ಸಾರಾಂಶ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಎಚ್.ಎಸ್.ಅನಿಲ್ ಕುಮಾರ್ ವಹಿಸಿಕೊಂಡಿದ್ದರು. ಇವರು ಮಾತನಾಡಿ, ನೂತನವಾಗಿ ಪ್ರಥಮ ಪಿಯುಸಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಸ್ವಾಗತವನ್ನು ಕೋರಿದರು. ಹಾಗೂ 2024-25ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಪ್ರಥಮ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ನಗದು ಪುರಸ್ಕಾರವನ್ನು ನೀಡಿ ಸನ್ಮಾನಿಸಿದ್ದು ಅತ್ಯಂತ ವಿಶೇಷವೆನಿಸಿತು.
ಕನ್ನಡಪ್ರಭ ವಾರ್ತೆ ಹಾಸನ
ನಗರದ ಬ್ರಿಲಿಯಂಟ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಅಭಿವಿನ್ಯಾಸ (ಓರಿಯೆಂಟೇಶನ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಎಚ್.ಎಸ್.ಅನಿಲ್ ಕುಮಾರ್ ವಹಿಸಿಕೊಂಡಿದ್ದರು. ಇವರು ಮಾತನಾಡಿ, ನೂತನವಾಗಿ ಪ್ರಥಮ ಪಿಯುಸಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಸ್ವಾಗತವನ್ನು ಕೋರಿದರು. ಹಾಗೂ 2024-25ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಪ್ರಥಮ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ನಗದು ಪುರಸ್ಕಾರವನ್ನು ನೀಡಿ ಸನ್ಮಾನಿಸಿದ್ದು ಅತ್ಯಂತ ವಿಶೇಷವೆನಿಸಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಸಿದ್ಧ ಉಪನ್ಯಾಸಕರು , ಸ್ಪರ್ಧಾತ್ಮಕ ಪರೀಕ್ಷೆಗಳಾದ JEE/NEET/KCET ತಜ್ಞರಾದ ಪ್ರೊ. ಬಸವಕಿರಣ್ ಆಗಮಿಸಿದ್ದರು. ಇವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮುಂದಿನ ಪಿಯುಸಿ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯಾವ ರೀತಿ ತಯಾರಾಗಬೇಕು. ಮಕ್ಕಳಿಗೆ ಏಕಾಗ್ರತೆ, ಆಸಕ್ತಿ, ಜೀವನದ ಸಂಸ್ಕಾರ ಮುಂತಾದವುಗಳಿಂದ ಯಶಸ್ಸು ಸಾಧ್ಯ ಎಂಬುದನ್ನು ತಮ್ಮ ವಿಶೇಷ ಉಪನ್ಯಾಸದ ಮೂಲಕ ತಿಳಿಸಿದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರೊ.ಜವರಾಜೇಗೌಡ, ಉಪ ಪ್ರಾಂಶುಪಾಲರಾದ ಪುಷ್ಪ, ವ್ಯವಸ್ಥಾಪಕರಾದ ರಘುಕುಮಾರ್ ಹಾಗೂ ಬೋಧಕ ಹಾಗೂ ಬೋಧಕೇತರ ವರ್ಗದವರು ಹಾಜರಿದ್ದು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.