಹೇಶ್, ಸೋಮಣ್ಣ, ಭುಜಂಗಪ್ಪ, ನಾಗೇಶ್, ಮೂರ್ತಿ, ಶಿವಮೂರ್ತಿ, ಗುರುಸ್ವಾಮಿ, ಗ್ರಾಮ ಘಟಕದ ಅಧ್ಯಕ್ಷ ವೃಷಬೇಂದ್ರ, ಉಪಾಧ್ಯಕ್ಷ ಮಲ್ಲೇಶ್, ಕಾರ್ಯದರ್ಶಿ ಅಶೋಕ್ ಕುಮಾರ್ ಇದ್ದರು.