ಬ್ರಹ್ಮಾವರ: ಇಲ್ಲಿನ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ದೀಪವನ್ನು ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಅತ್ಯಾಧುನಿಕ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸುವುದು ನಮ್ಮ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಕಡಿಮೆ ಅಂಕ ಬಂದಾಗ ದೂಷಿಸದೆ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಅವರ ಪ್ರತಿಯೊಂದು ಶಾಲಾ ಚಟುವಟಿಕೆಗಳಲ್ಲಿ ಪೋಷಕರು ಭಾಗವಹಿಸಿ ಅಸ್ವಾದಿಸಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಮಕ್ಕಳನ್ನು ಉತ್ತಮ ಶಾಲೆಗೆ ಸೇರಿಸಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಮುಗಿಯುವುದಿಲ್ಲ. ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಜೊತೆ ನಿರಂತರ ಕೈ ಜೋಡಿಸಬೇಕು. ತಂದೆ-ತಾಯಿಯರೇ ಮೊದಲ ಗುರುಗಳಾಗಿದ್ದು ಮಕ್ಕಳ ಅಭಿಪ್ರಾಯಗಳನ್ನು ಆಲಿಸಬೇಕು. ಕಷ್ಟದ ಸಂದರ್ಭದಲ್ಲಿ ಆತ್ಮಸ್ಥೈರ್ಯವನ್ನು ತುಂಬಬೇಕು. ಸೋಲನ್ನು ಸ್ವೀಕರಿಸುವ, ನಿರಂತರ ಸ್ವ ಅಧ್ಯಯನ ಮಾಡುವ ಹವ್ಯಾಸವನ್ನು ಬೆಳೆಸಬೇಕೆಂದರು. ಪೋಷಕರು ಸಂಸ್ಥೆಯ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.
ಶಿಕ್ಷಕರು ಶಾಲಾ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನೂಷಾ ಸುಬ್ರಹ್ಮಣ್ಯಂ, ಉಪಾಧ್ಯಕ್ಷೆ ರೇವತಿ ಕೆ, ಪೋಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಬ್ರಹ್ಮಾವರ ಜಿಎಂ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಪೋಷಕರಿಗೆ ಓರಿಯಂಟೇಶನ್ ಕಾರ್ಯಕ್ರಮ
ಬ್ರಹ್ಮಾವರ: ಇಲ್ಲಿನ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.