ವಿಜಯಪುರ: ರಾಜ್ಯದಲ್ಲಿ ಬೆಸ್ತರ ಸಮುದಾಯ ಇದುವರೆಗೂ ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದು, ಸಮುದಾಯ ಸಂಘಟಿತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬೆಸ್ತರ ಸಂಘದ ಜಿಲ್ಲಾಧ್ಯಕ್ಷ ಎಂ.ಮುನಿಕೃಷ್ಣಪ್ಪ ಹೇಳಿದರು.

ಪಟ್ಟಣದಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು, ಬೆಸ್ತರ ಸಮುದಾಯ ಶೈಕ್ಷಣಿಕವಾಗಿ, ರಾಜಕೀಯವಾಗಿ ಬೆಳೆಯಬೇಕು. ಸಂಘಟನೆ ಬಲಪಡಿಸಬೇಕು. ರಾಜಕಾರಣಿಗಳಿಗೆ ನಮ್ಮ ಸಮುದಾಯ ಇದೆ ಎನ್ನುವ ನೆನಪೇ ಇಲ್ಲದಂತಾಗಿದೆ. ನಾವೂ ಕೂಡಾ ಇದ್ದೇವೆ ಎನ್ನುವುದನ್ನು ನೆನಪು ಮಾಡಬೇಕಾಗಿದೆ. ಸಮುದಾಯದ ಪ್ರತಿಯೊಬ್ಬರೂ ಸಂಘಟನೆಗಾಗಿ ಕೆಲಸ ಮಾಡಬೇಕು ಎಂದು ಹೇಳಿದರು.ಸಾಂಸ್ಕೃತಿಕ ಕಾರ್ಯದರ್ಶಿ ವೆಂಕಟೇಶ್ ಮಾತನಾಡಿ, ಬೆಸ್ತರ ಸಮುದಾಯ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬರುತ್ತಿದೆ. ಆದರೆ, ಸಮುದಾಯದ ಜನರು ತಮ್ಮ ಬದುಕು ಕಟ್ಟಿಕೊಳ್ಳಲು ಅಗತ್ಯವಿರುವ ಯಾವುದೇ ಸೌಲಭ್ಯಗಳು ಲಭಿಸುತ್ತಿಲ್ಲ. ಆದ್ದರಿಂದ ಸರ್ಕಾರ ಈಗಲಾದರೂ ನಮ್ಮ ಸಮುದಾಯದ ಕಡೆಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಪದಾಧಿಕಾರಿಗಳು: ಜಿಲ್ಲಾ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ, ಗೌರವಾಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷ ಲೋಕೇಶ್, ಕಾರ್ಯಾಧ್ಯಕ್ಷ ಆರ್.ಆಂಜಿನಪ್ಪ, ಕಾರ್ಯದರ್ಶಿ ಪ್ರದೀಪ್, ಸಹಕಾರ್ಯದರ್ಶಿ ಅರುಣ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ವೆಂಕಟೇಶ್, ಸಂಘಟನಾ ಗುರುಪ್ರಕಾಶ್, ಖಜಾಂಚಿ ವೆಂಕಟೇಶ್, ಪಿಳ್ಳರಾಜು, ವಿಶ್ವನಾಥ್, ಅಜಯ್, ಮಂಜುನಾಥ್, ಟಿ.ಮಂಜುನಾಥ್, ಎಸ್.ಎಂ.ಮಂಜುನಾಥ್ ಆಯ್ಕೆಯಾಗಿದ್ದಾರೆ.