ಸಾರಾಂಶ
ಸುವರ್ಣ ಸಂಭ್ರಮದಲ್ಲಿರುವ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಬಪ್ಪನಾಡು ದೇವಳದ ಅವರಣದಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೊತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಗಣೇಶೋತ್ಸವದಂತಹ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಂಘಟನೆ ಸಾಧ್ಯವಿದೆ ಮಾಜಿ ಸಚಿವ ಕೆ.ಅಭಯಚಂದ್ರ ಜ್ಯೆನ್ ಹೇಳಿದರು.ಸುವರ್ಣ ಸಂಭ್ರಮದಲ್ಲಿರುವ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಬಪ್ಪನಾಡು ದೇವಳದ ಅವರಣದಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೊತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮೂಲ್ಕಿಯ ಸಾರ್ವಜನಿಕ ಗಣೇಶೋತ್ಸವದ ಸ್ಥಾಪಕ ಸದಸ್ಯರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಮುಂಬೈ ಭಾರತ್ ಕೋ ಆಪರೇಟಿವ್ ಅಧ್ಯಕ್ಷ ಸೂರ್ಯಕಾಂತ ಸುವರ್ಣ, ಮೂಲ್ಕಿ ನಗರ ಪಂಚಾಯಿತಿ ಸದಸ್ಯ ಬಾಲಚಂದ್ರ ಕಾಮತ್, ಉದ್ಯಮಿ ಪ್ರಭಾಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ಮಂಗಳೂರು ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಸಂಸ್ಕೃತಿ ಚಿಂತಕ ಡಾ. ಅರುಣ್ ಉಳ್ಳಾಲ್, ಮುಖ್ಯ ಭಾಷಣ ಮಾಡಿದರು. ಬಪ್ಪನಾಡು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಸುವರ್ಣ ಸ್ವಾಗತಿಸಿದರು. ಗಿರೀಶ್ ದೇವಾಡಿಗ ನಿರೂಪಿಸಿದರು. ಸಮಿತಿಯ ಕಾರ್ಯದರ್ಶಿ ಸುನಿಲ್ ಆಳ್ವ ವಂದಿಸಿದರು. ಮಂಗಳೂರಿನ ಸನಾತನ ನಾಟ್ಯಾಲಯದ ವತಿಯಿಂದ ನೃತ್ಯ ವೈವಿಧ್ಯ ‘ಸನಾತನ ರಾಷ್ಟ್ರಾಂಜಲಿ’ ನಡೆಯಿತು.