ಚುನಾವಣೆಯಲ್ಲಿ ಸಂಘಟನೆಯ ಶಕ್ತಿಯೇ ಪ್ರಮುಖ. ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಜವಾಬ್ದಾರಿಯನ್ನು ಅರಿತು ಮತದಾರರನ್ನು ನೇರವಾಗಿ ಭೇಟಿ ಮಾಡಿದರೆ ಪಕ್ಷದ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸಬಹುದು.

ಹೊನ್ನಾವರ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಸಂಘಟನಾತ್ಮಕವಾಗಿ ಎದುರಿಸಲು ಬಿಜೆಪಿ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಕನಿಷ್ಠ 25 ಮತದಾರರನ್ನು ನೇರವಾಗಿ ಸಂಪರ್ಕಿಸಿ ಪಕ್ಷದ ಅಭ್ಯರ್ಥಿ ಎಸ್.ವಿ. ಸಂಕನೂರ ಪರವಾಗಿ ಮತಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ವಿನಂತಿಸಿದರು.

ಹೊನ್ನಾವರ ಹಾಗೂ ಮಂಕಿ ಮಂಡಲಗಳಲ್ಲಿ ಘಟನಾಯಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಸಿದ್ಧತೆ, ಸಂಘಟನಾತ್ಮಕ ಕಾರ್ಯತಂತ್ರ, ಮತದಾರರ ಸಂಪರ್ಕ ಹಾಗೂ ಬೂತ್‌ಮಟ್ಟದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಿದರು. ಅಭ್ಯರ್ಥಿಯ ಪರವಾಗಿ ಮತದಾರರನ್ನು ಪರಿಣಾಮಕಾರಿಯಾಗಿ ತಲುಪಲು ಕಾರ್ಯಕರ್ತರು ತಂಡವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಚುನಾವಣೆಯಲ್ಲಿ ಸಂಘಟನೆಯ ಶಕ್ತಿಯೇ ಪ್ರಮುಖ. ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಜವಾಬ್ದಾರಿಯನ್ನು ಅರಿತು ಮತದಾರರನ್ನು ನೇರವಾಗಿ ಭೇಟಿ ಮಾಡಿದರೆ ಪಕ್ಷದ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸಬಹುದು. ಬೂತ್‌ಮಟ್ಟದಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸುವ ಮೂಲಕ ಚುನಾವಣೆಯನ್ನು ಎದುರಿಸಬೇಕು ಎಂದು ರೂಪಾಲಿ ನಾಯ್ಕ ಹೇಳಿದರು.

ಸಭೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ, ತಮ್ಮನ್ನು ಗೆಲ್ಲಿಸುವಲ್ಲಿ ನಿಮ್ಮ ಕೊಡುಗೆ ಮಹತ್ವದ್ದು ಎಂದರು.

ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿ, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು. ವಿಧಾನಪರಿಷತ್ ಸದಸ್ಯ ಲಿಂಗರಾಜ ಪಾಟೀಲ್, ಮಾಜಿ ಸಚಿವ ಶಿವಾನಂದ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ನಾಯ್ಕ, ರಾಜು ಭಂಡಾರಿ, ಮಂಡಲ ಅಧ್ಯಕ್ಷರಾದ ಮಂಜುನಾಥ ನಾಯ್ಕ ಹಾಗೂ ಯೋಗೇಶ್ ನಾಯ್ಕ ಸೇರಿದಂತೆ ಘಟನಾಯಕರು ಹಾಗೂ ಪಕ್ಷದ ಪ್ರಮುಖರು ಇದ್ದರು. ಎಸ್.ವಿ. ಸಂಕನೂರ ಪರವಾಗಿ ಮತಯಾಚನೆ

ಯಲ್ಲಾಪುರ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರವಾಗಿ ರೋಜರಿ ಮತ್ತು ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಮತಯಾಚಿಸಿದರು.ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ರಾಜ್ಯವಕ್ತಾರ ಹರಿಪ್ರಕಾಶ ಕೋಣೆಮನೆ, ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ನಾಯಕ, ಮಂಡಳ ಕಾರ್ಯದರ್ಶಿ ಪ್ರದೀಪ ಯಲ್ಲಾಪುರಕರ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೋಮೇಶ್ವರ ನಾಯ್ಕ, ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿ ದೇವಡಿಗ, ಸಚಿನ ಬಳಕೂರು ಜೊತೆಯಾಗಿ ಮತಯಾಚಿಸಿದರು..