ಜಿಪಂ, ತಾಪಂ ಚುನಾವಣೆಗೆ ಪಕ್ಷ ಸಂಘಟಿಸಿ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್

| Published : Jul 06 2025, 11:48 PM IST

ಜಿಪಂ, ತಾಪಂ ಚುನಾವಣೆಗೆ ಪಕ್ಷ ಸಂಘಟಿಸಿ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್
Share this Article
  • FB
  • TW
  • Linkdin
  • Email

ಸಾರಾಂಶ

ಜಿಪಂ, ತಾಪಂ ಹಾಗೂ ಪುರಸಭೆ ಚುನಾವಣೆಗಳಲ್ಲಿ ನಮ್ಮ‌‌‌ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಪಕ್ಷ ಸಂಘಟನೆಯತ್ತ ಪ್ರತಿಯೊಬ್ಬರೂ ತಮ್ಮ ಗಮನ ಕೇಂದ್ರಿಕರಿಸಬೇಕು. ಹೋಬಳಿವಾರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಭೆ ಕರೆದು ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಮುಂಬರುವ ಜಿಪಂ, ತಾಪಂ ಚುನಾವಣೆಗಳಿಗೆ ಪಕ್ಷವನ್ನು ಸಂಘಟಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಉಸ್ತುವಾರಿಗಳು ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿ, ಜಿಪಂ ಚುನಾವಣೆ ಸಮೀಪಿಸುತ್ತಿದೆ. ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಉಸ್ತುವಾರಿಗಳನ್ನು ನೇಮಕ ಮಾಡಬೇಕು. ಜತೆಗೆ ಪುರಸಭೆ ಚುನಾವಣೆ ಬರುತ್ತಿದೆ. 5 ವಾರ್ಡ್‌ಗಳಿಗೆ ಒಬ್ಬ ಉಸ್ತುವಾರಿಯನ್ನು ನೇಮಕ ಮಾಡಿಕೊಳ್ಳಬೇಕು ಎಂದರು.

ಜಿಪಂ, ತಾಪಂ ಹಾಗೂ ಪುರಸಭೆ ಚುನಾವಣೆಗಳಲ್ಲಿ ನಮ್ಮ‌‌‌ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಪಕ್ಷ ಸಂಘಟನೆಯತ್ತ ಪ್ರತಿಯೊಬ್ಬರೂ ತಮ್ಮ ಗಮನ ಕೇಂದ್ರಿಕರಿಸಬೇಕು. ಹೋಬಳಿವಾರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಭೆ ಕರೆದು ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ಕಿಸಾನ್ ಕಾಂಗ್ರೆಸ್ ಮೇಲುಕೋಟೆ ಘಟಕದ ಅಧ್ಯಕ್ಷ ಸಿ.ಆರ್.ರಮೇಶ್, ವಿವಿಧ ತಾಲೂಕುಗಳ ಉಸ್ತುವಾರಿಗಳಾದ ಕೊತ್ತತ್ತಿ ರಾಜಣ್ಣ, ದೇವಪ್ಪ, ಸಿ.ಆರ್.ರಮೇಶ್, ಮಹದೇವಯ್ಯ, ಎಚ್.ವಿ.ನಾಗರಾಜು, ಅಂತನಹಳ್ಳಿ ಬಸವರಾಜು, ಜಿಲ್ಲಾ ಉಪಾಧ್ಯಕ್ಷ ಸಿ.ಡಿ.ವಿಜಯಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗೇಗೌಡ, ಟೌನ್ ಘಟಕದ ಅಧ್ಯಕ್ಷ ಕೆ.ಉಮಾಶಂಕರ್, ಜಿಲ್ಲಾ ಮಾಧ್ಯಮ ಸಂಯೋಜಕ ಎನ್.ಕೃಷ್ಣೇಗೌಡ, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರಾದ ಕೆ.ಬಿ.ರಾಮು, ಚಿಕ್ಕಣ್ಣ, ರಾಜೇಶ್, (ಲೋಕೇಶ್), ಹಿರೇಮರಳಿ ಸ್ವಾಮಿ ಇತರರಿದ್ದರು.