ಸಾರಾಂಶ
ಬಂಟ್ವಾಳ ಶಿಕ್ಷಣ ಇಲಾಖೆಯ ಸೂಚನೆಯಂತೆ ಸುಮಾರು ೨೫ಕ್ಕೂ ಅಧಿಕ ಶಾಲೆಗಳ ೧೫೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು, ಮಧ್ಯಾಹ್ನದ ಬಳಿಕ ಸುಮಾರು ಒಂದು ಸಾವಿರಕ್ಕೂ ಅಧಿಕ ಸಾರ್ವಜನಿಕರು ಒರಿಗಾಮಿ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಸ್ತು ಸಂಗ್ರಹಾಲಯ ಮ್ಯೂಸಿಯಂ ಆನ್ ವೀಲ್ಸ್ ಕಾರ್ಯಕ್ರಮದ ಒರಿಗಾಮಿ ಕಲಾಕೃತಿಗಳನ್ನೊಳಗೊಂಡ ಒರಿಗಮಿ ಬಸ್ ಬಿ.ಸಿ.ರೋಡಿಗೆ ಆಗಮಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಕಲಾಕೃತಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಬಂಟ್ವಾಳ ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ವಿವಿಧ ರೋಟರಿ ಕ್ಲಬ್‌ಗಳ ಸಹಕಾರದೊಂದಿಗೆ ಸಂಸಾರ ಜೋಡುಮಾರ್ಗ ಆಯೋಜನೆಯಲ್ಲಿ ಈ ಕಾರ್ಯಕ್ರಮ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಒರಿಗಾಮಿ ರಾಕೆಟ್ ಹಾರಿಸುವ ಮೂಲಕ ಒರಿಗಾಮಿ ಬಸ್ ವೀಕ್ಷಣೆಗೆ ಚಾಲನೆ ನೀಡಿ, ಮಾತನಾಡಿದರು.ಕಾರ್ಯಕ್ರಮದಲ್ಲಿ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ, ರೋಟರಿ ಇಂಟರ್ಯಾಕ್ಟ್ ಚೇರ್ಮನ್ ಮಂಜುನಾಥ ಆಚಾರ್ಯ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣಕುಮಾರ್ ಪೂಂಜ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಬಾಳಿಗಾ, ಮ್ಯೂಸಿಯಂನ ಚಿನ್ಮಯಿ ಉಪಸ್ಥಿತರಿದ್ದರು.ಬಂಟ್ವಾಳ ಶಿಕ್ಷಣ ಇಲಾಖೆಯ ಸೂಚನೆಯಂತೆ ಸುಮಾರು ೨೫ಕ್ಕೂ ಅಧಿಕ ಶಾಲೆಗಳ ೧೫೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು, ಮಧ್ಯಾಹ್ನದ ಬಳಿಕ ಸುಮಾರು ಒಂದು ಸಾವಿರಕ್ಕೂ ಅಧಿಕ ಸಾರ್ವಜನಿಕರು ಒರಿಗಾಮಿ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಿ.ಸಿ.ರೋಡಿನ ಸ್ತ್ರೀಶಕ್ತಿ ಭವನದಲ್ಲಿ ವಿದ್ಯಾರ್ಥಿಗಳಿಗೆ ಒರಿಗಾಮಿ ಕಲಾಕೃತಿಗಳ ತಯಾರಿಕಾ ಕಾರ್ಯಾಗಾರವನ್ನೂ ಆಯೋಜಿಸಲಾಗಿತ್ತು.ಮ್ಯೂಸಿಯಂನ ಕಶ್ಯಪಿ ಪ್ರಸ್ತಾವನೆಗೈದರು. ಶಿಕ್ಷಕ ಅರವಿಂದ ಕುಡ್ಲ ಸ್ವಾಗತಿಸಿದರು. ಸಂಸಾರ ಜೋಡುಮಾರ್ಗ ತಂಡದ ನಿರ್ದೇಶಕ ಮೌನೇಶ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.