ನಾಳೆಗೆ...........ಸಂಘಟನೆಗಳಿಗೆ ಸಾಮಾಜಿಕ ಕಾಳಜಿಯೂ ಅಗತ್ಯ

| Published : Jan 28 2025, 12:45 AM IST

ಸಾರಾಂಶ

ದೊಡ್ಡಬಳ್ಳಾಪುರ: ಕನ್ನಡ ನಾಡು-ನುಡಿ ಹೋರಾಟಗಳಿಗೆ ಮಾತ್ರ ಸಂಘಟನೆ ಸೀಮಿತವಾಗದೆ ನಿಸ್ವಾರ್ಥ ಸೇವಾ ಮನೋಭಾವದಿಂದ ನಿರಂತರ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವುದು ಸಂಘಟನೆಯ ಉದ್ದೇಶ ಎಂದು ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಸ್ಥಾಪಕ ರವಿ ಮಾವಿನಕುಂಟೆ ತಿಳಿಸಿದರು.

ದೊಡ್ಡಬಳ್ಳಾಪುರ: ಕನ್ನಡ ನಾಡು-ನುಡಿ ಹೋರಾಟಗಳಿಗೆ ಮಾತ್ರ ಸಂಘಟನೆ ಸೀಮಿತವಾಗದೆ ನಿಸ್ವಾರ್ಥ ಸೇವಾ ಮನೋಭಾವದಿಂದ ನಿರಂತರ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವುದು ಸಂಘಟನೆಯ ಉದ್ದೇಶ ಎಂದು ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಸ್ಥಾಪಕ ರವಿ ಮಾವಿನಕುಂಟೆ ತಿಳಿಸಿದರು.

ನಿರಂತರ ಅನ್ನದಾಸೋಹ ಸಮಿತಿ ಸಹಯೋಗದಲ್ಲಿ ತಾಲೂಕಿನ ದರ್ಗಾಜೋಗಹಳ್ಳಿಯಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಹಾಗೂ ಸಮಿತಿಯ 9ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿಗುರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯುತ್ತಿರುವ ಆರೋಗ್ಯ ಶಿಬಿರದಲ್ಲಿ ವಿವಿಧ ಖಾಯಿಲೆಗಳ ತಪಾಸಣೆ, ಸೂಕ್ತ ವೈದ್ಯಕೀಯ ಸಲಹೆ ಮತ್ತು ಔಷಧ ವಿತರಣೆಯನ್ನೂ ಮಾಡಲಾಗುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದು ವಿಶೇಷ ಎಂದರು.

ದರ್ಗಾ ಜೋಗಹಳ್ಳಿ ಗ್ರಾಪಂ ಅಧ್ಯಕ್ಷೆ ಶಶಿಕಲಾಮಾತನಾಡಿ, ಗಣರಾಜ್ಯೋತ್ಸವವನ್ನು ಆರೋಗ್ಯ ಶಿಬಿರದ ಮೂಲಕ ಆಚರಿಸುತ್ತಿರುವುದು ಆರ್ಥಪೂರ್ಣವಾಗಿದ್ದು, ನಿರಂತರ ಅನ್ನದಾಸೋಹ ಉತ್ತಮ ಪರಿಕಲ್ಪನೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಅನ್ನದಾಸೋಹ ನಡೆಯಿತು. ಚಿಗುರು ಆಸ್ಪತ್ರೆಯ ಮಾಲೀಕ ನಾಗರಾಜ್, ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ರಾಜ್ಯಾಧ್ಯಕ್ಷ

ಸುಬ್ರಮಣಿ, ಕಾರ್ಮಿಕ ಘಟಕದ ಅಧ್ಯಕ್ಷ ಆನಂದ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಶ್ರೀರಾಮ್, ಗ್ರಾಮ ಪಂಚಾಯತಿ ಸದಸ್ಯರಾದ ರಂಗಸ್ವಾಮಿ, ಜೆ.ವೈ.ಮಲ್ಲಪ್ಪ, ಕಲಾವಿದರ ಸಂಘದ ಅಧ್ಯಕ್ಷ ಎ.ಸಿ ಅಶೋಕ್, ಮುಖಂಡರಾದ ಅನಿಲ್, ರಂಗಸ್ವಾಮಿ, ರುದ್ರೇಶ್, ಕೆ.ಸಿ,ಸವಿತಾ, ಯೋಗ ಗುರು ಕೃಷ್ಣಪ್ಪ ಹಾಗೂ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.

27ಕೆಡಿಬಿಪಿ5-ದೊಡ್ಡಬಳ್ಳಾಪುರದ ದರ್ಗಾಜೋಗಿಹಳ್ಳಿ ಗ್ರಾಮದಲ್ಲಿ ಚಿರ ಋಣಿ ಕನ್ನಡಾಂಬೆ ಹೋರಾಟ ಸಮಿತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.