ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ವಿವಿಧ ಕ್ರೀಡಾಕೂಟ ಆಯೋಜನೆ

| Published : Feb 11 2024, 01:47 AM IST

ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ವಿವಿಧ ಕ್ರೀಡಾಕೂಟ ಆಯೋಜನೆ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತ ಸಂವಿಧಾನ ಜಾಗೃತಿ ಜಾಥಾದ ಪ್ರಯುಕ್ತ ವಿವಿಧ ಕ್ರೀಡಾಕೂಟ, ರಂಗೋಲಿ ಸ್ಪರ್ಧೆ, ಯುವ ಸಂಸತ್ತು ಅಧಿವೇಶನ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್‌ ದತ್ತಾತ್ರೆಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ಕೃಷ್ಣಪ್ಪ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿರಾ

ಭಾರತ ಸಂವಿಧಾನ ಜಾಗೃತಿ ಜಾಥಾದ ಪ್ರಯುಕ್ತ ವಿವಿಧ ಕ್ರೀಡಾಕೂಟ, ರಂಗೋಲಿ ಸ್ಪರ್ಧೆ, ಯುವ ಸಂಸತ್ತು ಅಧಿವೇಶನ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್‌ ದತ್ತಾತ್ರೆಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ಕೃಷ್ಣಪ್ಪ ತಿಳಿಸಿದರು.

ಶುಕ್ರವಾರ ಈ ಬಗ್ಗೆ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾಹಿತಿ ನೀಡಿ ಸರ್ಕಾರದ ಆದೇಶದಂತೆ ಈಗಾಗಲೇ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಸ್ತಬ್ಧಚಿತ್ರಗಳೊಂದಿಗೆ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿಗೆ ಸಂವಿಧಾನ ಜಾಗೃತಿ ಜಾಥಾ ಸಂಚರಿಸಿ ಸಂವಿಧಾನದ ಮಹತ್ವವನ್ನು ತಿಳಿಸುವ ಮತ್ತು ಸಂವಿಧಾನದ ಅಮೂಲ್ಯ ವಿಚಾರ ಮತ್ತು ಮಹತ್ವದ ವಿಷಯಗಳನ್ನು ಜನತೆಗೆ ತಿಳಿಸುವ ಕಾರ್ಯ ಮಾಡಲಾಗಿದೆ. ಅದೇ ರೀತಿ ವಿನೂತನವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ, ಜನರಿಗೆ, ಮಹಿಳೆಯರಿಗೆ ಹೆಚ್ಚು ಮಾಹಿತಿ ನೀಡುವ ಉದ್ದೇಶದಿಂದ ಸಂವಿಧಾನದ ಹೆಸರಿನಲ್ಲಿ ವಿವಿಧ ಕ್ರೀಡಾಕೂಟ ಮತ್ತು ಪತ್ರಚಳುವಳಿ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದವರಿಗೆ ಸಂವಿಧಾನದ ಕಪ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ವಿವಿಧ ಕ್ರೀಡೆಗಳಾದ ಕಬಡ್ಡಿ, ವಾಲಿಬಾಲ್, ಖೋ ಖೋ, ಥ್ರೋಬಾಲ್ ಕ್ರೀಡಾಕೂಟಗಳನ್ನು ತಾಲೂಕಿನಲ್ಲಿ ಶಾಲಾ ಮಕ್ಕಳಿಗೆ, ಸರ್ಕಾರಿ ನೌಕರರಿಗೆ, ಪತ್ರಕರ್ತರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಆಯೋಜಿಸಿ ವಿಜೇತರಾದವರಿಗೆ ವಿಭಾಗವಾರು ಪ್ರಶಸ್ತಿ ನೀಡಲಾಗುವುದು. ಮಹಿಳೆಯರಿಗೆ ವಿಶೇಷವಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಿ ಸ್ಪರ್ಧೆಯನ್ನು ಪ್ರತಿ ಗ್ರಾಮ, ಹೋಬಳಿ, ಪಂಚಾಯಿತಿಗಳಲ್ಲಿ ವಾಸವಿರುವ ಮಹಿಳೆಯರು ತಮ್ಮ ಮನೆಯ ಹತ್ತಿರ ಖಾಲಿ ಇರುವ ಸ್ಥಳಗಳಲ್ಲಿ ರಂಗೋಲಿ ಬಿಡಿಸುವುದು. ರಂಗೋಲಿಗಳನ್ನು ಸ್ಥಳೀಯ ಗ್ರಾಪಂ ಪಿಡಿಒ, ಗ್ರಾಮ ಆಡಳಿತಾಧಿಕಾರಿಗಳು ಪರಿಶೀಲಿಸಿ ಪ್ರಶಸ್ತಿಗೆ ಆಯ್ಕೆ ಮಾಡುವರು. ಹಾಗೂ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಕುರಿತು ಮಕ್ಕಳಿಂದ ಸಂವಿಧಾನದ ವಿಚಾರ, ವ್ಯಕ್ತಿ ಗೌರವ, ರಾಜಕೀಯ ನ್ಯಾಯ, ಸಮಾನತೆ, ಸ್ವಾತಂತ್ರ್ಯ ಹಾಗೂ ಸಂವಿಧಾನದ ಮಹತ್ವ, ಪ್ರಾಮುಖ್ಯತೆ ಬಗ್ಗೆ ಅವರ ಪೋಷಕರಿಗೆ ಅರಿವು ಮೂಡಿಸುವ ಸಲುವಾಗಿ ಪತ್ರ ಚಳವಳಿ ನಡೆಸಲಾಗುವುದು. ಹಾಗೂ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಗುವುದು. ಈ ಬಗ್ಗೆ ಶಾಲಾ ಕಾಲೇಜುಗಳು ಫೆ. 12 ರಿಂದ 16ರವರೆಗೆ ತಮ್ಮ ಶಾಲೆ, ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಪತ್ರ ಚಳವಳಿ ಚಟುವಟಿಕೆಗಳನ್ನು ಏರ್ಪಡಿಸಬೇಕೆಂದು ತಿಳಿಸಿದರು. ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಜಿಲ್ಲಾಮಟ್ಟಕ್ಕೆ ಕಳುಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲ ನಾಗರಾಜು, ಪೌರಾಯುಕ್ತ ರುದ್ರೇಶ್, ಬಿಆರ್‌ಸಿ ಕರಿಯಣ್ಣ ಸೇರಿದಂತೆ ಹಲವರು ಹಾಜರಿದ್ದರು.